ಕೊಹ್ಲಿ – ಗಂಭೀರ್ ನಡುವೆ ಬಿರುಕು; ಮೌನ ಮುರಿದ ಕೋಚ್

Date:

ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ಊಹಾಪೋಹಗಳನ್ನು ಭಾರತದ ಬ್ಯಾಟಿಂಗ್ ಕೋಚ್ ಸಿತಾಂಶು ಕೋಟಕ್ ತಳ್ಳಿಹಾಕಿದ್ದಾರೆ. ಇವರಿಬ್ಬರು ನಿಯಮಿತವಾಗಿ ಸಂಪರ್ಕದಲ್ಲಿದ್ದಾರೆ ಹಾಗೂ ಅವರ ಕಾರ್ಯನಿರ್ವಹಣೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

- Advertisement -

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಅಭ್ಯಾಸದ ವೇಳೆ ಕೊಹ್ಲಿ ಮತ್ತು ಗಂಭೀರ್ ಪರಸ್ಪರ ಮಾತನಾಡದೇ ಇರುವುದನ್ನು ತೋರಿಸುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬಳಿಕ ಈ ವದಂತಿಗಳು ತೀವ್ರಗೊಂಡಿದ್ದವು. ಕಳೆದ ವರ್ಷ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದಾಗಿನಿಂದಲೂ ಇಬ್ಬರ ನಡುವಿನ ಸಮೀಕರಣದ ಬಗ್ಗೆ ಊಹಾಪೋಹಗಳು ಹರಿದಾಡುತ್ತಲೇ ಇವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯಕ್ಕೂ ಮುನ್ನ, ನೆಟ್ಸ್‌ನಲ್ಲಿ ಕೊಹ್ಲಿ ಬ್ಯಾಟಿಂಗ್ ಮಾಡುತ್ತಿದ್ದಾಗ ಗಂಭೀರ್ ಅವರು ಹತ್ತಿರದಲ್ಲೇ ನಿಂತು ನೋಡುತ್ತಿದ್ದರು, ಆದರೆ ಅವರೊಂದಿಗೆ ಯಾವುದೇ ಮಾತುಕತೆ ನಡೆಸಲಿಲ್ಲ. ಅದೇ ಸಮಯದಲ್ಲಿ ಬ್ಯಾಟಿಂಗ್ ಕೋಚ್ ಕೋಟಕ್ ಅವರು ಮಾಜಿ ನಾಯಕ ಕೊಹ್ಲಿಯೊಂದಿಗೆ ಚರ್ಚಿಸುತ್ತಿರುವುದು ಕಂಡುಬಂದಿದ್ದು, ಆನ್‌ಲೈನ್‌ನಲ್ಲಿ ಚರ್ಚೆಗಳಿಗೆ ಮತ್ತಷ್ಟು ಗ್ರಾಸವಾಗಿತ್ತು.

ಆದರೆ, ಈ ಪರಿಸ್ಥಿತಿಯಲ್ಲಿ ಯಾವುದೇ ಅಸಾಮಾನ್ಯತೆ ಇಲ್ಲ ಎಂದು ಸ್ಪಷ್ಟಪಡಿಸಿದ ಕೋಟಕ್, ಇವರಿಬ್ಬರ ನಡುವೆ ಸಂವಹನ ನಡೆಸಲು ಮಧ್ಯವರ್ತಿಯ ಅಗತ್ಯವಿದೆ ಎಂಬ ಮಾತುಗಳನ್ನು ನಗುತ್ತಲೇ ತಳ್ಳಿಹಾಕಿದರು. “ಇಲ್ಲ (ನಗುತ್ತಾ), ವಿರಾಟ್ ಮತ್ತು ಗೌತಮ್ ಇಂದು ಬಹುಶಃ 10 ಬಾರಿ ಮಾತನಾಡಿರುತ್ತಾರೆ. ಅವರಿಗೆ ಯಾವುದೇ ಮಧ್ಯವರ್ತಿಯ ಅಗತ್ಯವಿದೆ ಎಂದು ನನಗನ್ನಿಸುವುದಿಲ್ಲ” ಎಂದು ಕೋಟಕ್ ಹೇಳಿದ್ದಾರೆ.

