Ind vs Aus test | ಮತ್ತಷ್ಟು ತಾರಕಕ್ಕೇರಿದ ಬೂಮ್ರಾ Vs ಕೊನ್‌ಸ್ಟಸ್ ಫೈಟ್!

Date:

ಬಾರ್ಡರ್-ಗವಾಸ್ಕರ್ ಟ್ರೋಫಿ ಟೂರ್ನಿ ನಿರ್ಣಾಯಕ ಹಂತಕ್ಕೆ ತಲುಪಿದೆ. ಈಗಾಗಲೇ ಈ ಟೂರ್ನಿಯಲ್ಲಿ ಆಸ್ಟ್ರೇಲಿಯಾ 2-1 ರಿಂದ ಮುನ್ನಡೆಯಲ್ಲಿರುವುದರಿಂದ, ಸಿಡ್ನಿಯಲ್ಲಿ ನಡೆಯುತ್ತಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯವನ್ನು ಭಾರತ ಭಾರಿ ಅಂತರದಿಂದ ಗೆದ್ದರಷ್ಟೆ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ ಫೈನಲ್‌ಗೆ ಪ್ರವೇಶ ಪಡೆಯುವ ಸಾಧ್ಯತೆಯಿದೆ.

- Advertisement -

ಇದರ ಮಧ್ಯೆ, ಮೊದಲ ದಿನದ ಆಟದ ಅಂತ್ಯದ ವೇಳೆಗೆ ಟೀಮ್ ಇಂಡಿಯಾ ನಾಯಕ ಜಸ್‌ಪ್ರೀತ್ ಬೂಮ್ರಾ ಹಾಗೂ ಆಸ್ಟ್ರೇಲಿಯಾದ ಯುವ ಆಟಗಾರ ಸ್ಯಾಮ್ ಕೊನ್‌ಸ್ಟಸ್ ನಡುವಿನ ಕಾಳಗ ನೆಟ್ಟಿಗರ ಗಮನ ಸೆಳೆದಿದೆ. ಕಳೆದ ಮೆಲ್ಬೋರ್ನ್ ಪಂದ್ಯದಲ್ಲಷ್ಟೇ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿರುವ 19 ವರ್ಷದ ಕೊನ್‌ಸ್ಟಸ್ ಮೊದಲ ಇನಿಂಗ್ಸ್‌ನಲ್ಲೇ ಅರ್ಧ ಶತಕ ಗಳಿಸಿ ಭರವಸೆ ಮೂಡಿಸಿದ್ದರು. ಭಾರತದ ವೇಗಿ ಬೂಮ್ರಾರನ್ನು ಸಿಕ್ಸರ್‌ಗಳ ಮೂಲಕ ದಂಡಿಸುವ ಜೊತೆಗೆ ವಿರಾಟ್ ಕೊಹ್ಲಿ ಜೊತೆ ಮಾತಿನ ಚಕಮಕಿ ನಡೆಸಿದ್ದರು. ಇದರಿಂದಾಗಿ ಈ ಯುವ ಆಟಗಾರನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ಆದರೆ ಎರಡನೇ ಇನಿಂಗ್ಸ್‌ನಲ್ಲಿ ಬೂಮ್ರಾ ಕ್ಲೀನ್ ಬೋಲ್ಡ್ ಮಾಡುವ ಮೂಲಕ ಕೊನ್‌ಸ್ಟಸ್‌ಗೆ ತಿರುಗೇಟು ನೀಡಿದ್ದರು. ಅಲ್ಲಿಂದ ಆರಂಭವಾದ ಇವರಿಬ್ಬರ ನಡುವಿನ ಕ್ರೀಡಾ ಪೈಪೋಟಿ ಕೊನೆಯ ಪಂದ್ಯದಲ್ಲೂ ಮುಂದುವರಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಸಿಡ್ನಿಯಲ್ಲಿ ನಡೆಯುತ್ತಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಭಾರತ ಮೊದಲ ಇನಿಂಗ್ಸ್‌ನಲ್ಲಿ ಕೇವಲ 185ಕ್ಕೆ ಆಲೌಟ್ ಆಯಿತು. ಇದಾದ ಬಳಿಕ ಆಸ್ಟ್ರೇಲಿಯಾ ತನ್ನ ಮೊದಲ ಇನಿಂಗ್ಸ್ ಪ್ರಾರಂಭಿಸಿತು. ಬೂಮ್ರಾ ಎಸೆದ ಮೊದಲ ಎಸೆತವನ್ನೇ ಬೌಂಡರಿ ಗೆರೆ ದಾಟಿಸುವ ಮೂಲಕ ಕೊನ್‌ಸ್ಟಸ್ ಅಬ್ಬರದ ಇನ್ನಿಂಗ್ಸ್ ಕಟ್ಟುವ ಸೂಚನೆ ನೀಡಿದರು. ದಿನದಾಟದ ಕೊನೆಯ ಓವರ್‌ನಲ್ಲೂ ನಾನ್-ಸ್ಟ್ರೈಕರ್‌ನಲ್ಲಿದ್ದ ಕೊನ್‌ಸ್ಟಸ್, ಬೂಮ್ರಾ ಜತೆ ಜಗಳಕ್ಕಿಳಿದರು. ಈ ಸಂದರ್ಭದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು. ಮಧ್ಯ ಪ್ರವೇಶಿಸಿದ ಅಂಪೈರ್ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಈ ಸುದ್ದಿ ಓದಿದ್ದೀರಾ? ಮಹಿಳಾ ವಿಶ್ವ ಚೆಸ್‌ ಬ್ಲಿಟ್ಜ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಆರ್ ವೈಶಾಲಿಗೆ ಕಂಚು

