ಐಪಿಎಲ್ 2025: ಮತ್ತೊಂದು ಹೊಸ ಇತಿಹಾಸ ನಿರ್ಮಿಸಿದ ಕನ್ನಡಿಗ ಕೆ ಎಲ್ ರಾಹುಲ್

Date:

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕನ್ನಡಿಗ ಕೆ ಎಲ್ ರಾಹುಲ್ ಅವರಿಂದ ಮತ್ತೊಂದು ಹೊಸ ಇತಿಹಾಸ ನಿರ್ಮಾಣವಾಗಿದೆ. ಲಖನೌದ ಏಕಾನ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ನ 40ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು.

- Advertisement -

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಖನೌ ಸೂಪರ್ ಜೈಂಟ್ಸ್ 159 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಕೆ ಎಲ್ ರಾಹುಲ್ 42 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅಜೇಯ 57 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ರಾಹುಲ್​ ಐಪಿಎಲ್​ನಲ್ಲಿ 5000 ರನ್ ಪೂರೈಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತೀ ವೇಗವಾಗಿ 5 ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆಯನ್ನು ಕೆ ಎಲ್ ರಾಹುಲ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದಿದ್ದ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಅವರ ಹೆಸರಿನಲ್ಲಿತ್ತು.

ಐಪಿಎಲ್​ನಲ್ಲಿ 184 ಪಂದ್ಯಗಳನ್ನಾಡಿರುವ ಡೇವಿಡ್ ವಾರ್ನರ್ 135 ಇನಿಂಗ್ಸ್​ಗಳ ಮೂಲಕ 5000 ರನ್ ಕಲೆಹಾಕಿದ್ದರು. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 5 ಸಾವಿರ ರನ್​ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಬಿಸಿಸಿಐ ಗುತ್ತಿಗೆಯಲ್ಲಿ ಸ್ಥಾನ ಪಡೆದ ಶ್ರೇಯಸ್‌ ಅಯ್ಯರ್, ಇಶಾನ್ ಕಿಶನ್; ಇಬ್ಬರು ಕನ್ನಡಿಗರಿಗೆ ಸ್ಥಾನ

ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಕೆ ಎಲ್ ರಾಹುಲ್ ಯಶಸ್ವಿಯಾಗಿದ್ದಾರೆ. ಕೇವಲ 130 ಇನಿಂಗ್ಸ್​ಗಳ ಮೂಲಕ ಕೆ ಎಲ್ ರಾಹುಲ್ 5000 ರನ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತೀ ವೇಗವಾಗಿ 5 ಸಾವಿರ ರನ್​ಗಳ ಗಡಿದಾಟಿದ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ರಾಹುಲ್ ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಲಖನೌ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 159 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17.5 ಓವರ್​ಗಳಲ್ಲಿ ಗುರಿ ತಲುಪುವ ಮೂಲಕ 8 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...