ತೃತೀಯ ಟೆಸ್ಟ್‌ | ಕೆ ಎಲ್‌ ರಾಹುಲ್ ಔಟ್: ಮತ್ತೋರ್ವ ಕನ್ನಡಿಗನಿಗೆ ಸ್ಥಾನ

Date:

ಇಂಗ್ಲೆಂಡ್ ವಿರುದ್ಧ ಗುಜರಾತ್‌ನ ರಾಜ್‌ಕೋಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದಿಂದ ಕೆ ಎಲ್ ರಾಹುಲ್ ‘ಔಟ್’ ಆಗಿದ್ದಾರೆ. ಅವರ ಸ್ಥಾನಕ್ಕೆ ಮತ್ತೋರ್ವ ಕನ್ನಡಿಗ ದೇವದತ್ತ್ ಪಡಿಕ್ಕಲ್ ಆಯ್ಕೆಯಾಗಿರುವುದಾಗಿ ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

- Advertisement -

ಇಂಗ್ಲೆಂಡ್ ವಿರುದ್ಧ ಈಗಾಗಲೇ ಎರಡು ಟೆಸ್ಟ್ ಪಂದ್ಯಗಳು ಹೈದರಾಬಾದ್ ಹಾಗೂ ವಿಶಾಖಪಟ್ಟಣದಲ್ಲಿ ನಡೆದಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಗೆದ್ದಿದ್ದರೆ, ಎರಡನೇ ಟೆಸ್ಟ್‌ ಅನ್ನು ಟೀಮ್ ಇಂಡಿಯಾ ಗೆಲ್ಲುವ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇನ್ನುಳಿದ ಮೂರು ಟೆಸ್ಟ್ ರಾಜ್‌ಕೋಟ್, ರಾಂಚಿ ಮತ್ತು ಧರ್ಮಶಾಲಾದಲ್ಲಿ ನಡೆಯಲಿದೆ. ಈ ಮೂರೂ ಟೆಸ್ಟ್‌ಗಳಿಗೆ ಕಳೆದ ಶನಿವಾರ ಬಿಸಿಸಿಐ ತಂಡ ಪ್ರಕಟಿಸಿತ್ತು. ಗಾಯದ ಸಮಸ್ಯೆಯಿಂದ ಎರಡನೇ ಟೆಸ್ಟ್‌ ಪಂದ್ಯ ಮಿಸ್ ಮಾಡಿಕೊಂಡಿದ್ದ ಕೆ ಎಲ್ ರಾಹುಲ್ ಹಾಗೂ ಆಲ್‌ರೌಂಡರ್ ರವೀಂದ್ರ ಜಡೇಜಾ ಸ್ಥಾನ ಪಡೆದುಕೊಂಡಿದ್ದರು. ಆದರೆ ಬಿಸಿಸಿಐನ ವೈದ್ಯಕೀಯ ತಂಡವು ಇವರಿಬ್ಬರಿಗೂ ಫಿಟ್‌ನೆಸ್ ಕುರಿತು ವರದಿ ನೀಡಿರಲಿಲ್ಲ.

ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ವೇಳೆ ಬಲಭಾಗದ ತೊಡೆಯ ಸ್ನಾಯು ಸೆಳೆತದ ನೋವಿನಿಂದ ಬಳಲಿದ್ದರು. ಇದರಿಂದ ಗುಣಮುಖರಾಗದ ಹಿನ್ನೆಲೆಯಲ್ಲಿ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಆಡಿರಲಿಲ್ಲ.

ಸಂಪೂರ್ಣ ಗುಣಮುಖರಾಗಲು ಇನ್ನೂ ಕೂಡ ಕೆಲವು ದಿನಗಳ ವಿಶ್ರಾಂತಿಯ ಅವಶ್ಯಕತೆ ಇರುವುದರಿಂದ ಮೂರನೇ ಟೆಸ್ಟ್‌ನಲ್ಲಿ ಆಡಲು ವೈದ್ಯಕೀಯ ತಂಡ ಸೂಚಿಸಿಲ್ಲ ಎಂದು ವರದಿ ಹೇಳಿದೆ. ಈ ನಡುವೆ ಆಲ್‌ರೌಂಡರ್ ಜಡೇಜಾ ಭಾಗವಹಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ.

ಕೆ ಎಲ್ ರಾಹುಲ್ ಸ್ಥಾನಕ್ಕೆ ದೇವದತ್ತ್ ಪಡಿಕ್ಕಲ್
ತೆರವಾಗಲಿರುವ ಕೆ ಎಲ್ ರಾಹುಲ್ ಸ್ಥಾನಕ್ಕೆ ಮತ್ತೋರ್ವ ಕನ್ನಡಿಗ ದೇವದತ್ತ್ ಪಡಿಕ್ಕಲ್ ಆಯ್ಕೆಯಾಗಿದ್ದಾರೆ. ಆದರೆ ಈ ಬಗ್ಗೆ ಬಿಸಿಸಿಐ ಇನ್ನಷ್ಟೇ ಅಧಿಕೃತ ಹೇಳಿಕೆ ನೀಡಬೇಕಿದೆ.

