ಐಪಿಎಲ್ | ಕೆಕೆಆರ್‌ಗೆ ಜಯ: ಮುಂಬೈ ಇಂಡಿಯನ್ಸ್ ಪ್ಲೇ ಆಫ್ ಕನಸಿಗೆ ತಣ್ಣೀರೆರಚಿದ ಮಿಚೆಲ್ ಸ್ಟಾರ್ಕ್

Date:

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 51ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡವನ್ನು ಸಂಘಟಿತ ಬೌಲಿಂಗ್‌ ದಾಳಿಯ ಮೂಲಕ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಸೋಲಿಸಿದ್ದು, ಪ್ಲೇ ಆಫ್ ಕನಸಿಗೆ ತಣ್ಣೀರೆರಚಿದೆ.

- Advertisement -

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದಿದ್ದ ಕೆಕೆಆರ್ ತಂಡವು, ಮುಂಬೈ ಪರ ಜಸ್ಪ್ರೀತ್ ಬುಮ್ರಾ ಮತ್ತು ನುವಾನ್ ತುಷಾರ ಬೌಲಿಂಗ್ ದಾಳಿಯ ನಡುವೆಯೂ ನಿಗದಿತ 20 ಓವರ್‌ಗಳಲ್ಲಿ ವೆಂಕಟೇಶ್‌ ಅಯ್ಯರ್‌ ಗಳಿಸಿದ ಅರ್ಧಶತಕದ ನೆರವಿನಿಂದ ಕೆಕೆಆರ್ 169 ರನ್ ಗಳಿಸಲಷ್ಟೆ ಶಕ್ತವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಈ ಸಾಧಾರಣ ಗುರಿಯನ್ನು ಬೆನ್ನಟ್ಟುವಲ್ಲಿ ಎಡವಿದ ಹಾರ್ದಿಕ್ ಪಾಂಡ್ಯಾ ನೇತೃತ್ವದ ಮುಂಬೈ ತಂಡ, ಮಿಚೆಲ್ ಸ್ಟಾರ್ಕ್ ಅವರ ಮಾರಕ ಬೌಲಿಂಗ್‌ಗೆ 145 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು. ಆ ಮೂಲಕ 24 ರನ್‌ಗಳಿಂದ ಸೋಲೊಪ್ಪಿಕೊಂಡಿತು.

ಕೆಕೆಆರ್ ತಂಡದ ಕರಾರುವಕ್ಕಾದ ಬೌಲಿಂಗ್‌ಗೆ ರನ್ ಗಳಿಸಲು ಪರದಾಡಿದ ಮುಂಬೈ ಬ್ಯಾಟರ್‌ಗಳು, ವಿಕೆಟ್ ಒಪ್ಪಿಸುವ ಮೂಲಕ ಪೆವಿಲಿಯನ್ ಪರೇಡ್ ನಡೆಸಿದರು.

ಮುಂಬೈ ಪರ ಆರಂಭಿಕರಾಗಿ ಕಣಕ್ಕೀಳಿದ ಇಶಾನ್‌ ಕಿಶಾನ್ ಮತ್ತು ರೋಹಿತ್‌ ಶರ್ಮಾ ಜೋಡಿ ಮತ್ತೆ ಉತ್ತಮ ರನ್‌ ಕಲೆ ಹಾಕುವುದಲ್ಲಿ ಎಡವಿತು. ಒಂದು ಸಿಕ್ಸರ್‌ ಹಾಗೂ ಬೌಂಡರಿಗಷ್ಟೆ ಸೀಮಿತವಾದ ಇಶಾನ್ (13) ಮಿಚೆಲ್‌ ಸ್ಟಾರ್ಕ್‌ ಬೌಲಿಂಗ್‌ನಲ್ಲಿ ವಿಕೆಟ್‌ ಕಳೆದುಕೊಂಡರು. ಬಳಿಕ ರೋಹಿತ್‌ ಶರ್ಮಾ ಕೂಡ 11 ರನ್‌ಗೆ ಸುನಿಲ್‌ ನರೈನ್‌ ಅವರಿಗೆ ಔಟ್‌ ಆದರು.

