ಆಸ್ಟ್ರೇಲಿಯಾ ಬ್ಯಾಟರ್‌ ಜೊತೆ ವಿರಾಟ್ ಕೊಹ್ಲಿ ಕಿರಿಕ್: ಅನುಚಿತ ವರ್ತನೆಗಾಗಿ ಭಾರಿ ದಂಡ

Date:

ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ಭಾರತ-ಆಸ್ಟ್ರೇಲಿಯಾ ಕ್ರಿಕೆಟ್‌ ತಂಡಗಳ ನಡುವೆ ನಡೆಯುತ್ತಿರುವ ಟೆಸ್ಟ್‌ ಕ್ರಿಕೆಟ್‌ ಸರಣಿಯ 4ನೇ ಟೆಸ್ಟ್‌ನಲ್ಲಿ ಆಸಿಸ್‌ ಬ್ಯಾಟರ್‌ ಜೊತೆ ವಿರಾಟ್ ಕೊಹ್ಲಿ ಕಿರಿಕ್ ಮಾಡಿಕೊಂಡಿದ್ದಾರೆ. ಕೊಹ್ಲಿ ಅವರು ಬೇಕಂತಲೇ ಕಿರಿಕ್ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಘಟನೆಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಗಂಭೀರವಾಗಿ ಪರಿಗಣಿಸಿದೆ.

- Advertisement -

ಆಸ್ಟ್ರೇಲಿಯಾದ ಯುವ ಆರಂಭಿಕ ಬ್ಯಾಟರ್ ಸ್ಯಾಮ್ ಕೊನ್‌ಸ್ಟಸ್ ಅವರಿಗೆ ಭುಜದಿಂದ ಡಿಕ್ಕಿ ಹೊಡೆದಿರುವ ಭಾರತ ಕ್ರಿಕೆಟ್ ತಂಡದ ಆಟಗಾರ ವಿರಾಟ್ ಕೊಹ್ಲಿ ದಂಡನೆಗೊಳಗಾಗಿದ್ದಾರೆ. ಐಸಿಸಿ ನಿಯಮ ಉಲ್ಲಂಘನೆ ಮಾಡಿರುವ ವಿರಾಟ್ ಕೊಹ್ಲಿ ಅವರಿಗೆ ಪಂದ್ಯ ಶುಲ್ಕದ ಶೇ 20ರಷ್ಟು ದಂಡ ವಿಧಿಸಲಾಗಿದೆ. ಹಾಗೆಯೇ ಅನುಚಿತ ವರ್ತನೆಗಾಗಿ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನಾಲ್ಕು ಡಿಮೆರಿಟ್ ಪಾಯಿಂಟ್‌ಗೆ ಒಳಗಾದರೆ ಕನಿಷ್ಠ ಒಂದು ಪಂದ್ಯದ ನಿಷೇಧ ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ.

ಆಸ್ಟ್ರೇಲಿಯಾದ ಮೆಲ್ಬೋರ್ನ್ ಸ್ಟೇಡಿಯಂನಲ್ಲಿ 4ನೇ ಟೆಸ್ಟ್‌ ಪಂದ್ಯ ಆರಂಭವಾಗಿತ್ತು. ಆಸ್ಟ್ರೇಲಿಯಾ ತಂಡದ ಹೊಸ ಆಟಗಾರ ಸ್ಯಾಮ್ ಕೊನ್‌ಸ್ಟಸ್ ತಮ್ಮ ಚೊಚ್ಚಲ ಪಂದ್ಯದಲ್ಲಿ ಆರಂಭಿಕ ಆಟಗಾರನಾಗಿ ಸ್ಕ್ರೀಜ್‌ಗೆ ಇಳಿದಿದ್ದರು. ಮೊದಲ ಪಂದ್ಯದಲ್ಲೇ ಉತ್ತಮ ಪ್ರದರ್ಶನ ನೀಡಿದ್ದರು.

10ನೇ ಓವರ್‌ನ ಅಂತ್ಯದಲ್ಲಿ ಕೊನ್‌ಸ್ಟಸ್ ಹೋಗುತ್ತಿದ್ದ ಸ್ಥಳಕ್ಕೆ ಬೇಕಂತಲೇ ಬಂದ ಕೊಹ್ಲಿ ಅವರು ಕೊನ್‌ಸ್ಟಸ್ ಭುಜಕ್ಕೆ ಡಿಕ್ಕಿ ಹೊಡೆದಿದ್ದಾರೆ. ಅದನ್ನು ಸೂಕ್ಷ್ಮವಾಗಿ ಗಮನಿಸಿದ ಕೊನ್‌ಸ್ಟಸ್ ಯಾವುದೇ ಪ್ರತಿಕ್ರಿಯೆ ನೀಡದೆ, ಫೀಲ್ಡ್ ನಲ್ಲಿ ಬ್ಯಾಟಿಂಗ್‌ನಿಂದಲೇ ಉತ್ತರಿಸುತ್ತೇನೆಂದು ಹೋಗಿದ್ದಾರೆ. ಕೊನ್‌ಸ್ಟಸ್ ಕೇವಲ 52 ಎಸೆತಗಳಿಗೆ ಅರ್ಧಶತಕ ಬಾರಿಸಿದ್ದು, 62 ಬಾಲ್‌ಗಳಿಗೆ 60 ರನ್‌ ಗಳಿಸಿ ಔಟಾಗಿದ್ದಾರೆ.

ಕೊನ್‌ಸ್ಟಸ್‌ಗೆ ಕೊಹ್ಲಿ ಡಿಕ್ಕಿ ಹೊಡೆದ ಸಮಯದಲ್ಲಿ ಜಗಳವಾಗದಂತೆ ಅಂಪೈರ್ ಮತ್ತು ಇತರ ಆಟಗಾರರು ಮಧ್ಯ ಪ್ರವೇಶಿಸಿ, ಇಬ್ಬರನ್ನೂ ಸುಮ್ಮನಾಗಿಸಿದ್ದಾರೆ. ಘಟನೆಯನ್ನು ಪರಿಶೀಲಿಸಲು ಐಸಿಸಿ ಅಧಿಕಾರಿಗಳು ನಿರ್ಧರಿಸಿದ್ದಾರೆ. ವಿರಾಟ್ ಕೊಹ್ಲಿ ಮತ್ತು ಸ್ಯಾಮ್ ಕೊನ್‌ಸ್ಟಸ್ ಅವರನ್ನು ಮ್ಯಾಚ್ ರೆಫರಿ ವಿಚಾರಣೆಗೆ ಕರೆಯಬಹುದು ಎಂದು ಹೇಳಲಾಗಿದೆ.

image 34

ಇತ್ತೀಚೆಗೆ, ಅಡಿಲೇಡ್‌ನಲ್ಲಿ ನಡೆದ ಟೆಸ್ಟ್​ನಲ್ಲಿ ಟ್ರಾವಿಸ್ ಹೆಡ್ ಜೊತೆ ಮೊಹಮ್ಮದ್ ಸಿರಾಜ್​ ಕಿರಿಕ್ ಮಾಡಿಕೊಂಡಿದ್ದರು. ಅವರಿಗೆ ಡಿಮೆರಿಟ್ ಪಾಯಿಂಟ್ ನೀಡಿ, ಪಂದ್ಯ ಶುಲ್ಕದ ಶೇ.20 ರಷ್ಟು ದಂಡ ವಿಧಿಸಲಾಗಿತ್ತು. ಅದೇ ರೀತಿ ವಿರಾಟ್ ಕೊಹ್ಲಿಗೂ ದಂಡ ವಿಧಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...