ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

Date:

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್‌ಸಿಎ) ಇಂದು ಸರ್ಕಾರ ಅಧಿಕೃತವಾಗಿ ಅನುಮತಿ ನೀಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

- Advertisement -

ಕಳೆದ ಜೂನ್ 4, 2025ರಂದು ಆರ್‌ಸಿಬಿ ತಂಡದ ಟ್ರೋಫಿ ಸಂಭ್ರಮಾಚರಣೆ ವೇಳೆ ಕ್ರೀಡಾಂಗಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟು, ಹತ್ತಾರು ಮಂದಿ ಗಾಯಗೊಂಡಿದ್ದರು. ಈ ದುರಂತದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಲ್ಲ ರೀತಿಯ ಕ್ರಿಕೆಟ್ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

​ಚಿನ್ನಸ್ವಾಮಿ ಕ್ರೀಡಾಂಗಣದಿಂದ ಬೇರೆಡೆಗೆ ಸ್ಥಳಾಂತರಿಸಿತ್ತು. ದುಲೀಪ್ ಟ್ರೋಫಿ, ಭಾರತ-ದಕ್ಷಿಣ ಆಫ್ರಿಕಾ ಪುರುಷರ ‘ಎ’ ಸರಣಿ, ವಿಜಯ್ ಹಜಾರೆ ಟ್ರೋಫಿ ಮತ್ತು 2025ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿ (ಫೈನಲ್ ಪಂದ್ಯ ಸೇರಿ) ಈ ಮೈದಾನದಿಂದ ಕೈತಪ್ಪಿದ್ದವು.

​ಈ ದುರಂತದ ಪರಿಣಾಮವಾಗಿ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಹಲವು ಪ್ರಮುಖ ಟೂರ್ನಿಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣದಿಂದ ಬೇರಡೆಗೆ ಸ್ಥಳಾಂತರಿತ್ತು. ದುಲೀಪ್ ಟ್ರೋಫಿ, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್, ಮಹಿಳಾ ಹಾಗೂ ಪುರುಷರ ವಿಶ್ವಕಪ್, ವಿಜಯ್‌ ಹಜಾರೆ, ರಣಜಿ ಟ್ರೋಫಿ ಈ ಮೈದಾನದಿಂದ ಕೈತಪ್ಪಿದ್ದವು.

ದುರಂತದ ತನಿಖೆಗಾಗಿ ರಚಿಸಲಾಗಿದ್ದ ‘ನ್ಯಾಯಮೂರ್ತಿ ಮೈಕೆಲ್ ಡಿಕುನ್ಹಾ’ ಸಮಿತಿಯ ವರದಿಯ ಶಿಫಾರಸುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಷರತ್ತಿನ ಮೇರೆಗಷ್ಟೇ ಇದೀಗ ಪಂದ್ಯಗಳ ಆಯೋಜನೆಗೆ ಮರಳಿ ಅವಕಾಶ ಕಲ್ಪಿಸಲಾಗಿದೆ.
“ಬೆಂಗಳೂರಿನ ಐತಿಹಾಸಿಕ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ಸರ್ಕಾರದ ಗೃಹ ಇಲಾಖೆಯು ಕೆಎಸ್‌ಸಿಎಗೆ ಅನುಮತಿ ನೀಡಿದೆ ಎಂಬುದನ್ನು ತಿಳಿಸಲು ಸಂತೋಷವಾಗುತ್ತಿದೆ” ಎಂದು ಕೆಎಸ್‌ಸಿಎ ವಕ್ತಾರ ವಿನಯ್ ಮೃತ್ಯುಂಜಯ ತಿಳಿಸಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನು ಓದಿದ್ದೀರಾ? ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

​ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ವಿಧಿಸಿರುವ ನಿರ್ದಿಷ್ಟ ನಿಯಮ ಮತ್ತು ಷರತ್ತುಗಳ ಪಾಲನೆಗೆ ಒಳಪಟ್ಟು ಈ ಅನುಮತಿ ನೀಡಲಾಗಿದ್ದು, ನಿಗದಿಪಡಿಸಿದ ಎಲ್ಲಾ ಷರತ್ತುಗಳನ್ನು ಪೂರೈಸುವ ವಿಶ್ವಾಸವನ್ನು ಮೃತ್ಯುಂಜಯ ವ್ಯಕ್ತಪಡಿಸಿದ್ದಾರೆ.

