ಏಪ್ಯಾ ಕಪ್ 2023 | ಮೊದಲ ಎರಡು ಪಂದ್ಯಗಳಿಂದ ಕೆ ಎಲ್ ರಾಹುಲ್ ಔಟ್!

Date:

  • ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡ ಬಿಸಿಸಿಐ
  • ಬುಧವಾರದಿಂದ ಆರಂಭವಾಗಲಿರುವ ಏಪ್ಯಾ ಕಪ್ ಟೂರ್ನಿ

ಬುಧವಾರದಿಂದ ಪ್ರಾರಂಭವಾಗಲಿರುವ ಮಹತ್ವದ ಏಷ್ಯಾ ಕಪ್‌ ಟೂರ್ನಿಯ ಮೊದಲ ಎರಡು ಪಂದ್ಯಗಳಿಂದ ಭಾರತದ ವಿಕೆಟ್‌ಕೀಪರ್, ಬ್ಯಾಟ್ಸ್‌ಮನ್ ಕೆ ಎಲ್ ರಾಹುಲ್ ಹೊರಗುಳಿದಿದ್ದಾರೆ.

- Advertisement -

ಗಾಯದಿಂದ ಚೇತರಿಸಿಕೊಂಡ ನಂತರ ತಂಡದಲ್ಲಿ ಹೆಸರಿಸಲಾದ 31 ವರ್ಷದ ಕನ್ನಡಿಗ ಕೆ ಎಲ್ ರಾಹುಲ್, ಪಾಕಿಸ್ತಾನ ಮತ್ತು ನೇಪಾಳ ವಿರುದ್ಧದ ಮೊದಲ ಎರಡು ಪಂದ್ಯಗಳಿಗೆ ಲಭ್ಯವಿರುವುದಿಲ್ಲ ಎಂದು ಭಾರತ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮಂಗಳವಾರ ಪ್ರಕಟಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದಕ್ಕೂ ಮುನ್ನ ತಂಡವನ್ನು ಪ್ರಕಟಿಸುವ ಸಂದರ್ಭದಲ್ಲಿ ಬಿಸಿಸಿಐ ಮುಖ್ಯ ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್ ಅಗರ್ಕರ್ ಅವರು ಕೆ ಎಲ್ ರಾಹುಲ್ ಸಣ್ಣಪುಟ್ಟ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದ್ದರು.

“ಕೆ ಎಲ್ ರಾಹುಲ್ ನಮ್ಮೊಂದಿಗೆ ಉತ್ತಮವಾಗಿ ಮುನ್ನಡೆಯುತ್ತಿದ್ದಾರೆ. ಆದರೆ ಕ್ಯಾಂಡಿ ಪ್ರವಾಸದ ಮೊದಲ ಭಾಗಕ್ಕೆ ಅವರು ಅಲಭ್ಯರಾಗುತ್ತಾರೆ” ಎಂದು ಪ್ರವಾಸ ಹೊರಡುವ ಮುನ್ನ ಕೋಚ್ ರಾಹುಲ್ ದ್ರಾವಿಡ್ ತಿಳಿಸಿದ್ದಾರೆ.

ರಾಹುಲ್ ಟೂರ್ನಿಯಲ್ಲಿ ಭಾಗವಹಿಸುವ ಕುರಿತು ಸೆಪ್ಟೆಂಬರ್ 4 ರಂದು ಕರೆ ನೀಡಲಾಗುವುದು ಎಂದು ದ್ರಾವಿಡ್ ಮಾಹಿತಿ ನೀಡಿದ್ದಾರೆ.

“ಮುಂದಿನ ಕೆಲವು ದಿನಗಳವರೆಗೆ ‘ನ್ಯಾಷನಲ್ ಕ್ರಿಕೆಟ್ ಅಕಾಡೆಮಿ’ ಅವರನ್ನು ನೋಡಿಕೊಳ್ಳುತ್ತದೆ. ಸೆಪ್ಟೆಂಬರ್ 4ರಂದು ಮರುಮೌಲ್ಯಮಾಪನ ಮಾಡಿದ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದ್ದೇವೆ. ಆದರೆ, ಅವರು ಮೊದಲ ಎರಡು ಪಂದ್ಯಗಳಿಗೆ ಅಲಭ್ಯರಾಗುತ್ತಾರೆ” ದ್ರಾವಿಡ್ ತಿಳಿಸಿದರು.

ಅಲ್ಲದೇ, ಈ ಬಗ್ಗೆ ಬಿಸಿಸಿಐ ಕೂಡ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, ‘ಏಷ್ಯಾ ಕಪ್‌ ಟೂರ್ನಿಯ ಪಾಕಿಸ್ತಾನ ಮತ್ತು ನೇಪಾಳ ವಿರುದ್ಧ ಕೆ ಎಲ್ ರಾಹುಲ್ ಲಭ್ಯವಿರುವುದಿಲ್ಲ’ ಎಂದಿದೆ. ಈ ಹಿನ್ನೆಲೆಯಲ್ಲಿ ಸದ್ಯ ಮೀಸಲು ಆಟಗಾರನಾಗಿ ಪ್ರವಾಸಗೈಯಲಿರುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

ಏಷ್ಯಾ ಕಪ್‌ನ ಮೊದಲ ಪಂದ್ಯವು ಬುಧವಾರ ಮುಲ್ತಾನ್‌ನಲ್ಲಿ ಆತಿಥೇಯ ಪಾಕಿಸ್ತಾನ ಮತ್ತು ನೇಪಾಳ ನಡುವೆ ನಡೆಯಲಿದೆ.

ಟೀಂ ಇಂಡಿಯಾ ಸೆಪ್ಟೆಂಬರ್ 2ರಂದು ಕ್ಯಾಂಡಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...