ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

Date:

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಸ್ಕಾಟ್ಲ್ಯಾಂಡ್ ಹಾಗೂ ಐರ್ಲ್ಯಾಂಡ್ ತಂಡಗಳಿಗೆ ಪ್ರಾಯೋಜಕತ್ವ ವಹಿಸಲಿದೆ.

ವೆಸ್ಟ್‌ ಇಂಡೀಸ್‌ ಹಾಗೂ ಅಮೆರಿಕದಲ್ಲಿ ಜೂನ್‌ 1 ರಿಂದ 29ರವರೆಗೆ ಟಿ20 ವಿಶ್ವಕಪ್‌ ನಡೆಯಲಿದ್ದು, ಟೂರ್ನಿಯಲ್ಲಿ ಈ ವರ್ಷ 20 ಕ್ರಿಕೆಟ್ ತಂಡಗಳು ಭಾಗವಹಿಸಲಿವೆ.

ಪ್ರಾಯೋಜಕತ್ವ ತಂಡಗಳಿಗೆ ಕೆಎಂಎಫ್ ನಂದಿನಿ ಸ್ಪ್ಲಾಶ್ ಎಂಬ ಶಕ್ತಿಭರಿತ ಪಾನೀಯವನ್ನು ಅಮೆರಿಕಾದ ಮಾರುಕಟ್ಟೆಗೆ ಟೂರ್ನಿಯ ಸಂದರ್ಭದಲ್ಲಿ ಪರಿಚಯಿಸಲಿದೆ ಎಂದು ಕೆಎಂಎಫ್‌ನ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಗೆಲುವಿಗೆ ಕಾರಣವಾದ 20 ರನ್ ಸಿಡಿಸಿದ ಧೋನಿ; ಐಪಿಎಲ್‌ನಲ್ಲಿ ವಿಶೇಷ ದಾಖಲೆ

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ಟಿ20 ವಿಶ್ವಕಪ್‌ನಲ್ಲಿ ಪ್ರಾಯೋಜಕತ್ವ ವಹಿಸುತ್ತಿರುವುದು ನಿಜ. ವಿಶ್ವಕಪ್‌ನಲ್ಲಿ ಎರಡು ತಂಡಗಳಿಗೆ ನಾವು ಪ್ರಾಯೋಜಕತ್ವ ವಹಿಸುತ್ತಿದ್ದೇವೆ. ಶಕ್ತಿ ಅಧಾರಿತ ಪಾನೀಯಗಳನ್ನು ನಾವು ಪರಿಚಯಿಸಲು ಬಯಸುತ್ತೇವೆ. ಈ ವಿಶ್ವಕಪ್‌ನಲ್ಲಿ ನಾವು ನಮ್ಮ ಉತ್ಪನ್ನಗಳನ್ನು ಗಮನಹರಿಸುವುದರೊಂದಿಗೆ ಕೆಎಂಎಫ್‌ ವಿಶ್ವದಾದ್ಯಂತ ಪ್ರಚಾರಗೊಳ್ಳಲಿದೆ ಎಂದು ತಿಳಿಸಿದರು.

ಜೂನ್‌ 1ರಿಂದ ಆಡುವ ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಅಮೆರಿಕ ಹಾಗೂ ಕೆನಡಾ ದೇಶಗಳು ಮೊದಲ ಪಂದ್ಯವನ್ನು ಆಡಲಿವೆ. ಒಂದು ತಿಂಗಳು ನಡೆಯುವ ಟೂರ್ನಿಯಲ್ಲಿ ಒಟ್ಟು 9 ಸ್ಥಳಗಳಲ್ಲಿ 55 ಪಂದ್ಯಗಳು ನಡೆಯಲಿವೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ : ಕೆ.ಫಣಿರಾಜ್

ದಶಕಗಳ ಹಿಂದೆ ನಡೆದಿರುವ ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ. ಆದರೆ...

ಟಿ20 ವಿಶ್ವಕಪ್ | ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ ಅಮೆರಿಕಕ್ಕೆ ಹಾರಿದ ಟೀಮ್ ಇಂಡಿಯಾದ ಮೊದಲ ಬ್ಯಾಚ್

ಜೂನ್ 2ರಿಂದ ಆರಂಭವಾಗಲಿರುವ 9ನೇ ಆವೃತ್ತಿಯ ಟಿ20 ವಿಶ್ವಕಪ್‌ಗಾಗಿ ಟೀಮ್ ಇಂಡಿಯಾ...

ಮಾಜಿ ಶಾಸಕ ಕೆ ರಘುಪತಿ ಭಟ್ ಬಿಜೆಪಿಯಿಂದ ಉಚ್ಚಾಟನೆ

ವಿಧಾನ ಪರಿಷತ್ ಟಿಕೆಟ್ ನೀಡದ ಕಾರಣಕ್ಕಾಗಿ ಬಿಜೆಪಿಯೊಳಗೆ ಬಂಡಾಯ ಎದ್ದು, ನೈಋತ್ಯ...

ಮೋದಿ ತಮ್ಮನ್ನು ತಾವೇ ದೇವದೂತ ಎನ್ನುತ್ತಿರುವುದು ಮೂಢನಂಬಿಕೆಯ ಸ್ಪಷ್ಟ ಹೆಜ್ಜೆ: ಸಚಿವ ಹೆಚ್ ಸಿ ಮಹದೇವಪ್ಪ

ಬುದ್ಧ ಹುಟ್ಟಿದ ನಾಡಿನಲ್ಲಿ, ವಿಜ್ಞಾನ ತಂತ್ರಜ್ಞಾನವು ಇಷ್ಟೊಂದು ಮುಂದುವರೆದ ಕಾಲದಲ್ಲಿ ಪ್ರಧಾನಿ...