​ಭಾರತದ ಮಾಜಿ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ನೇತೃತ್ವದ ನೂತನ ಕೆಎಸ್‌ಸಿಎ ಆಡಳಿತ ಮಂಡಳಿಯು, ಕ್ರೀಡಾಂಗಣಕ್ಕೆ ಕ್ರಿಕೆಟ್ ಅನ್ನು ಮರಳಿ ತರಲು ಕಳೆದ ತಿಂಗಳಿನಿಂದ ವಿವಿಧ ಸರ್ಕಾರಿ ಏಜೆನ್ಸಿಗಳೊಂದಿಗೆ ನಿರಂತರ ಚರ್ಚೆ ನಡೆಸುತ್ತಿತ್ತು.

​”ಸಂಸ್ಥೆಯು ಈಗಾಗಲೇ ತಜ್ಞರ ಪರಿಶೀಲನಾ ಸಮಿತಿಯ ಮುಂದೆ ವಿವರವಾದ ಅನುಸರಣಾ ನೀಲನಕ್ಷೆಯನ್ನು ಮಂಡಿಸಿದೆ. ಭದ್ರತೆ, ಸುರಕ್ಷತೆ ಮತ್ತು ಜನದಟ್ಟಣೆ ನಿರ್ವಹಣಾ ಕ್ರಮಗಳನ್ನು ಚಾಚೂತಪ್ಪದೆ ಜಾರಿಗೊಳಿಸಲು ನಾವು ಬದ್ಧರಾಗಿದ್ದೇವೆ” ಎಂದು ವಿನಯ್ ಮೃತ್ಯುಂಜಯ ಭರವಸೆ ನೀಡಿದರು.

​ರಾಜ್ಯ ಸರ್ಕಾರದ ಈ ಅನುಮತಿಗೂ ಮುನ್ನ, ತವರಿನ ಪಂದ್ಯಗಳನ್ನು ತಟಸ್ಥ ಸ್ಥಳಗಳಲ್ಲಿ ಆಡುವ ಬಗ್ಗೆ ಬಲವಾದ ಚರ್ಚೆಗಳಿದ್ದವು. ಆರ್‌ಸಿಬಿ ಉಪಾಧ್ಯಕ್ಷ ರಾಜೇಶ್ ಮೆನನ್ ಅವರು ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರನ್ನು ಭೇಟಿಯಾಗಿ, ನವ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಎರಡು ಪಂದ್ಯಗಳನ್ನು ಆಡುವ ಕುರಿತು ಮಾತುಕತೆ ನಡೆಸಿದ್ದರು. ಐಪಿಎಲ್‌ ವೇಳಾಪಟ್ಟಿ ಪ್ರಕಟವಾದ ನಂತರ 7 ಪಂದ್ಯಗಳಲ್ಲಿ 2 ಪಂದ್ಯಗಳನ್ನು ಹೊರಗೆ ಆಡಲು ಅನುಮತಿ ನೀಡಲಾಗಿತ್ತು.

​ಇದೀಗ ರಾಜ್ಯ ಸರ್ಕಾರ ಅಧಿಕೃತವಾಗಿ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ, ಆರ್‌ಸಿಬಿ ತನ್ನ 2026ರ ಐಪಿಎಲ್‌ನ ಎಲ್ಲಾ ತವರಿನ ಪಂದ್ಯಗಳನ್ನು ಚಿನ್ನಸ್ವಾಮಿಯಲ್ಲೇ ಆಡಲಿದೆಯೇ ಅಥವಾ ವೇಳಾಪಟ್ಟಿ ಪ್ರಕಟವಾದಂತೆ ರಾಯ್‌ಪುರದಲ್ಲಿ ಎರಡು ಪಂದ್ಯಗಳನ್ನು ಆಡುವ ನಿರ್ಧಾರಕ್ಕೆ ಬದ್ಧವಾಗಿರುತ್ತದೆಯೇ ಎಂಬುದನ್ನು ಕಾದುನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...