ಮೈದಾನದಲ್ಲಿ ಜಗಳಕ್ಕಿಳಿದ ಅಭಿಷೇಕ್ ಶರ್ಮಾ–ದಿಗ್ವೇಶ್ ರಥಿ; ಬಿಸಿಸಿಐನಿಂದ ಒಬ್ಬರಿಗೆ ಅಮಾನತು ಶಿಕ್ಷೆ

Date:

ಲಖನೌ ಸೂಪರ್ ಜೈಂಟ್ಸ್ ತಂಡದ ಸ್ಪಿನ್ನರ್ ದಿಗ್ವೇಶ್ ರಥಿ ಅವರು ಲೀಗ್‌ನ ನೀತಿ ಸಂಹಿತೆಯನ್ನು ಪದೇ ಪದೇ ಉಲ್ಲಂಘಿಸಿದ್ದಕ್ಕಾಗಿ ಐಪಿಎಲ್ ಆಡಳಿತ ಮಂಡಳಿಯು ಒಂದು ಪಂದ್ಯದ ಅಮಾನತು ಶಿಕ್ಷೆಯನ್ನು ವಿಧಿಸಿದೆ.

- Advertisement -

ನಿನ್ನೆ ನಡೆದ ಎಸ್‌ಆರ್‌ಎಚ್‌ – ಎಲ್‌ಎಸ್‌ಜಿ ತಂಡದ ನಡುವಿನ ಪಂದ್ಯದಲ್ಲಿ ಹೈದರಾಬಾದ್‌ ಆಟಗಾರ ಅಭಿಷೇಕ್ ಶರ್ಮಾ ಅವರನ್ನು ಔಟ್ ಮಾಡಿದ ಬಳಿಕ ಎಲ್ಎಸ್‌ಜಿ ಸ್ಪಿನ್ನರ್ ದಿಗ್ವೇಶ್ ರಾಥಿ, ನೋಟ್ ಬುಕ್ ರೀತಿಯಲ್ಲಿ ಸಂಭ್ರಮಿಸಿದರು.ಈ ಋತುವಿನಲ್ಲಿ ಮೂರನೇ ಬಾರಿಗೆ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ದಿಗ್ವೇಶ್ ತಪ್ಪಿತಸ್ಥರೆಂದು ಬಿಸಿಸಿಐ ತೀರ್ಪು ನೀಡಿದೆ. ಆದ್ದರಿಂದ, ಸ್ಪಿನ್ನರ್‌ಗೆ ಪಂದ್ಯ ಶುಲ್ಕದ ಶೇಕಡಾ 50 ರಷ್ಟು ದಂಡ ವಿಧಿಸಲಾಯಿತು ಜೊತೆಗೆ ಗುಜರಾತ್ ಟೈಟಾನ್ಸ್ ವಿರುದ್ಧದ ಎಲ್‌ಎಸ್‌ಜಿಯ ಮುಂದಿನ ಪಂದ್ಯದಿಂದ ಅಮಾನತುಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ಬಿಸಿಸಿಐನ ಆರ್ಟಿಕಲ್ 2.5 ರ ಅಡಿಯಲ್ಲಿ ಇದು ದಿಗ್ವೇಶ್ ಅವರ ಮೂರನೇ ಲೆವೆಲ್ 1 ಅಪರಾಧವಾಗಿದೆ. ಈ ತಪ್ಪಿನಿಂದಾಗಿ ಅವರು ಎರಡು ಋಣಾತ್ಮಕ ಅಂಕಗಳನ್ನು ಸಂಗ್ರಹಿಸಿದ್ದಾರೆ. ಈ ಮೊದಲು ಅವರು ಪಂಜಾಬ್ ಕಿಂಗ್ಸ್ ವಿರುದ್ಧ ಒಂದು ಋಣಾತ್ಮಕ ಅಂಕ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ಎರಡು ಋಣಾತ್ಮಕ ಅಂಕಗಳನ್ನು ಸಂಗ್ರಹಿಸಿದ್ದರು” ಎಂದು ಐಪಿಎಲ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನು ಓದಿದ್ದೀರಾ? ಐಪಿಎಲ್ 2025: ಪ್ಲೇ ಆಫ್‌ನಲ್ಲಿ ಯಾರ್ಯಾರು ಆಡುವುದಿಲ್ಲ: ಆಟಗಾರರ ಪಟ್ಟಿ ಇಲ್ಲಿದೆ

“ಈ ಋತುವಿನಲ್ಲಿ ದಿಗ್ವೇಶ್ ಐದು ಋಣಾತ್ಮಕ ಅಂಕಗಳನ್ನು ಹೊಂದಿರುವುದರಿಂದ ಒಂದು ಪಂದ್ಯದ ಅಮಾನತು ಶಿಕ್ಷೆ ವಿಧಿಸಲಾಗುತ್ತದೆ. ಮೇ 22ರಂದು ಅಹಮದಾಬಾದ್‌ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಎಲ್‌ಎಸ್‌ಜಿ ವಿರುದ್ಧದ ಮುಂದಿನ ಪಂದ್ಯಕ್ಕೆ ದಿಗ್ವೇಶ್ ಅವರನ್ನು ಅಮಾನತುಗೊಳಿಸಲಾಗುತ್ತದೆ” ಎಂದು ತಿಳಿಸಲಾಗಿದೆ.

ದಿಗ್ವೇಶ್ ರಥಿ ಈ ರೀತಿ ಸಂಭ್ರಮಿಸಿದ್ದಕ್ಕಾಗಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ದಿಗ್ವೇಶ್ ರಥಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇಬ್ಬರ ನಡುವೆಯೂ ಮೈದಾನದಲ್ಲಿ ಮಾತಿನ ಚಕಮಕಿ ನಡೆಯಿತು. ಇಬ್ಬರ ನಡುವಣ ಜಗಳವು ತಾರಕ್ಕೇರುತ್ತಿದ್ದಂತೆ ಅಂಪೈರ್ ಹಾಗೂ ಸಹ ಆಟಗಾರರು ಮಧ್ಯ ಪ್ರವೇಶಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...

ಏಷ್ಯನ್ ಗೇಮ್ಸ್ 2026: ಶೂಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿ, 3ಕ್ಕೇರಿದ ಪದಕಗಳ ಸಂಖ್ಯೆ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರ ಕ್ರೀಡಾಕೂಟದಲ್ಲಿ ಭಾರತದ ಪದಕ...