ಅಪ್ರಾಪ್ತ ಕ್ರಿಕೆಟ್ ಆಟಗಾರ್ತಿಯರ ಮೇಲೆ ಕೇರಳ ಕ್ರಿಕೆಟ್ ಕೋಚ್ ಒಬ್ಬ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಕೇರಳ ಮಾನವ ಹಕ್ಕುಗಳ ಆಯೋಗ ಪ್ರಕರಣ ದಾಖಲಿಸಿದೆ. ಆರೋಪಿ ಸದ್ಯ ಹುದ್ದೆಯಲ್ಲಿಲ್ಲ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಾನವ ಹಕ್ಕುಗಳ ಆಯೋಗ ಅಪ್ರಾಪ್ತೆಯರ ದೂರಿನ ದಾಖಲು ಹಾಗೂ ವರದಿಯ ಘಟನೆಗಳಿಗೆ ಕಾರಣವಾದ ಸಂದರ್ಭಗಳ ಬಗ್ಗೆ ವಿವರಣೆ ನೀಡುವಂತೆ ಕೇರಳ ರಾಜ್ಯ ಕ್ರಿಕೆಟ್ ಸಂಸ್ಥೆಗೆ ನೋಟಿಸ್ ನೀಡಿದೆ.
ಮಹಿಳಾ ಆಯೋಗವು ಮಾಧ್ಯಮ ವರದಿಗಳ ಆಧಾರದ ಮೇಲೆ ಸ್ವತಃ ಮಧ್ಯ ಪ್ರವೇಶಿಸಿ ದೂರು ದಾಖಲಿಸಿಕೊಂಡಿದೆ.
ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿ ಮನು ಎಂಬಾತ ಕೇರಳ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ 10 ವರ್ಷಗಳವರೆಗೂ ಕೋಚ್ ಆಗಿದ್ದು, ಪ್ರಸ್ತುತ ಪೋಕ್ಸೋ ಕಾಯ್ದೆಯಡಿ ಬಂಧಿತನಾಗಿ ಸೆರೆವಾಸ ಅನುಭವಿಸುತ್ತಿದ್ದಾನೆ.
ಈ ಸುದ್ದಿ ಓದಿದ್ದೀರಾ? ಟೀಂ ಇಂಡಿಯಾ ವಿಜಯೋತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡ 11 ಮಂದಿ ಆಸ್ಪತ್ರೆಗೆ ದಾಖಲು
ಮೊದಲ ದೂರಿನ ಆಧಾರದಲ್ಲಿ ಸಂತ್ರಸ್ತೆಯೊಬ್ಬರು ತಮಿಳುನಾಡಿನ ತೇನ್‌ಕಸಿ ಜಿಲ್ಲೆಯವರು ಎಂದು ಹೇಳಲಾಗಿದೆ. ಕ್ರಿಕೆಟ್ ತರಬೇತಿಗೆ ಬರುತ್ತಿದ್ದ ಈ ಸಂತ್ರಸ್ತೆಯ ಬೆತ್ತಲೆ ಚಿತ್ರಗಳನ್ನು ತೆಗೆದು ಲೈಂಗಿಕವಾಗಿ ದೌರ್ಜನ್ಯವೆಸಗುತ್ತಿದ್ದ ಎಂದು ಆರೋಪಿಸಲಾಗಿದೆ.
ಘಟನೆಯ ನಂತರ ಸಂತ್ರಸ್ತೆಯು ಮಾನಸಿಕವಾಗಿ ಕುಗ್ಗಿ ಹೋಗಿದ್ದು, ಪೋಷಕರ ವಿಚಾರಣೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣದ ಬಗ್ಗೆ ತಮಗೆ ಯಾವುದೇ ಮಾಹಿತಿಯಿರಲಿಲ್ಲ ಎಂದು ಕೇರಳ ಕ್ರಿಕೆಟ್ ಸಂಸ್ಥೆ ತಿಳಿಸಿರುವುದನ್ನು ಮಹಿಳಾ ಆಯೋಗ ತಿಳಿಸಿದೆ.
ಒಬ್ಬ ಸಂತ್ರಸ್ತೆ ದೂರು ನೀಡಿದ ನಂತರ ಹಲವು ಅಪ್ರಾಪ್ತೆಯರು ಕೋಚ್‌ನಿಂದ ತಮಗಾದ ದೌರ್ಜನ್ಯದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ
