‘ಕೊಲ್ಲಬೇಕೆನಿಸಿದರೆ ನಮ್ಮನ್ನು ಕೊಂದುಬಿಡಿ’; ಪೊಲೀಸರ ಅಮಾನವೀಯ ವರ್ತನೆಗೆ ವಿನೇಶ್ ಫೋಗಟ್ ಆಕ್ರೋಶ

Date:

ಗುರುವಾರ ತಡರಾತ್ರಿ ಪ್ರತಿಭಟನಾ ನಿರತ ಕುಸ್ತಿಪಟುಗಳ ಬಗ್ಗೆ ದೆಹಲಿ ಪೊಲೀಸರ ಹಲ್ಲೆಯಿಂದ ಆಘಾತಕ್ಕೊಳಗಾದ ವಿಶ್ವ ಚಾಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಕಣ್ಣೀರಿಡುತ್ತಾ ಮಾತನಾಡಿದ ಅವರು, “ನೀವು ನಮ್ಮನ್ನು ಕೊಲ್ಲಲು ಬಯಸಿದರೆ ಕೊಂದುಬಿಡಿ, ಆದರೆ ಈ ರೀತಿ ಹಿಂಸಿಸಬೇಡಿ. ಇಂತಹ ದಿನ ನೋಡಲು ನಾವು ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದೇವೆಯೇ? ನಾವು ನಮ್ಮ ಆಹಾರವನ್ನೂ ಸಹ ಸೇವಿಸಿಲ್ಲ. ಪ್ರತಿಯೊಬ್ಬ ಪುರುಷನಿಗೆ ಮಹಿಳೆಯರನ್ನು ನಿಂದಿಸುವ ಹಕ್ಕಿದೆಯೇ? ಈ ಪೊಲೀಸರು ಬಂದೂಕು ಹಿಡಿದಿದ್ದಾರೆ, ಅವರು ನಮ್ಮನ್ನು ಕೊಲ್ಲಬಹುದು” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಬಿಜ್ಜಳನ ಆಸ್ಥಾನದಲ್ಲಿದ್ದ ಕೊಂಡಿ ಮಂಚಣ್ಣ ಯಾರು? ಆತ ‘ಬಸವ’...

ಬಸವಣ್ಣನವರ ವಿರೋಧಿಯಾಗಿ ಇತಿಹಾಸದಲ್ಲಿ ಗುರುತಿಸಿಕೊಂಡಿರುವ ‘ಕೊಂಡಿ ಮಂಚಣ್ಣ’ ಈಗ ಮತ್ತೆ ಕರ್ನಾಟಕದ ಸಾರ್ವಜನಿಕ ಚರ್ಚೆಯ ಕೇಂದ್ರಕ್ಕೆ ಬಂದಿದ್ದಾನೆ. ಸಚಿವ ಎಂ.ಬಿ. ಪಾಟೀಲ್ ಅವರು ಶಂಕರ್ ಬಿದರಿ ಮತ್ತು ಮನು ಬಳಿಗಾರ್ ಅವರನ್ನು ‘21ನೇ...

ರಾಹುಲ್ ವಿರುದ್ಧ ಮೊಕದ್ದಮೆ, ಸೋನಿಯಾಗೆ ಕಾನೂನು ನೋಟಿಸ್: ಸಾವರ್ಕರ್–ಗೋಡ್ಸೆ...

ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯ ಮೂಲಕ ವಿವಾದ ಸೃಷ್ಟಿಸಿದ್ದ ಪುಣೆಯ ಸಾತ್ಯಕಿ ಸಾವರ್ಕರ್, ಇದೀಗ ಸೋನಿಯಾ ಗಾಂಧಿ ಅವರ ಪುಸ್ತಕದ ಐತಿಹಾಸಿಕ ಉಲ್ಲೇಖಗಳನ್ನು ಸಹಿಸದೆ ಕಾನೂನು ನೋಟಿಸ್ ನೀಡಿ ಮತ್ತೆ ಪ್ರಚಾರಕ್ಕಿಳಿದಿದ್ದಾನೆ....

ಮಹಿಳಾ ಪೊಲೀಸ್ ಅಧಿಕಾರಿಗಳ ಗೈರು ಹಾಜರಿಯನ್ನು ಪ್ರಶ್ನಿಸಿದ ವಿನೇಶ್​​, “ಮಹಿಳಾ ಪೊಲೀಸ್ ಅಧಿಕಾರಿಗಳು ಎಲ್ಲಿದ್ದರು? ಪುರುಷ ಅಧಿಕಾರಿಗಳು ನಮ್ಮನ್ನು ಹೇಗೆ ತಳ್ಳುತ್ತಾರೆ? ನಾವು ಅಪರಾಧಿಗಳಲ್ಲ ನಾವು ಇದೆಲ್ಲವನ್ನು ಸಹಿಸುವುದಿಲ್ಲ” ಎಂದಿದ್ದಾರೆ.

