ಐಪಿಎಲ್ 2024 | ಸಾಲ್ಟ್ ಅಮೋಘ ಆಟ: 4ನೇ ಗೆಲುವು ದಾಖಲಿಸಿದ ಕೆಕೆಆರ್

Date:

ಆರಂಭಿಕ ಆಟಗಾರ ಫಿಲ್ ಸಾಲ್ಟ್ ಅಮೋಘ ಆಟದಿಂದ ಕೋಲ್ಕತ್ತಾ ನೈಟ್‌ ರೈಡರ್ಸ್ ತಂಡ ಲಖನೌ ಸೂಪರ್‌ ಜೈಂಟ್ಸ್‌ ವಿರುದ್ಧ 8 ವಿಕೆಟ್‌ಗಳ ಜಯ ಸಾಧಿಸಿತು.

- Advertisement -

ಈಡನ್‌ ಗಾರ್ಡನ್‌ನಲ್ಲಿ ನಡೆದ ಐಪಿಎಲ್‌ 2024ನೇ ಆವೃತ್ತಿಯ 28ನೇ ಪಂದ್ಯದಲ್ಲಿ ಲಖನೌ ನೀಡಿದ್ದ 162 ಗುರಿಯನ್ನು ಬೆನ್ನಟ್ಟಿದ ಕೆಕೆಆರ್ 15.4 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮೊದಲ ಮೂರು ಓವರ್‌ಗಳಲ್ಲಿ ಸ್ಪೋಟಕ ಆಟಗಾರರಾದ ಸುನಿಲ್ ನರೈನ್‌ ಹಾಗೂ ಆಂಗ್ಕ್ರಿಶ್ ರಘುವಂಶಿ ಅವರ ವಿಕೆಟ್ ಕಳೆದುಕೊಂಡು ಕೆಕೆಆರ್‌ ಆರಂಭಿಕ ಆಘಾತ ಅನುಭವಿಸಿತ್ತು. ಆರಂಭಿಕ ಆಟಗಾರ ಫಿಲ್ ಸಾಲ್ಟ್ ಹಾಗೂ ನಾಯಕ ಶ್ರೇಯಸ್‌ ಅಯ್ಯರ್‌ ಅವರ ಮೂರನೇ ವಿಕೆಟ್‌ಗೆ ಪೇರಿಸಿದ 120 ರನ್‌ಗಳ ಜೊತೆಯಾಟ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತು.

ಬಿರುಸಿನ ಆಟವಾಡಿದ ಫಿಲ್‌ ಸಾಲ್ಟ್  47 ಚೆಂಡುಗಳಲ್ಲಿ 14 ಬೌಂಡರಿ ಹಾಗೂ 3 ಸಿಕ್ಸ್‌ರ್‌ಗಳೊಂದಿಗೆ 89 ರನ್‌ ಚಚ್ಚಿದರು. ಫಿಲ್‌ಗೆ ಜೊತೆ ನೀಡಿದ ನಾಯಕ ಶ್ರೇಯಸ್‌ ಅಯ್ಯರ್  38 ಚೆಂಡುಗಳಲ್ಲಿ 6 ಬೌಂಡರಿಗಳೊಂದಿಗೆ 38 ರನ್‌ ಗಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ

ಈ ಗೆಲುವಿನೊಂದಿಗೆ ಕೆಕೆಆರ್ 4 ಬಾರಿ ಜಯದ ನಗೆ ಬೀರಿ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಲಖನೌ 3 ಗೆಲುವು ಹಾಗೂ ಮೂರು ಸೋಲಿನೊಂದಿಗೆ 5ನೇ ಸ್ಥಾನದಲ್ಲಿದೆ.

ಇದಕ್ಕೂ ಮುನ್ನ ಟಾಸ್‌ ಗೆದ್ದ ಕೆಕೆಆರ್‌ ತಂಡದ ನಾಯಕ ಶ್ರೇಯಸ್‌ ಅಯ್ಯರ್ ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡು ಲಖನೌ ತಂಡವನ್ನು ಬ್ಯಾಟಿಂಗ್‌ ಆಹ್ವಾನಿಸಿದರು.

ಕೆಕೆಆರ್‌ ಬೌಲರ್‌ಗಳ ಎದುರು ಲಖನೌ ಬ್ಯಾಟ್ಸ್‌ಮನ್‌ಗಳು ರನ್‌ ಗಳಿಸಲು ಪರದಾಡಿದರು. ಆರಂಭಿಕ ಆಟಗಾರ ಕ್ವಿಂಟನ್‌ ಡಿಕಾಕ್‌ (10) ಹೆಚ್ಚು ಹೊತ್ತು ನಿಲ್ಲಲಿಲ್ಲ. ದೀಪಕ್‌ ಹೂಡ(8) ಕೂಡ ಸ್ಟಾರ್ಕ್‌ ಬೌಲಿಂಗ್‌ನಲ್ಲಿ ಔಟಾದರು.

ಬಿರುಸಿನ ಆಟವಾಡುವ ಮಾರ್ಕಸ್‌ ಸ್ಟೋನಿಸ್‌ 10 ರನ್‌ ಗಳಿಸಿ ವರುಣ್‌ ಚಕ್ರವರ್ತಿ ಬೌಲಿಂಗ್‌ನಲ್ಲಿ ಪೆವಿಲಿಯನ್‌ಗೆ ತೆರಳಿದರು.

ಕೊನೆಯಲ್ಲಿ 32 ಚೆಂಡುಗಳಲ್ಲಿ 4 ಸಿಕ್ಸರ್, 2 ಸಿಕ್ಸರ್‌ಗಳಿಂದಿಗೆ ಬಿರುಸಿನ ಆಟವಾಡಿದ ನಿಕಲೊಸ್‌ ಪೋರನ್‌, 39 ರನ್‌ ಗಳಿಸಿದ ನಾಯಕ ಕೆ ಎಲ್ ರಾಹುಲ್‌(27 ಎಸೆತ, 3 ಬೌಂಡರಿ, 2 ಸಿಕ್ಸರ್) ಹಾಗೂ 29 ರನ್‌ ಗಳಿಸಿದ ಆಯೂಶ್ ಬದೋನಿ ಅವರ ಆಟದ ನೆರವಿನಿಂದ ಲಖನೌ ಸೂಪರ್‌ ಜೈಂಟ್ಸ್‌ ತಂಡ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 161 ರನ್‌ ಕಲೆ ಹಾಕಿತು.

ಕೆಕೆಆರ್‌ ಪರ ಮಿಷಲ್‌ ಸ್ಟಾರ್ಕ್ 28/3, ವೈಭವ್‌ ಅರೋರಾ, ಸುನಿಲ್ ನರೈನ್, ವರುಣ್ ಚಕ್ರವರ್ತಿ ಹಾಗೂ ಆಂಡ್ರೆ ರಸೆಲ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.

 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...