ಟಿ20 ವಿಶ್ವಕಪ್ ಫೈನಲ್‌ ವೀಕ್ಷಣೆಗೆ ಕೊಹ್ಲಿ ಹೋಗಲಿಲ್ಲ; ಕಾರಣವೇನು?

Date:

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 2026ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಭಾರತ ತಂಡ ಬರೋಬ್ಬರಿ 96 ರನ್‌ಗಳಿಂದ ಸೋಲಿಸಿ, ಪ್ರಶಸ್ತಿ ಗೆದ್ದುಕೊಂಡಿತು. ಈ ಸಂದರ್ಭದಲ್ಲಿ ಹಲವಾರು ದಾಖಲೆಗಳು ನಿರ್ಮಾಣವಾದವು. ಆದಾಗ್ಯೂ, ಈ ಸಂಭ್ರಮಕ್ಕೆ ಮೆರುಗು ನೀಡಿದ್ದು ಭಾರತದ ಇಬ್ಬರು ಮಾಜಿ ನಾಯಕರಾದ ಎಂ.ಎಸ್. ಧೋನಿ ಮತ್ತು ರೋಹಿತ್ ಶರ್ಮಾ ಅವರು ಸ್ಟೇಡಿಯಂನಲ್ಲಿ ಇದ್ದದ್ದು. ಇವರಿಬ್ಬರು ಕ್ರೀಡಾಂಗಣದ ವಿಐಪಿ ಬಾಕ್ಸ್‌ನಲ್ಲಿ ಕುಳಿತು ಪಂದ್ಯವನ್ನು ವೀಕ್ಷಿಸಿದರು. ರೋಹಿತ್ ಮತ್ತು ಧೋನಿ ಫೈನಲ್‌ನಲ್ಲಿ ಭಾಗವಹಿಸಿದ್ದನ್ನು ಕಂಡು ಅಭಿಮಾನಿಗಳು ರೋಮಾಂಚನಗೊಂಡರು. ಆದರೂ, ಭಾರತೀಯ ಕ್ರಿಕೆಟ್‌ನ ಮತ್ತೊಬ್ಬ ಐಕಾನ್ ವಿರಾಟ್ ಕೊಹ್ಲಿ ಅವರ ಅನುಪಸ್ಥಿತಿಯು ಅನೇಕರಿಗೆ ನಿರಾಸೆ ಮೂಡಿಸಿತು.

- Advertisement -

ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಸಂಪೂರ್ಣ ನಿವೃತ್ತಿ ಘೋಷಿಸಿದ್ದರೆ, ರೋಹಿತ್ ಮತ್ತು ಕೊಹ್ಲಿ ಇನ್ನೂ ಏಕದಿನ (ODI) ಮಾದರಿಯ ಕ್ರಿಕೆಟ್‌ನಲ್ಲಿ ಸಕ್ರಿಯರಾಗಿದ್ದಾರೆ. ಹೀಗಿದ್ದರೂ, ಧೋನಿ ಮತ್ತು ರೋಹಿತ್ ಕ್ರೀಡಾಂಗಣಕ್ಕೆ ಬಂದು ಇಡೀ ಪಂದ್ಯವನ್ನು ವೀಕ್ಷಿಸಿದರು. ಆದರೆ, ಕೊಹ್ಲಿ ಅವರ ಅನುಪಸ್ಥಿತಿ ಹಲವರಿಗೆ ಆಶ್ಚರ್ಯ ತಂದಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಕೊಹ್ಲಿಯ ಅನುಪಸ್ಥಿತಿಯ ಹಿಂದಿನ ಕಾರಣಗಳನ್ನು ಕೇಳಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಎರಡು ಸಂಭಾವ್ಯ ವಿವರಗಳನ್ನು ಕ್ರಿಕೆಟ್‌ ಪ್ರೇಮಿಗಳು ಮತ್ತು ಕ್ರೀಡಾ ವಿಶ್ಲೇಷಕರು ವಿವರಿಸಿದ್ದಾರೆ.

