IND – NZ ODI | ಕೆ ಎಲ್‌ ರಾಹುಲ್‌ ಭರ್ಜರಿ ಶತಕ; ಕಿವೀಸ್‌ಗೆ 285 ರನ್‌ ಗುರಿ

Date:

ರಾಜ್‌ಕೋಟ್‌ನ ನಿರಂಜನ್ ಶಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ, ಮಧ್ಯಮ ಕ್ರಮಾಂಕದ ಆಟಗಾರ ಕನ್ನಡಿಕರಾದ ಕೆ ಎಲ್‌ ರಾಹುಲ್‌ ಅವರ ಆಕರ್ಷಕ ಶತಕ ಹಾಗೂ ನಾಯಕ ಶುಭಮನ್ ಗಿಲ್ ಅವರ ಜವಾಬ್ದಾರಿಯುತ ಅರ್ಧಶತಕದ ನೆರವಿನಿಂದ ಭಾರತ ತಂಡವು 284 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಕಲೆಹಾಕಿದೆ.

- Advertisement -

​ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ನ್ಯೂಜಿಲೆಂಡ್ ನಾಯಕ ಮೈಕಲ್ ಬ್ರೇಸ್‌ವೆಲ್ ಅವರ ನಿರ್ಧಾರವನ್ನು ಸಮರ್ಥಿಸುವಂತೆ ಪ್ರವಾಸಿ ಬೌಲರ್‌ಗಳು ಆರಂಭದಲ್ಲಿ ಬಿಗಿ ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

​ಆರಂಭಿಕ ಆಘಾತ, ರಾಹುಲ್ ಆಸರೆ
ತವರಿನ ಅಂಗಳದಲ್ಲಿ ಭರ್ಜರಿ ಬ್ಯಾಟಿಂಗ್ ನಿರೀಕ್ಷೆಯಲ್ಲಿದ್ದ ರೋಹಿತ್ ಶರ್ಮಾ (24) ಹಾಗೂ ವಿರಾಟ್ ಕೊಹ್ಲಿ (23) ಉತ್ತಮ ಆರಂಭ ಪಡೆದರೂ, ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ಎಡವಿದರು. ಈ ಹಂತದಲ್ಲಿ ಒಂದಾದ ನಾಯಕ ಶುಭಮನ್ ಗಿಲ್ (56) ಹಾಗೂ ಕೆ.ಎಲ್. ರಾಹುಲ್ ತಂಡವನ್ನು ಕುಸಿತದಿಂದ ಪಾರು ಮಾಡಿದರು.

​ವಿಶೇಷವಾಗಿ ಕೆ.ಎಲ್. ರಾಹುಲ್, ಕಿವೀಸ್ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿ ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟಿದರು. 92 ಎಸೆತಗಳನ್ನು ಎದುರಿಸಿದ ಅವರು ಅಜೇಯ 112 ರನ್ ಗಳಿಸುವ ಮೂಲಕ ತಂಡದ ಮೊತ್ತವನ್ನು 280ರ ಗಡಿ ದಾಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರ ಆಟದಲ್ಲಿ 11 ಬೌಂಡರಿ, 1 ಸಿಕ್ಸರ್‌ ಒಳಗೊಂಡಿತ್ತು. ಅಂತಿಮವಾಗಿ ಭಾರತ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 284 ರನ್ ಕಲೆಹಾಕಿತು.

​ನ್ಯೂಜಿಲೆಂಡ್ ಪರ ಕ್ರಿಸ್ ಕ್ಲಾರ್ಕ್ 56 ರನ್ ನೀಡಿ 3 ವಿಕೆಟ್ ಪಡೆಯುವ ಮೂಲಕ ಯಶಸ್ವಿ ಬೌಲರ್ ಎನಿಸಿಕೊಂಡರು. ಸರಣಿಯಲ್ಲಿ ಈಗಾಗಲೇ 1-0 ಮುನ್ನಡೆ ಸಾಧಿಸಿರುವ ಭಾರತ, ಈ ಪಂದ್ಯವನ್ನು ಗೆದ್ದು ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿದೆ.

​ಸಂಕ್ಷಿಪ್ತ ಸ್ಕೋರ್:
​ಭಾರತ: 50 ಓವರ್‌ಗಳಲ್ಲಿ 284/7 (ಕೆ.ಎಲ್. ರಾಹುಲ್ ಅಜೇಯ 112, ಶುಭಮನ್ ಗಿಲ್ 56, ರೋಹಿತ್ ಶರ್ಮಾ 24; ಕ್ರಿಸ್ ಕ್ಲಾರ್ಕ್ 56/3).

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಪ್ಯಾರಾ ಗೇಮ್ಸ್‌ | 192 ಕೆಜಿ ಭಾರ ಎತ್ತಿ ಬೆಳ್ಳಿ ಗೆದ್ದ ಅಶೋಕ್ ಮಲಿಕ್

ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ 65 ಕೆಜಿ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ...

‘ಜೈಲರ್ 2’ ಸಿನಿಮಾ ವೀಕ್ಷಿಸಲು ಇಡೀ ಚಿತ್ರಮಂದಿರವನ್ನೇ ಬುಕ್ ಮಾಡಿದ ಸಂಜು ಸ್ಯಾಮ್ಸನ್!

ನಟ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಆಕ್ಷನ್-ಥ್ರಿಲ್ಲರ್ ಚಿತ್ರ 'ಜೈಲರ್ 2' ಸಿನಿಮಾವನ್ನು...

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ: ಮೊದಲ ದಿನವೇ 4 ಚಿನ್ನ ಸೇರಿ 11 ಪದಕಗಳ ಸಾಧನೆ!

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಭಾರತ ಭರ್ಜರಿ...

ವಿಶ್ವಕಪ್ ಸಿದ್ಧತೆಗೆ ಕಿವೀಸ್ ಸರಣಿ ಪರೀಕ್ಷೆ: ಗಿಲ್– ಶ್ರೇಯಸ್ ನಾಯಕತ್ವದಲ್ಲಿ ಟೀಂ ಇಂಡಿಯಾ ಸಜ್ಜು

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಬಹುನಿರೀಕ್ಷಿತ ಕ್ರಿಕೆಟ್ ಸರಣಿಗೆ ಕ್ಷಣಗಣನೆ ಆರಂಭವಾಗಿದೆ....