ಇದಕ್ಕೆ ಉತ್ತರವಾಗಿ ದಿನದಾಟದ ಕೊನೆಯ ಎಸೆತದಲ್ಲಿ ಕೇವಲ ಎರಡು ರನ್ ಗಳಿಸಿದ್ದ ಆಸೀಸ್‌ನ ಉಸ್ಮಾನ್ ಖ್ವಾಜಾ ವಿಕೆಟ್ ಉರುಳಿಸುವ ಮೂಲಕ ಭಾರತದ ಪಾಳಯದಲ್ಲಿ ಸಂಭ್ರಮಕ್ಕೆ ಕಾರಣರಾದರು. ಉಸ್ಮಾನ್ ಕ್ಯಾಚ್ ಹಿಡಿಯುತ್ತಿದ್ದಂತೆಯೇ ಭಾರತದ ಆಟಗಾರರು ಕೊನ್‌ಸ್ಟಸ್ ಅವರತ್ತ ತೆರಳಿ ದಿಟ್ಟಿಸಿ ನೋಡುತ್ತಾ ಏಟಿಗೆ ಎದುರೇಟು ನೀಡಿದರು.

ಇದೇ ವೇಳೆ ಬೂಮ್ರಾ ಕೊನ್‌ಸ್ಟಸ್ ಅವರತ್ತ ತೆರಳಿ ದಿಟ್ಟಿಸಿ ನೋಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ. ನಾಳೆ ಇಬ್ಬರು ಮತ್ತೆ ಮುಖಾಮುಖಿ ಆಗಲಿದ್ದು, ಯಾರು ಮೇಲುಗೈ ಸಾಧಿಸಬಹುದು ಎಂಬ ಕುತೂಹಲ ಕ್ರಿಕೆಟ್ ಪ್ರೇಮಿಗಳನ್ನು ಕಾಡುತ್ತಿದೆ. ಒಟ್ಟಿನಲ್ಲಿ ಇವರಿಬ್ಬರ ನಡುವಿನ ಪೈಪೋಟಿ, ಸಿಡ್ನಿ ಪಂದ್ಯವನ್ನು ಮತ್ತಷ್ಟು ರೋಚಕವನ್ನಾಗಿಸಲಿದೆ.

WhatsApp Image 2025 01 01 at 15.46.25
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...