ಕುಸ್ತಿಪಟುಗಳು ರಾತ್ರಿ ಮಲಗಲು ಮಡಚಬಹುದಾದ ಮಂಚಗಳನ್ನು ತರಲು ಹೋಗುತ್ತಿದ್ದಾಗ ಘಟನೆ ನಡೆದಿದೆ. ಪೊಲೀಸರು ಅನುಚಿತವಾಗಿ ವರ್ತಿಸಿದ್ದಲ್ಲದೆ, ಮಹಿಳಾ ಕುಸ್ತಿಪಟುಗಳನ್ನು ನಿಂದಿಸಿದ್ದಾರೆ. ಮಹಿಳೆಯರೊಂದಿಗೆ ಗೌರವವಾಗಿ ನಡೆದುಕೊಳ್ಳಬೇಕಾದ ಸಮಾಜದಲ್ಲಿ ಪೊಲೀಸರು ಕೆಟ್ಟದಾಗಿ ವರ್ತಿಸಿದ್ದಾರೆ ಎಂದು ವಿನೇಶ್ ಫೋಗಟ್ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದೆಹಲಿ | ಜಂತರ್‌ಮಂತರ್‌ನಲ್ಲಿ ಪ್ರತಿಭಟನಾನಿರತ ಕುಸ್ತಿಪಟುಗಳು ಹಾಗೂ ಪೊಲೀಸರ ನಡುವೆ ತಿಕ್ಕಾಟ

“ಮಳೆ ಬಂದ ಕಾರಣ ಹಾಸಿಗೆಗಳು ಒದ್ದೆಯಾಗಿದ್ದವು. ಆದ್ದರಿಂದ ನಾವು ಮಲಗಲು ಮಡಚುವ ಹಾಸಿಗೆಗಳನ್ನು ತರುತ್ತಿದ್ದೆವು. ಆದರೆ, ಪೊಲೀಸರು ಅದಕ್ಕೆ ಅವಕಾಶ ನೀಡಲಿಲ್ಲ. ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ನಿಂದಿಸಿದ ಪೊಲೀಸ್ ಅಧಿಕಾರಿ ಧರ್ಮೇಂದ್ರ ಅವರು, ನಮ್ಮೊಂದಿಗೆ ಜಗಳವಾಡಿದರು. ಅವರು ಅಪರಾಧಿಗಳಲ್ಲ ಮತ್ತು ಅಂತಹ ಅಗೌರವಕ್ಕೆ ಅರ್ಹರೂ ಅಲ್ಲ” ಎಂದು ಮಾಜಿ ಕುಸ್ತಿಪಟು ರಾಜ್‌ವೀರ್ ತಿಳಿಸಿದ್ದಾರೆ.

ಪ್ರತಿಭಟನಾ ಸ್ಥಳದಲ್ಲಿ ತಡರಾತ್ರಿ ನಡೆದ ವಾಗ್ವಾದದ ಬಗ್ಗೆ ಪ್ರತಿಕ್ರಿಯಿಸಿದ ದೆಹಲಿ ಪೊಲೀಸರು, ಕುಸ್ತಿಪಟುಗಳ ಬೆಂಬಲಿಗರು ಹಾಸಿಗೆಗಳನ್ನು ತೆಗೆದುಕೊಳ್ಳದಂತೆ ತಡೆದ ನಂತರ ಆಕ್ರಮಣಕಾರಿಯಾಗಿ ವರ್ತಿಸಿದರು ಎಂದು ತಿಳಿಸಿದ್ದಾರೆ.

ಕಳೆದ ಜನವರಿ ತಿಂಗಳಿನಲ್ಲಿ ಭಾರತದ ಅಗ್ರಗಣ್ಯ ಕುಸ್ತಿಪಟುಗಳಾದ ವಿನೀಶ್ ಫೋಗಟ್, ಭಜರಂಗ್ ಪೂನಿಯಾ ಹಾಗೂ ಸಾಕ್ಷಿ ಮಲ್ಲಿಕ್ ರೆಸ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ ಅಧ್ಯಕ್ಷರಾಗಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪವನ್ನು ಮಾಡಿದ್ದರು. ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸಿ ಎಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದರು. ದೆಹಲಿ ಪೊಲೀಸರಿಗೆ ದೂರನ್ನೂ ಸಹ ನೀಡಿದ್ದರು.

ಆದರೆ ದೂರು ನೀಡಿ ಮೂರು ತಿಂಗಳುಗಳು ಕಳೆದರೂ ಸಹ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿರಲಿಲ್ಲ. ಈಗ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿದ ನಂತರ ದೆಹಲಿ ಪೊಲೀಸರು ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸತತ ಎರಡನೇ ಅವಧಿಗೆ ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಅಧ್ಯಕ್ಷರಾಗಿ ಜಯ್ ಶಾ ಅವರು ಸತತ...

IND vs NZ | 3-1 ಅಂತರದಲ್ಲಿ ಏಕದಿನ ಸರಣಿ ಗೆದ್ದ ಭಾರತ; ಕೊನೆಯ ಪಂದ್ಯದಲ್ಲಿ 22 ರನ್‌ಗಳ ರೋಚಕ ಜಯ!

ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯನ್ನು ಭಾರತ ತಂಡ...

ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸಿದ ಮೋಹಿತ್ ಉಲ್ವಾ; ಪಾಕ್ ಮಣಿಸಿ 9ನೇ ಬಾರಿ ಅಂಡರ್-19 ಏಷ್ಯಾ ಕಪ್ ಗೆದ್ದ ಭಾರತ

ಕೊನೆಯ ಎಸೆತದವರೆಗೂ ತೀವ್ರ ಕುತೂಹಲ ಕೆರಳಿಸಿದ್ದ 'ಎಸಿಸಿ ಪುರುಷರ ಅಂಡರ್-19 ಏಷ್ಯಾ...

ನ್ಯೂಜಿಲೆಂಡ್ ಟೆಸ್ಟ್ ಸರಣಿ: ಕುಲದೀಪ್ ಯಾದವ್‌ಗೆ ಕೊಕ್, ಗುರ್ನೂರ್ ಬ್ರಾರ್‌ಗೆ ಮಣೆ!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ...