19 ಸಾವಿರ ರನ್‌ಗಳ ಸರದಾರ ಕೇನ್ ವಿಲಿಯಮ್ಸನ್ ಕ್ರಿಕೆಟ್‌ಗೆ ಗುಡ್‌ ಬೈ!

Date:

ವಿಶ್ವ ಕ್ರಿಕೆಟ್‌ನ ಅತ್ಯಂತ ಶಾಂತ ಸ್ವಭಾವದ ಮತ್ತು ಯಶಸ್ವಿ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ಕೇನ್ ವಿಲಿಯಮ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಬರೋಬ್ಬರಿ 16 ವರ್ಷಗಳ ಕಾಲ ನ್ಯೂಜಿಲೆಂಡ್ ಕ್ರಿಕೆಟ್‌ನ ಆಧಾರಸ್ತಂಭವಾಗಿದ್ದ ಈ ದಂತಕತೆ, ತಕ್ಷಣದಿಂದ ಜಾರಿಗೆ ಬರುವಂತೆ ಆಟಕ್ಕೆ ವಿದಾಯ ಹೇಳುವ ಮೂಲಕ ಕ್ರಿಕೆಟ್ ಪ್ರಿಯರಿಗೆ ಶಾಕ್‌ ನೀಡಿದ್ದಾರೆ.

- Advertisement -

ಪ್ರಸ್ತುತ ಇಂಗ್ಲೆಂಡ್ ಪ್ರವಾಸದಲ್ಲಿರುವ ನ್ಯೂಜಿಲೆಂಡ್ ತಂಡ ಟೆಸ್ಟ್ ಸರಣಿ ಆಡುತ್ತಿದ್ದು, ಈ ತಿಂಗಳ ಆರಂಭದಲ್ಲಿ ಲಾರ್ಡ್ಸ್ ಮೈದಾನದಲ್ಲಿ ನಡೆದ ಟೆಸ್ಟ್ ಪಂದ್ಯವೇ ವಿಲಿಯಮ್ಸನ್ ಪಾಲಿಗೆ ಕೊನೆ ಪಂದ್ಯವಾಗಿದೆ. ಈ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ದೊಡ್ಡ ಮೊತ್ತ ಗಳಿಸಲು ಸಾಧ್ಯವಾಗದಿದ್ದರೂ, 35 ವರ್ಷದ ವಿಲಿಯಮ್ಸನ್ ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲೇ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಆಗಿ ಮೈದಾನದಿಂದ ಹೊರನಡೆದಿದ್ದಾರೆ. ಅವರು ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ 378 ಅಂತಾರಾಷ್ಟ್ರೀಯ ಪಂದ್ಯಗಳಿಂದ 48 ಶತಕಗಳು ಹಾಗೂ 6 ದ್ವಿಶತಕಗಳು ಸೇರಿದಂತೆ ಒಟ್ಟು 19,346 ರನ್ ಕೊಳ್ಳೆ ಹೊಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

2010ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಕೇನ್ ವಿಲಿಯಮ್ಸನ್, ಅಬ್ಬರದ ಬ್ಯಾಟಿಂಗ್ ಮಾಡದಿದ್ದರೂ ಕೇವಲ ತಮ್ಮ ತಾಳ್ಮೆ ಮತ್ತು ಕ್ರೀಡಾ ತಂತ್ರದ ಮೂಲಕವೇ ಜಗತ್ತನ್ನು ಸೆಳೆದರು. ಕಷ್ಟದ ಸಮಯದಲ್ಲಿ ಕ್ರೀಸ್‌ಗೆ ಬಂದು ಗೋಡೆಯಂತೆ ನಿಂತು ಪಂದ್ಯದ ಗತಿಯನ್ನೇ ಬದಲಿಸುವ ಅದ್ಭುತ ಕಲೆ ಅವರಿಗೆ ಒಲಿದಿತ್ತು. ಇವರ ಸ್ಥಿರ ಪ್ರದರ್ಶನವೇ ಕಿವೀಸ್ ತಂಡಕ್ಕೆ ನೂರಾರು ಗೆಲುವುಗಳನ್ನು ತಂದುಕೊಟ್ಟಿದೆ. ಬ್ಯಾಟರ್ ಆಗಿ ಮಾತ್ರವಲ್ಲದೆ ನಾಯಕನಾಗಿಯೂ ವಿಲಿಯಮ್ಸನ್ ಸಾಧನೆ ಐತಿಹಾಸಿಕವಾದದ್ದು. ಇವರ ಅದ್ಭುತ ನಾಯಕತ್ವದಲ್ಲೇ ನ್ಯೂಜಿಲೆಂಡ್ ತಂಡ 2019ರ ಒನ್ ಡೇ ವಿಶ್ವಕಪ್‌ನಲ್ಲಿ ರನ್ನರ್ ಅಪ್ ಆಗಿ ಹೊರಹೊಮ್ಮಿತು. ನಂತರ 2021ರ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಭಾರತವನ್ನು ಸೋಲಿಸಿ ನ್ಯೂಜಿಲೆಂಡ್‌ಗೆ ಚೊಚ್ಚಲ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮುಕುಟ ತೊಡಿಸಿದ್ದು ವಿಲಿಯಮ್ಸನ್ ವೃತ್ತಿಜೀವನದ ಅತ್ಯುನ್ನತ ಮೈಲಿಗಲ್ಲು.

ಇದನ್ನೂ ಓದಿ: ಯುದ್ಧದ ಕಾರ್ಮೋಡಗಳ ನಡುವೆ ಕ್ರೀಡಾ ಕೋಲ್ಮಿಂಚು; ಮೆಕ್ಸಿಕೋದಲ್ಲಿ ಫುಟ್‌ಬಾಲ್ ವಿಶ್ವಕಪ್‌ ಮಹಾ ಸಂಭ್ರಮ

ಕೇನ್ ವಿಲಿಯಮ್ಸನ್ ಅವರನ್ನು ಕೇವಲ ರನ್ ಅಥವಾ ದಾಖಲೆಗಳಿಗಾಗಿ ಮಾತ್ರವಲ್ಲ, ಅವರ ಅದ್ಭುತ ಕ್ರೀಡಾ ಮನೋಭಾವ ಹಾಗೂ ವೈಯಕ್ತಿಕ ಗೌರವಗಳಿಗಾಗಿಯೂ ಇಡೀ ವಿಶ್ವ ಪ್ರೀತಿಸುತ್ತದೆ. ಅವರು ತಮ್ಮ ವೃತ್ತಿಜೀವನದಲ್ಲಿ 2015ರ ಐಸಿಸಿ ವರ್ಷದ ಕ್ರಿಕೆಟಿಗ, 2019ರ ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿ ಹಾಗೂ ಪ್ರತಿಷ್ಠಿತ ‘ಸರ್ ರಿಚರ್ಡ್ ಹ್ಯಾಡ್ಲಿ’ ಪದಕವನ್ನು ನಾಲ್ಕು ಬಾರಿ ಮುಡಿಗೇರಿಸಿಕೊಂಡ ಹೆಗ್ಗಳಿಕೆ ಹೊಂದಿದ್ದಾರೆ. ಸೋಲಿರಲಿ, ಗೆಲುವಿರಲಿ ಮುಖದಲ್ಲಿ ಸದಾ ಕಿರುನಗು ಹಾಗೂ ಶಾಂತಚಿತ್ತದಿಂದ ವರ್ತಿಸುತ್ತಿದ್ದ ಅವರನ್ನು ಎದುರಾಳಿ ತಂಡದ ಆಟಗಾರರೂ ಅತಿಯಾಗಿ ಗೌರವಿಸುತ್ತಿದ್ದರು.

ವಿಲಿಯಮ್ಸನ್ ನಿವೃತ್ತಿ ಕುರಿತು ಮಾತನಾಡಿರುವ ನ್ಯೂಜಿಲೆಂಡ್ ಮುಖ್ಯ ಕೋಚ್ ರಾಬ್ ವಾಲ್ಟರ್ಸ್, ಕೇನ್ ಅವರಂತಹ ಕ್ರಿಕೆಟಿಗರು ಸಿಗುವುದು ಅಪರೂಪದಲ್ಲಿ ಅಪರೂಪ ಎಂದು ಕೊಂಡಾಡಿದ್ದಾರೆ. ನ್ಯೂಜಿಲೆಂಡ್ ಕ್ರಿಕೆಟ್ ಸಂಸ್ಕೃತಿಯ ಮೇಲೆ ಅವರು ಬೀರಿದ ಪ್ರಭಾವ ಮತ್ತು ಅವರು ಬಿಟ್ಟುಹೋಗಿರುವ ಪರಂಪರೆ ಮುಂಬರುವ ಹಲವು ವರ್ಷಗಳವರೆಗೆ ದಾರಿದೀಪವಾಗಿರುತ್ತದೆ ಎಂದು ಅವರು ಭಾವನಾತ್ಮಕವಾಗಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...