ಮೊದಲ ಏಕದಿನ ಪಂದ್ಯದ ಮುನ್ನ ಅಭ್ಯಾಸದ ವೇಳೆ ಕೊಹ್ಲಿ ಜೊತೆಗಿನ ಚರ್ಚೆಯ ಬಗ್ಗೆಯೂ ಅವರು ವಿವರಿಸಿದರು. “ಮೂಲತಃ ಅವರು ಬ್ಯಾಟಿಂಗ್‌ಗೆ ಇಳಿಯುವ ಮುನ್ನ ನನ್ನೊಂದಿಗೆ ಕೆಲವು ವಿಷಯಗಳನ್ನು ಮಾತನಾಡಿದರು. ಪ್ರಾಮಾಣಿಕವಾಗಿ, ಓರ್ವ ಬ್ಯಾಟಿಂಗ್ ಕೋಚ್ ಆಗಿ, ಅವರ ಬ್ಯಾಟಿಂಗ್‌ನಲ್ಲಿ ಏನಾದರೂ ದೊಡ್ಡ ತಪ್ಪು ಕಂಡುಬಂದರೆ ಅಥವಾ ಅವರೇ ಏನಾದರೂ ಅನಿಸಿಕೆ ವ್ಯಕ್ತಪಡಿಸಿದರೆ ಮಾತ್ರ ಹೇಳಬೇಕೇ ಹೊರತು, ಸುಖಾಸುಮ್ಮನೆ ಅವರಿಗೆ ಹೆಚ್ಚು ಸೂಚನೆಗಳನ್ನು ನೀಡಿ ತೊಂದರೆ ಕೊಡಬಾರದು. ನೆಟ್ಸ್ ಅಭ್ಯಾಸದ ನಂತರ ನನ್ನೊಂದಿಗೆ ಮಾತನಾಡುತ್ತಿದ್ದರು. ಇದರಾಚೆಗೆ, ಈ ವದಂತಿಗಳು ಎಲ್ಲಿಂದ ಹುಟ್ಟಿಕೊಳ್ಳುತ್ತವೆ ಎಂದು ನನಗೆ ತಿಳಿದಿಲ್ಲ, ಆದರೆ ಅವು ಹರಿದಾಡುತ್ತವೆ” ಎಂದು ಕೋಟಕ್ ತಿಳಿಸಿದರು.

ರೋಹಿತ್ ಶರ್ಮಾ ಬೆನ್ನಿಗೆ ನಿಂತ ಕೋಟಕ್

ಇಂಗ್ಲೆಂಡ್ ವಿರುದ್ಧದ ಪ್ರಸಕ್ತ ಏಕದಿನ ಸರಣಿಯಲ್ಲಿ ರನ್ ಗಳಿಸಲು ಪರದಾಡುತ್ತಿರುವ ಅನುಭವಿ ಆರಂಭಿಕ ಬ್ಯಾಟರ್ ರೋಹಿತ್ ಶರ್ಮಾ ಅವರನ್ನು ಕೋಟಕ್ ಸಮರ್ಥಿಸಿಕೊಂಡಿದ್ದಾರೆ.

ಕಾರ್ಡಿಫ್‌ನಲ್ಲಿ ಗುರುವಾರ ನಡೆದ ಎರಡನೇ ಏಕದಿನ ಪಂದ್ಯದಲ್ಲೂ ರೋಹಿತ್ ಅವರ ಸಂಕಷ್ಟ ಮುಂದುವರೆಯಿತು. ಈ ಪಂದ್ಯದಲ್ಲಿ ಇಂಗ್ಲೆಂಡ್ ನಾಲ್ಕು ವಿಕೆಟ್‌ಗಳ ಜಯ ಸಾಧಿಸಿ, ಮೂರು ಪಂದ್ಯಗಳ ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ. ಪವರ್‌ಪ್ಲೇನಲ್ಲಿ ಭಾರತ 61/1 ರನ್ ಗಳಿಸುವ ಮೂಲಕ ಉತ್ತಮ ಸ್ಥಿತಿಯಲ್ಲಿದ್ದರೂ, ರೋಹಿತ್ 18 ಎಸೆತಗಳಲ್ಲಿ ಕೇವಲ 10 ರನ್ ಗಳಿಸಿ ತಿಣುಕಾಡಿದರು. ಅಂತಿಮವಾಗಿ ವಿಲ್ ಜಾಕ್ಸ್ ಅವರ ಬೌಲಿಂಗ್‌ನಲ್ಲಿ ಸ್ವೀಪ್ ಮಾಡಲು ಯತ್ನಿಸಿ 47 ಎಸೆತಗಳಲ್ಲಿ 26 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಈ ವರ್ಷ ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಅವರ ಪ್ರದರ್ಶನ ಅಷ್ಟೇನೂ ಆಶಾದಾಯಕವಾಗಿಲ್ಲ. ಆಡಿದ ಎಂಟು ಪಂದ್ಯಗಳಲ್ಲಿ ಅವರು ಕೇವಲ ಒಂದು ಅರ್ಧಶತಕ ಗಳಿಸಿದ್ದು, ಅವರ ಬ್ಯಾಟಿಂಗ್ ಸರಾಸರಿ ಕೇವಲ 30.12 ರಷ್ಟಿದೆ. ಭಾನುವಾರ ಲಾರ್ಡ್ಸ್‌ನಲ್ಲಿ ನಡೆಯಲಿರುವ ಸರಣಿ ನಿರ್ಣಾಯಕ ಪಂದ್ಯದ ನಂತರ, 2027ರ ಏಕದಿನ ವಿಶ್ವಕಪ್‌ ದೃಷ್ಟಿಯಿಂದ ರೋಹಿತ್ ಭವಿಷ್ಯದ ಕುರಿತು ಆಯ್ಕೆಗಾರರು ಪರ್ಯಾಯ ಯೋಚನೆ ಮಾಡಬಹುದೇ ಎಂಬ ಊಹಾಪೋಹಗಳ ನಡುವೆ, ರೋಹಿತ್ ಅವರ ಸ್ಥಾನದ ಮೇಲೆ ಯಾವುದೇ ಒತ್ತಡವಿಲ್ಲ ಎಂದು ಬ್ಯಾಟಿಂಗ್ ಕೋಚ್ ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...