ತಂಡಕ್ಕೆ ಆಸರೆಯಾಗಬೇಕಿದ್ದ ನಾಯಕ ಹಾರ್ದಿಕ್‌ ಪಾಂಡ್ಯ ಕೇವಲ ಒಂದು ರನ್‌ಗೆ ಆಂಡ್ರೆ ರಸೆಲ್‌ ಬೌಲಿಂಗ್‌ನಲ್ಲಿ ವಿಕೆಟ್‌ ಕಳೆದುಕೊಂಡರು.

ಮುಂಬೈನ ಸ್ಟಾರ್ ಸ್ಟಾರ್ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಅರ್ಧಶತಕ ಗಳಿಸಿ(56 ರನ್) ತಂಡವನ್ನು ಗೆಲುವಿಮ ಕಡೆಗೆ ಕೊಂಡೊಯ್ಯಲು ಶ್ರಮಿಸಿದರು. ಆದರೆ ಅದಕ್ಕೆ ಆ್ಯಂಡ್ರೂ ರಸೆಲ್ ಅವಕಾಶ ನೀಡಲಿಲ್ಲ. ತನ್ನ ಬೌಲಿಂಗ್‌ನಲ್ಲಿ ಸೂರ್ಯ ಕುಮಾರ್ ಕುಮಾರ್ ಅವರ ವಿಕೆಟ್ ಪಡೆಯುವ ಮೂಲಕ ಪಂದ್ಯವನ್ನು ಕೆಕೆಆರ್ ಕಡೆಗೆ ತಿರುಗಿಸಿದರು.

ಕೊನೆಯಲ್ಲಿ ಮುಂಬೈ ಗೆಲುವಿಗೆ ಹೋರಾಟ ನಡೆಸಿದ ಟಿಮ್‌ ಡೇವಿಡ್‌ 24 ರನ್‌ಗಳಿಸಿ ಮಿಚೆಲ್‌ ಸ್ಟಾರ್ಕ್‌ಗೆ ವಿಕೆಟ್‌ ನೀಡಿ ಹೊರ ನಡೆದರು. ಬಳಿಕ ಬಂದ ಪಿಯೂಷ್‌ ಚಾವ್ಲಾ ಹಾಗು ಕ್ರೀಸ್‌ನಲ್ಲಿದ್ದ ಜೆರಾಲ್ಡ್ ಕೋಟ್ಜಿ ಅವರನ್ನು ಮಿಚೆಲ್‌ ಸ್ಟಾರ್ಕ್‌ ಔಟ್‌ ಮಾಡಿದರು. ಹೀಗಾಗಿ ಮುಂಬೈ 18.5 ಓವರ್‌ಗಳಲ್ಲಿ ಅಲೌಟ್‌ ಆಗುವ ಮೂಲಕ ಕೆಕೆಆರ್‌ ಎದುರು ಪಂದ್ಯವನ್ನು 24 ರನ್‌ಗಳಿಂದ ಸೋಲಬೇಕಾಯಿತು.

ಮುಂಬೈನ‌ ವಾಂಖೆಡೆ ಸ್ಟೇಡಿಯಂನಲ್ಲಿ ಬರೋಬ್ಬರಿ 12 ವರ್ಷಗಳ ಬಳಿಕ ಕೆಕೆಆರ್ ತಂಡವು ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದೆ.

ಕೆಕೆಆರ್‌ ಪರ ಮಿಚೆಲ್ ಸ್ಟಾರ್ಕ್ 4 ವಿಕೆಟ್‌ ಪಡೆದರೆ, ಸುನಿಲ್ ನರೈನ್, ಆಂಡ್ರೆ ರಸೆಲ್ ಮತ್ತು ವರುಣ್ ಚಕ್ರವರ್ತಿ 2 ವಿಕೆಟ್‌ ಕಬಳಿಸುವ ಮೂಲಕ ಕೆಕೆಆರ್‌ ಗೆಲುವಿನಲ್ಲಿ ತಮ್ಮದೇ ಕೊಡುಗೆ ನೀಡಿದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...