padikkal
ದೇವದತ್ತ್ ಪಡಿಕ್ಕಲ್

ರಣಜಿ ಟ್ರೋಫಿಯಲ್ಲಿ ಪಡಿಕ್ಕಲ್ ಉತ್ತಮ ಪ್ರದರ್ಶನ ನೀಡಿದ್ದರು. ಕರ್ನಾಟಕ ಹಾಗೂ ತಮಿಳುನಾಡು ನಡೆದಿದ್ದ ಪಂದ್ಯದಲ್ಲಿ ಪಡಿಕ್ಕಲ್ 151 ರನ್ ಬಾರಿಸಿದ್ದರು. ಈ ಪಂದ್ಯವನ್ನು ಆಯ್ಕೆಗಾರರ ಸಮಿತಿಯ ಅಧ್ಯಕ್ಷ, ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ಕೂಡ ವೀಕ್ಷಿಸಿದ್ದರು. ಪಂಜಾಬ್ ವಿರುದ್ಧ 193 ರನ್ ಹಾಗೂ ಗೋವಾ ವಿರುದ್ಧ ಕೂಡ 103 ರನ್ ಗಳಿಸುವ ಮೂಲಕ ಗಮನ ಸೆಳೆದಿದ್ದರು. ಈ ಹಿನ್ನೆಲೆಯಲ್ಲಿ ತೆರವಾದ ಕೆ ಎಲ್ ರಾಹುಲ್ ಸ್ಥಾನಕ್ಕೆ ದೇವದತ್ತ್ ಪಡಿಕ್ಕಲ್ ಆಯ್ಕೆಯಾಗಿರುವುದಾಗಿ ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿಯಲ್ಲಿ ಉಲ್ಲೇಖಿಸಿದೆ.

ಇಂಗ್ಲೆಂಡ್ ವಿರುದ್ಧದ ಎಲ್ಲ ಟೆಸ್ಟ್‌ ಪಂದ್ಯಗಳಿಂದಲೂ ಹಿಂದೆ ಸರಿದಿದ್ದ ವಿರಾಟ್ ಕೊಹ್ಲಿ

ವೈಯಕ್ತಿಕ ಕಾರಣಗಳಿಂದ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದ ಟೀಮ್ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ, ಇನ್ನುಳಿದ ಮೂರು ಟೆಸ್ಟ್​ಗಳಲ್ಲಿಯೂ ಕಾಣಿಸಿಕೊಳ್ಳುವುದಿಲ್ಲ ಎಂದು ಬಿಸಿಸಿಐ ಶನಿವಾರ ಅಧಿಕೃತ ಹೇಳಿಕೆ ನೀಡಿತ್ತು.

ಇದನ್ನು ಓದಿದ್ದೀರಾ? 70ರ ದಶಕದ ಕ್ರಿಕೆಟ್ ಪ್ರಿಯರ ಆರಾಧ್ಯ ದೈವ ಜಿಆರ್‌ವಿಗೆ 75ರ ಸಂಭ್ರಮ

“ಟೀಮ್ ಇಂಡಿಯಾದ ಮಾಜಿ ನಾಯಕ ಕೊಹ್ಲಿ, ವೈಯಕ್ತಿಕ ಕಾರಣಗಳಿಂದ ಉಳಿದ ಮೂರು ಟೆಸ್ಟ್‌ಗಳಿಂದ ಹಿಂದೆ ಸರಿಯುವ ನಿರ್ಧಾರದ ಬಗ್ಗೆ ಆಯ್ಕೆದಾರರಿಗೆ ತಿಳಿಸಿದ್ದಾರೆ. ಅವರ ನಿರ್ಧಾರವನ್ನು ನಾವು ಗೌರವಿಸುತ್ತೇವೆ” ಎಂದು ಬಿಸಿಸಿಐ ಮೂರು ಟೆಸ್ಟ್ ಪಂದ್ಯಗಳಿಗೆ ತಂಡ ಪ್ರಕಟಿಸುವಾಗ ತಿಳಿಸಿತ್ತು.

ಸರ್ಫರಾಝ್‌ ಖಾನ್‌ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ

ರಾಜ್‌ಕೋಟ್‌ನ ಮೂರನೇ ಟೆಸ್ಟ್‌ ಕ್ರಿಕೆಟ್‌ನಲ್ಲಿ ಈಗಾಗಲೇ ತಂಡಕ್ಕೆ ಆಯ್ಕೆಯಾಗಿರುವ ಯುವ ಬ್ಯಾಟರ್ ಸರ್ಫರಾಝ್ ಖಾನ್, ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ.

ಯುವ ಆಟಗಾರ ಸರ್ಫರಾಜ್ ಖಾನ್ ವಿಶಾಖಪಟ್ಟಣದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿದ್ದರು. ಆದರೆ ಕೊನೆಯ 11ರಲ್ಲಿ ಸ್ಥಾನ ಪಡೆದಿರಲಿಲ್ಲ. ಇದು ಹಲವರನ್ನು ನಿರಾಸೆಗೆ ದೂಡಿತ್ತು.

ಭಾರತ ಟೆಸ್ಟ್ ತಂಡ ಹೀಗಿದೆ:
ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ದೇವದತ್ತ್ ಪಡಿಕ್ಕಲ್, ರಜತ್ ಪಾಟೀದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...