  1. ಎಂ.ಎಸ್. ಧೋನಿ ಮತ್ತು ರೋಹಿತ್ ಶರ್ಮಾ ಅವರು ಈ ಹಿಂದೆ ವಿಶ್ವಕಪ್ ಗೆದ್ದ ಮಾಜಿ ನಾಯಕರು. ಧೋನಿ 2007ರಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಗೆದ್ದಿದ್ದರೆ, ರೋಹಿತ್ 2024ರಲ್ಲಿ ನಡೆದ ವಿಶ್ವಕಪ್ ಪಂದ್ಯಾವಳಿಯ ಪೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಕಪ್ ಗೆದ್ದರು. ಆದರೆ, ಕೊಹ್ಲಿ ನಾಯಕನಾಗಿ ಟಿ20 ವಿಶ್ವಕಪ್ ಗೆದ್ದಿರಲಿಲ್ಲ. ಆದ್ದರಿಂದ, ಈ ಕಾರ್ಯಕ್ರಮದಲ್ಲಿ ಅವರ ಅಧಿಕೃತ ಭಾಗವಹಿಸುವಿಕೆಗೆ ಯಾವುದೇ ನಿರ್ದಿಷ್ಟ ಪಾತ್ರವಿರಲಿಲ್ಲ.
  2. ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ಸಂಪೂರ್ಣವಾಗಿ ಹೊರಬಂದಿಲ್ಲವಾದರೂ, ಟಿ20 ಮತ್ತು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಅವರು ತಮ್ಮ ಹೆಚ್ಚಿನ ಸಮಯವನ್ನು ಕುಟುಂಬದೊಂದಿಗೆ ಕಳೆಯುತ್ತಿದ್ದಾರೆ. ಈ ಹಿಂದೆ, ಕೊಹ್ಲಿ ನೀಡಿದ್ದ ಸಂದರ್ಶನವೊಂದರಲ್ಲಿ, ‘ತಾವು ನಿವೃತ್ತಿಯಾದ ನಂತರ ಜನರು ತಮ್ಮನ್ನು ಸ್ವಲ್ಪ ಕಾಲ ನೋಡುವುದಿಲ್ಲ’ ಎಂದು ಹೇಳಿಕೊಂಡಿದ್ದರು.

“ನಾನು ಒಮ್ಮೆ ಆಟ ಮುಗಿಸಿದರೆ, ನಾನು ಅಲ್ಲಿಂದ ಹೋಗಿಬಿಡುತ್ತೇನೆ. ಸ್ವಲ್ಪ ಕಾಲ ನೀವು ನನ್ನನ್ನು ನೋಡುವುದಿಲ್ಲ. ಹಾಗಾಗಿ ನಾನು ಆಡುವವರೆಗೂ ನನ್ನಲ್ಲಿರುವ ಎಲ್ಲವನ್ನೂ ಮೈದಾನದಲ್ಲಿ ನೀಡಲು ಬಯಸುತ್ತೇನೆ, ಅದೇ ನನ್ನನ್ನು ಮುಂದೆ ಸಾಗುವಂತೆ ಮಾಡುತ್ತದೆ” ಎಂದು ಅವರು ಹೇಳಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಿನ್ನಮತದ ಹಕ್ಕಿಗೆ ಸಂಚಕಾರ; ಶಾಂತಿ ಬಾಂಡ್‌ಗೆ ಸಹಿ ಹಾಕುವ ಪ್ರಶ್ನೆಯೇ ಇಲ್ಲ ಎಂದ ನೇಹಾ ಬೋರಾ

ದೆಹಲಿ ಹೈಕೋರ್ಟ್‌ನಲ್ಲಿ ರಿಲೀಫ್ ಸಿಗದ ಹಿನ್ನೆಲೆಯಲ್ಲಿ, ದೆಹಲಿ ಪೊಲೀಸರು ವಿಧಿಸಿರುವ 10,000...

ಆಂಧ್ರಪ್ರದೇಶ | ರಸ್ತೆ ಕಾಮಗಾರಿ ವೇಳೆ ಜೆಲಾಟಿನ್ ಸ್ಫೋಟ; ಶಾಲಾ ಶಿಕ್ಷಕಿ ಸೇರಿದಂತೆ ಹಲವರ ಸಾವು

ರಸ್ತೆ ಕಾಮಗಾರಿಗಾಗಿ ಬಳಸಲಾಗುತ್ತಿದ್ದ ಜೆಲಾಟಿನ್ ಸ್ಟಿಕ್‌ಗಳು ಅನಿರೀಕ್ಷಿತವಾಗಿ ಸ್ಫೋಟಗೊಂಡು, ಶಾಲಾ ಶಿಕ್ಷಕಿಯೊಬ್ಬರು...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...