ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

Date:

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಕೇವಲ 1 ರನ್‌ಗಳಿಂದ ಸೋತಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಫಿಲ್ ಸಾಲ್ಟ್ ಅವರ ಸ್ಫೋಟಕ ಬ್ಯಾಟಿಂಗ್ ಮತ್ತು ಶ್ರೇಯಸ್ ಅಯ್ಯರ್ ಅವರ ಅಮೋಘ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 222 ರನ್ ಗಳಿಸಿ, ಆರ್‌ಸಿಬಿ ತಂಡಕ್ಕೆ 223 ರನ್‌ಗಳ ಸವಾಲಿನ ಗುರಿ ನೀಡಿತ್ತು.

ಈ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ, ಕೊನೆಯ ಓವರ್‌ನಲ್ಲಿ ಎಡವಿದ ಪರಿಣಾಮ ಕೇವಲ 1 ರನ್‌ಗಳ ಅಂತರದಿಂದ ಸೋಲಿಗೆ ಶರಣಾಯಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆರ್‌ಸಿಬಿಗೆ ಗೆಲ್ಲಲು ಕೊನೆಯ ಓವರ್‌ನಲ್ಲಿ 21 ರನ್‌ಗಳ ಅವಶ್ಯಕತೆ ಇತ್ತು. ಈ ವೇಳೆ ಕೆಕೆಆರ್‌ ಪರ ಬೌಲಿಂಗ್ ದಾಳಿಗಿಳಿದ ಮಿಚೆಲ್ ಸ್ಟಾರ್ಕ್‌ ಓವರ್‌ನಲ್ಲಿ ಕ್ರೀಸ್‌ನಲ್ಲಿದ್ದ ಆರ್‌ಸಿಬಿ ಸ್ಪಿನ್ ಬೌಲರ್ ಕರಣ್ ಶರ್ಮಾ, ಅನಿರೀಕ್ಷಿತವಾಗಿ ಮೂರು ಸಿಕ್ಸರ್ ಬಾರಿಸುವ ಮೂಲಕ ಗೆಲುವಿನ ನಿರೀಕ್ಷೆ ಹುಟ್ಟಿಸಿದರು. ಆದರೆ 5ನೇ ಎಸೆತದಲ್ಲಿ ಸ್ಟಾರ್ಕ್‌ಗೆ ಕ್ಯಾಚಿತ್ತು ನಿರ್ಗಮಿಸಿದರು.

ಕೊನೆಯ ಬಾಲ್‌ನಲ್ಲಿ ಮೂರು ರನ್‌ಗಳ ಅವಶ್ಯಕತೆ ಇದ್ದಾಗ ಬ್ಯಾಟಿಂಗ್‌ಗೆ ಬಂದ ಲಾಕಿ ಫರ್ಗೂಸನ್ ಬೌಂಡರಿ ಹೊಡೆಯುವ ಪ್ರಯತ್ನ ವಿಫಲವಾಯಿತು. ಎರಡು ರನ್‌ ಕದಿಯುವ ಯತ್ನದಲ್ಲಿ ವಿಫಲವಾದ ಫರ್ಗೂಸನ್, ಕೆಕೆಆರ್‌ನ ಫಿಲ್ ಸಾಲ್ಟ್‌ ಅವರು ಅದ್ಭುತ ಡೈವಿಂಗ್ ಮೂಲಕ ರನೌಟ್ ಮಾಡಿದ್ದರಿಂದ ಆರ್‌ಸಿಬಿ 1 ರನ್‌ನಿಂದ ವಿರೋಚಿತವಾಗಿ ಸೋಲಿಗೆ ಶರಣಾಯಿತು.

ಒಂದು ವೇಳೆ ರನ್ ಪೂರ್ತಿಯಾಗಿದ್ದಿದ್ದರೆ ಪಂದ್ಯ ಟೈ ಆಗಿ, ಸೂಪರ್ ಓವರ್‌ ಆಗುತ್ತಿತ್ತು. ಆದರೆ ಆರ್‌ಸಿಬಿಗೆ ನಸೀಬು ಕೈಕೊಟ್ಟಿತು. ಆರ್‌ಸಿಬಿ ಸೋತ ಬಳಿಕ ಪಂದ್ಯವನ್ನು ರೋಚಕತೆಗೆ ಸಾಗಿಸಿದ್ದ ಕರಣ್ ಶರ್ಮಾ ಕಣ್ಣೀರಿಟ್ಟರು. 223 ರನ್ ಗುರಿ ಬೆನ್ನಟ್ಟಿದ ಆರ್‌ಸಿಬಿ 20 ಓವರ್‌ಗಳಲ್ಲಿ 221 ರನ್ ಗಳಿಸಿ ಆಲೌಟಾಯಿತು.

ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2024ರಲ್ಲಿ ಸೋಲಿನ ಕೂಪದಿಂದ ಎದ್ದು ಬರಲು ಮತ್ತೊಮ್ಮೆ ವಿಫಲವಾಗಿದ್ದು, ಪ್ಲೇ ಆಫ್ ಹಂತ ತಲುಪುವ ಕನಸು ಬಹುತೇಕ ಅಂತ್ಯಗೊಂಡಂತಾಗಿದೆ. ಆಡಿದ 8 ಪಂದ್ಯಗಳಲ್ಲಿ 7 ಸೋಲು ಮತ್ತು 1 ಗೆಲುವು ಸಾಧಿಸಿದ್ದು, ಕೇವಲ 2 ಅಂಕಗಳೊಂದಿಗೆ ಕೊನೆಯ ಸ್ಥಾನದಲ್ಲೇ ಮುಂದುವರೆದಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತ – ಪಾಕ್ ಟಿ20 ವಿಶ್ವಕಪ್ ಪಂದ್ಯದ ಪ್ರತಿ ಟಿಕೆಟ್ ಬೆಲೆ ಬರೋಬ್ಬರಿ 17 ಲಕ್ಷ ರೂ!

ಐಪಿಎಲ್ ಮುಗಿಯುತ್ತಾ ಬಂತು, ಇನ್ನೇನಿದ್ದರೂ ಕ್ರಿಕೆಟ್ ಅಭಿಮಾನಿಗಳಲ್ಲಿ ಟಿ20 ವಿಶ್ವಕಪ್ ಹುಚ್ಚು...

ಈ ಬಾರಿಯ ಐಪಿಎಲ್‌ನಲ್ಲಿ ಸದ್ದೇ ಮಾಡದ ಮ್ಯಾಕ್ಸ್‌ವೆಲ್ ಬ್ಯಾಟ್‌: ಗಳಿಸಿದ್ದು ಕೇವಲ 52 ರನ್!

ಬುಧವಾರ ಗುಜರಾತ್‌ನ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಎಲಿಮಿನೇಟರ್...

ಸೋಲಿನೊಂದಿಗೆ ಐಪಿಎಲ್‌ಗೆ ವಿದಾಯ ಹೇಳಿದ ‘ಮ್ಯಾಚ್ ಫಿನಿಶರ್ ದಿನೇಶ್ ಕಾರ್ತಿಕ್’

17ನೇ ಆವೃತ್ತಿಯ ಫೈನಲ್ ತಲುಪುವ ಭರವಸೆ ಮೂಡಿಸಿದ್ದ ಅಭಿಮಾನಿಗಳ ಫೇವರೀಟ್ ತಂಡ...

ಐಪಿಎಲ್‌ನಲ್ಲಿ ಹೊಸ ದಾಖಲೆ ಬರೆದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೇ 22ರಂದು ನಡೆದ 2024ರ ಇಂಡಿಯನ್...