ಐಪಿಎಲ್ 2025 | ರಿಂಕು ಸಿಂಗ್​​ಗೆ ಕುಲ್‌ದೀಪ್‌ ಯಾದವ್‌ ಕಪಾಳ ಮೋಕ್ಷ; ಅಭಿಮಾನಿಗಳ ಆಕ್ರೋಶ

Date:

ನಿನ್ನೆ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್‌ ಆವೃತ್ತಿಯ 48ನೇ ಪಂದ್ಯದಲ್ಲಿ ಕುಲದೀಪ್ ಯಾದವ್ ಮತ್ತು ರಿಂಕು ಸಿಂಗ್ ನಡುವೆ ಅನಿರೀಕ್ಷಿತ ಘಟನೆ ನಡೆದಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಪಿನ್ನರ್ ಕುಲ್‌ದೀಪ್‌ ಯಾದವ್ ಕೆಕೆಆರ್ ಆಟಗಾರ ರಿಂಕು ಸಿಂಗ್‌ಗೆ ಕಪಾಳಮೋಕ್ಷ ಮಾಡಿದ್ದು, ಈ ದೃಶ್ಯ ಎಲ್ಲಡೆ ವೈರಲ್ ಆಗಿದೆ.

- Advertisement -

ಪಂದ್ಯ ಮುಕ್ತಾಯವಾದ ನಂತರ ರಿಂಕು ಮಾತನಾಡುತ್ತಿರುವ ಸಂದರ್ಭದಲ್ಲಿ ಮೊದಲಿಗೆ ಕುಲದೀಪ್‌ ಕಪಾಳ ಮೋಕ್ಷ ಮಾಡಿದ್ದಾರೆ. ಹಾಗೆಯೇ ಮತ್ತೆ ಏನೋ ಹೇಳಲು ಹೋದಾಗ ಎರಡನೇ ಬಾರಿಯೂ ಕುಲದೀಪ್‌ ಹಲ್ಲೆ ಮಾಡಿದ್ದಾರೆ. ಆದರೆ ಕುಲದೀಪ್ ಯಾದವ್ ಏಕೆ ಹೊಡೆದರು ಎಂಬುದು ತಿಳಿದಿಲ್ಲ. ಈ ಘಟನೆ ಇಬ್ಬರ ನಡುವೆ ತಮಾಷೆಯಾಗಿ ನಡೆಯಿತೋ ಅಥವಾ ಗಂಭೀರವಾಗಿ ನಡೆಯಿತೋ ಎಂಬ ಮಾಹಿತಿಗೆ ಉತ್ತರ ದೊರಕಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಐಪಿಎಲ್ 2025 | ಇದು ನನ್ನ ಮೈದಾನ: ಗೆದ್ದ ನಂತರ ಕೆ ಎಲ್ ರಾಹುಲ್‌ಗೆ ಟಾಂಗ್‌ ಕೊಟ್ಟ ವಿರಾಟ್ ಕೊಹ್ಲಿ!

ಈ ಮಧ್ಯೆ, ಕುಲದೀಪ್ ಬೌಲಿಂಗ್‌ನಲ್ಲಿ ರಿಂಕು ಸಿಂಗ್ 22 ರನ್ ಗಳಿಸಿದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಕ್ರಿಕೆಟ್ ಅಭಿಮಾನಿಗಲು ವಿಭಿನ್ನವಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಕೆಲವರು ಇದನ್ನು ತಮಾಷೆಯ ಘಟನೆ ಎಂದು ಸಮರ್ಥಿಸಿಕೊಂಡರೆ, ಇನ್ನು ಕೆಲವರು ಕುಲದೀಪ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ.

ಐಪಿಎಲ್ ಇತಿಹಾಸದಲ್ಲಿ ಆಟಗಾರರು ಕಪಾಳಮೋಕ್ಷ ಮಾಡಿಕೊಳ್ಳುವುದು ಇದೇ ಮೊದಲ ಘಟನೆಯೇನು ಅಲ್ಲ. ಈ ಹಿಂದೆ ಮುಂಬೈ ಇಂಡಿಯನ್ಸ್ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು, ಪಂಜಾಬ್ ಕಿಂಗ್ಸ್ ಮಾಜಿ ಆಟಗಾರ ಎಸ್ ಶ್ರೀಶಾಂತ್ ಅವರಿಗೆ ಮೈದಾನದಲ್ಲೇ ಕಪಾಳಕ್ಕೆ ಬಾರಿಸಿ ಸುದ್ದಿಯಾಗಿದ್ದರು. ಶ್ರೀಶಾಂತ್ ಕಣ್ಣೀರಿಡುತ್ತಾ ಸಾಗುತ್ತಿದ್ದ ದೃಶ್ಯಗಳು ಎಲ್ಲಡೆ ಹರಿದಾಡಿತ್ತು. ಈ ಘಟನೆಯ ವಿರುದ್ಧ ಬಿಸಿಸಿಐ ಕೂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಹರ್ಭಜನ್ ಸಿಂಗ್ ಅವರಿಗೆ 11 ಪಂದ್ಯಗಳಿಗೆ ನಿಷೇಧ ವಿಧಿಸಿತ್ತು. ಆ ಬಳಿಕ ಹರ್ಭಜನ್ ಸಿಂಗ್ ತಮ್ಮ ತಪ್ಪನ್ನು ಒಪ್ಪಿಕೊಂಡು ವಿಷಾದ ವ್ಯಕ್ತಪಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...