ಐಸಿಸಿ ರ‍್ಯಾಂಕಿಂಗ್‌ ಪ್ರಕಟ: ಹಿನ್ನಡೆ ಅನುಭವಿಸಿದ ಬೂಮ್ರಾ, ಕೊಹ್ಲಿ, ಅಶ್ವಿನ್

Date:

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ಹೊಸ ರ‍್ಯಾಂಕಿಂಗ್ ಪಟ್ಟಿಯಲ್ಲಿ ಬೌಲಿಂಗ್‌ ವಿಭಾಗದಲ್ಲಿ ಭಾರತದ ಜಸ್ಪ್ರೀತ್ ಬೂಮ್ರಾ ಅವರನ್ನು ಹಿಂದಿಕ್ಕಿರುವ ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ ಅಗ್ರಸ್ಥಾನ ಅಲಂಕರಿಸಿದ್ದಾರೆ.

- Advertisement -

ಇದರೊಂದಿಗೆ ಬೂಮ್ರಾ ಅವರಿಗೆ ಅಗ್ರಸ್ಥಾನ ನಷ್ಟವಾಗಿದೆ. ಎರಡು ಸ್ಥಾನಗಳ ಕುಸಿತ ಕಂಡಿರುವ ಬೂಮ್ರಾ 3ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಮತ್ತೊಂದೆಡೆ ಕಗಿಸೊ ರಬಾಡ ಮೂರು ಸ್ಥಾನಗಳ ಬಡ್ತಿ ಪಡೆದು ಮೊದಲ ಸ್ಥಾನಕ್ಕೇರಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ರಬಾಡ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಲ್ಲಿ 300 ವಿಕೆಟ್‌ಗಳ ಸಾಧನೆ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಭಾರತ ತಂಡದ ಸ್ಪಿನ್ ತಾರೆಗಳಾದ ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜ ತಲಾ ಎರಡು ಸ್ಥಾನಗಳ ಕುಸಿತ ಕಂಡಿದ್ದು, ಅನುಕ್ರಮವಾಗಿ ನಾಲ್ಕು ಹಾಗೂ ಎಂಟನೇ ಸ್ಥಾನದಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಟೆಸ್ಟ್ ಸರಣಿ | ಭಾರತಕ್ಕೆ ಹೀನಾಯ ಸೋಲು; ನ್ಯೂಜಿಲೆಂಡ್‌ಗೆ ಐತಿಹಾಸಿಕ ಜಯ

ಬ್ಯಾಟರ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಎಡಗೈ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಒಂದು ಸ್ಥಾನ ಏರಿಕೆ ಕಂಡಿದ್ದು,ಮೂರನೇ ಸ್ಥಾನಕ್ಕೆ ತಲುಪಿದ್ದಾರೆ. ಆದರೆ ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ಮೊದಲ 10ರ ಪಟ್ಟಿಯಿಂದ ಹೊರಬಿದ್ದಿದ್ದಾರೆ.

ಪಂತ್ ಐದು ಸ್ಥಾನಗಳ ಕುಸಿತ ಕಂಡು 11 ಮತ್ತು ಕೊಹ್ಲಿ ಆರು ಸ್ಥಾನಗಳ ಕುಸಿತ ಕಂಡು 14ನೇ ಸ್ಥಾನಕ್ಕೆ ಕುಸಿದಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಇಂಗ್ಲೆಂಡ್‌ನ ಜೋರೂಟ್ ಅಗ್ರಸ್ಥಾನದಲ್ಲಿದ್ದು, ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ಎರಡನೇ ಸ್ಥಾನದಲ್ಲಿದ್ದಾರೆ.

 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ವಿರಾಟ್ ‘ವಿಶ್ವ’ರೂಪ: 15 ಸಾವಿರ ರನ್ ಗಡಿ ದಾಟಿ ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ

ಕೇರಳದ ತಿರುವನಂತಪುರದಲ್ಲಿರುವ ಗ್ರೀನ್‌ಫೀಲ್ಡ್‌ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವೆಸ್ಟ್ ಇಂಡೀಸ್...