ಐಪಿಎಲ್ 2025 | ಎಸ್‌ಆರ್‌ಹೆಚ್‌ ಸೋಲಿಸಿದ ಲಖನೌ; ಮಿಂಚಿದ ಶಾರ್ದೂಲ್‌ ಠಾಕೂರ್‌

Date:

ಶಾರ್ದೂಲ್‌ ಠಾಕೂರ್‌, ನಿಕೋಲಸ್ ಪೂರನ್ ಮತ್ತು ಮಿಚೆಲ್ ಮಾರ್ಷ್ ಅದ್ಭುತ ಆಟದಿಂದ ಲಖನೌ ಸೂಪರ್ ಜೈಂಟ್ಸ್ ತಂಡ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 5 ವಿಕೆಟ್‌ಗಳ ಗೆಲುವು ಸಾಧಿಸಿದೆ.

- Advertisement -

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025ರ ಏಳನೇ ಪಂದ್ಯದಲ್ಲಿ ರಿಷಭ್ ಪಂತ್ ಪಡೆ ಐಪಿಎಲ್ 18ನೇ ಆವೃತ್ತಿಯ ಮೊದಲ ಗೆಲುವು ಕಂಡಿದೆ. ಕಳೆದ ಪಂದ್ಯದಲ್ಲಿ ಲಖನೌ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲು ಅನುಭವಿಸಿತ್ತು. ಇತ್ತ ಎಸ್‌ಆರ್‌ಹೆಚ್ ಕಳೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಸೋಲಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಈ ಪಂದ್ಯದಲ್ಲಿ ಟಾಸ್ ಗೆದ್ದ ಲಖನೌ ಸೂಪರ್ ಜೈಂಟ್ಸ್ ನಾಯಕ ರಿಷಭ್ ಪಂತ್ ಬೌಲಿಂಗ್ ಮಾಡಲು ನಿರ್ಧರಿಸಿದರು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡ ನಿಗದಿತ 20 ಓವರ್‌ಗಳಲ್ಲಿ 190 ರನ್‌ಗಳನ್ನು ಕಲೆ ಹಾಕಿತು. ಎಸ್‌ಆರ್‌ಹೆಚ್‌ ತಂಡದ ನೀಡಿದ ಸವಾಲಿನ ಗುರಿ ಬೆನ್ನಟ್ಟಿದ ಲಖನೌ ಸೂಪರ್ ಜೈಂಟ್ಸ್ ತಂಡ 5 ವಿಕೆಟ್ ಕಳೆದುಕೊಂಡು ಕೇವಲ 16.1ಓವರ್‍‌ಗಳಲ್ಲಿ 193 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ಈ ಸುದ್ದಿ ಓದಿದ್ದೀರಾ? ಐಪಿಎಲ್ 2025 | ಮಿಂಚಿದ ಇಶಾನ್ ಕಿಶನ್, ವಿಘ್ನೇಶ್ ಪುತ್ತೂರ್ ಮತ್ತು ನೂರ್ ಅಹ್ಮದ್

ಲಖನೌ ವಿರುದ್ಧದ ಪಂದ್ಯದಲ್ಲಿ ಎಸ್‌ಆರ್‌ಹೆಚ್‌ ಬೃಹತ್ ಮೊತ್ತ ಕಲೆ ಹಾಕುವ ಸಂದೇಶ ನೀಡಿತ್ತು. ಆದರೆ ಲಖನೌ ಸ್ಟಾರ್ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಎಸ್‌ಆರ್‌ಹೆಚ್‌ ಲೆಕ್ಕಚಾರವನ್ನು ತಲೆಕಳಗೆ ಮಾಡಿದರು. ಪರಿಣಾಮ ಎಸ್‌ಆರ್‌ಹೆಚ್‌ 200 ರನ್‌ಗಳ ಗಡಿಯನ್ನು ದಾಟಲು ಸಾಧ್ಯವಾಗಲಿಲ್ಲ. ಶಾರ್ದೂಲ್ ಠಾಕೂರ್ 4 ವಿಕೆಟ್ ಪಡೆದು ಮಿಂಚಿದರು.

ಹೈದರಾಬಾದ್ ಅಬ್ಬರಕ್ಕೆ ಬ್ರೇಕ್ ಲಖನೌ ಪರ ನಿಕೋಲಸ್ ಪೂರನ್ ಮತ್ತು ಮಿಚೆಲ್ ಮಾರ್ಷ್ ಮತ್ತೊಂದು ಬಿಗ್ ಇನಿಂಗ್ಸ್ ಆಡಿದರು. ಹೈದರಾಬಾದ್ ಬೌಲರ್‌ಗಳ ಬೆವರಿಳಿಸಿದ ಈ ಜೋಡಿ 116 ರನ್‌ಗಳ ಭರ್ಜರಿ ಜೊತೆಯಾಟ ಆಡುವ ಮೂಲಕ ಲಖನೌ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು.

ಸ್ಪೋಟಕ ಬ್ಯಾಟಿಂಗ್ ಮಾಡಿದ ಪೂರಾನ್ ಕೇವಲ 25 ಎಸೆತಗಳಲ್ಲಿ 6 ಬೌಂಡರಿ ಮತ್ತು 6 ಸಿಕ್ಸರ್‌ಗಳ ನೆರವಿನಿಂದ 70 ರನ್ ಗಳಿಸಿದರು. ಮಾರ್ಷ್ ಕೇವಲ 31 ಎಸೆತಗಳಲ್ಲಿ 7 ಬೌಂಡರಿ ಮತ್ತು 2 ಸಿಕ್ಸರ್‌ಗಳಿಂದ 52 ರನ್ ಬಾರಿಸಿ ಮಿಂಚಿದರು. ಇದಾದ ನಂತರ, ಕೊನೆಯಲ್ಲಿ ಅಬ್ದುಲ್ ಸಮದ್ (22) ಮತ್ತು ಡೇವಿಡ್ ಮಿಲ್ಲರ್ (13) ಒಟ್ಟಾಗಿ ಗುರಿಯನ್ನು ಸುಲಭವಾಗಿ ಬೆನ್ನಟ್ಟಿದರು.

ಎಸ್‌ಆರ್‌ಹೆಚ್‌ ಪರ ನಾಯಕ ಪ್ಯಾಟ್ ಕಮ್ಮಿನ್ಸ್ 2 ವಿಕೆಟ್ ಕಬಳಿಸಿದ ಸಂಭ್ರಮಿಸಿದರೆ, ಆಡಮ್ ಝಂಪಾ, ಹರ್ಷಲ್ ಪಟೇಲ್, ಮೊಹಮ್ಮದ್ ಶಮಿ ತಲಾ ಒಂದೊಂದು ವಿಕೆಟ್ ಪಡೆದರು. ಪಂದ್ಯದ ಪವರ್‌ ಪ್ಲೇನಲ್ಲಿ ಎರಡು ವಿಕೆಟ್‌ ಹಾಗೂ ಡೆತ್‌ ಓವರ್‌ಗಳಲ್ಲಿ ಎರಡು ವಿಕೆಟ್‌ ಪಡೆದು ಮಿಂಚಿದ ಶಾರ್ದೂಲ್‌ ಠಾಕೂರ್‌ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸದ್ಯ ಎಲ್‌ಎಸ್‌ಜಿ ಆಡಿದ 2 ಪಂದ್ಯಗಳಲ್ಲಿ 1 ಜಯ, 1 ಸೋಲು ಕಂಡಿದ್ದು ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...