ಐಪಿಎಲ್ 2023 | ಟಾಸ್‌ ಗೆದ್ದ ಲಖನೌ; ಮೊದಲ ಗೆಲುವಿನ ನಿರೀಕ್ಷೆಯಲ್ಲಿ ಸಿಎಸ್‌ಕೆ

Date:

ಐಪಿಎಲ್‌ 16ನೇ ಆವೃತ್ತಿಯ ಆರನೇ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಲಖನೌ ಸೂಪರ್‌ ಜೈಂಟ್ಸ್‌ ತಂಡ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಬ್ಯಾಟಿಂಗ್‌ ಅವಕಾಶ ನೀಡಿದೆ.

ನಾಲ್ಕು ಬಾರಿಯ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ಮಾತೃ ಪಿಚ್‌ನಲ್ಲಿ ಜಯ ಗಳಿಸುವ ಉತ್ಸಾಹದಲ್ಲಿದ್ದರೆ, ಮೊದಲ ಪಂದ್ಯ ಗೆದ್ದು ಹುಮ್ಮಸ್ಸಿನಲ್ಲಿರುವ ಲಖನೌ ಸೂಪರ್‌ ಜೈಂಟ್ಸ್‌ ಗೆಲುವಿನ ಸರಣಿಯನ್ನು ಮುಂದುವರೆಸುವ ತವಕದಲ್ಲಿದೆ.

ಮಾತೃ ಪಿಚ್ ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ ನಾಲ್ಕು ವರ್ಷಗಳ ಬಳಿಕ ಚೆನ್ನೈ ಸೂಪರ್ ಕಿಂಗ್ಸ್‌ ತಂಡ ಕಣಕ್ಕಿಳಿಯುತ್ತಿದೆ. 2008ರಿಂದ ಚೆನ್ನೈನಲ್ಲಿ ಆಡಿದ ಪಂದ್ಯದಲ್ಲಿ ಟಾಸ್‌ ಗೆದ್ದ ತಂಡ 7 ಬಾರಿ ಮೊದಲು ಬ್ಯಾಟಿಂಗ್‌ ಆಯ್ದುಕೊಂಡಿದ್ದರೆ, 12 ಬಾರಿ ಕ್ಷೇತ್ರ ರಕ್ಷಣೆ ಆಯ್ಕೆ ಮಾಡಿಕೊಂಡಿದೆ.

ಚೆಪಾಕ್‌ ಕ್ರೀಡಾಂಗಣದಲ್ಲಿ 54 ಬಾರಿ ಚೆನ್ನೈ ಸೂಪರ್ ಕಿಂಗ್ಸ್‌ ತಂಡವನ್ನು ಮುನ್ನಡೆಸಿರುವ ಎಂ ಎಸ್‌ ಧೋನಿ 40 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದಾರೆ. ಇದು 2019ರ ಬಳಿಕ ಎಂ ಎಸ್‌ ಧೋನಿಗೆ ಚೆನ್ನೈನಲ್ಲಿ ಮೊದಲ ಪಂದ್ಯವಾಗಿದೆ. ಲಖನೌ ತಂಡದ ಕೃನಾಲ್‌ ಪಾಂಡ್ಯ ಈ ಪಂದ್ಯದ ಮೂಲಕ 100ನೇ ಐಪಿಎಲ್‌ ಪಂದ್ಯದ ಸಾಧನೆ ಮಾಡಿದ್ದಾರೆ. ಬ್ಯಾಟಿಂಗ್‌ನಲ್ಲಿ ವಿಫಲವಾಗಿರುವ ಲಖನೌ ತಂಡದ ನಾಯಕ ಕೆ ಎಲ್‌ ರಾಹುಲ್‌ ಲಯ ಕಂಡುಕೊಳ್ಳುವ ತವಕದಲ್ಲಿದ್ದಾರೆ

ಪಂದ್ಯವಾಡುವ ಹನ್ನೊಂದರ ಬಳಗ

ಲಖನೌ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಕೈಲ್ ಮೇಯರ್ಸ್, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಮಾರ್ಕಸ್ ಸ್ಟೊಯಿನಿಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಆಯುಷ್ ಬಡೋನಿ, ಮಾರ್ಕ್ ವುಡ್, ರವಿ ಬಿಷ್ಣೋಯ್, ಯಶ್ ಠಾಕೂರ್, ಅವೇಶ್ ಖಾನ್

ಚೆನ್ನೈ ಸೂಪರ್ ಕಿಂಗ್ಸ್: ಡೆವೊನ್ ಕಾನ್ವೆ, ರುತುರಾಜ್ ಗಾಯಕ್‌ವಾಡ್, ಮೊಯಿನ್ ಅಲಿ, ಬೆನ್ ಸ್ಟೋಕ್ಸ್, ಅಂಬಟಿ ರಾಯುಡು, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ/ವಿಕೆಟ್ ಕೀಪರ್), ಶಿವಂ ದುಬೆ, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹಾರ್, ಆರ್‌ಎಸ್ ಹಂಗರ್ಗೇಕರ್

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ಆಸೀಸ್ ಕ್ರಿಕೆಟಿಗ ಮಿಚೆಲ್ ಮಾರ್ಷ್

ವಿಶ್ವಕಪ್‌ ಟ್ರೋಫಿ ಮೇಲೆ ಕಾಲಿಟ್ಟ ಬಗ್ಗೆ ಮೊದಲ ಬಾರಿಗೆ  ಆಸೀಸ್ ಕ್ರಿಕೆಟಿಗ...

ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ಮುಂದುವರಿಕೆ

ರಾಹುಲ್‌ ದ್ರಾವಿಡ್‌ ಅವರನ್ನು ಭಾರತ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್‌...

ಬೈಜೂಸ್‌ನಿಂದ 160 ಕೋಟಿ ಬಾಕಿ: ಕಂಪನಿ ಕಾನೂನುಗಳ ನ್ಯಾಯಮಂಡಳಿಯ ಮೊರೆಹೋದ ಬಿಸಿಸಿಐ

ಒಂದರ ನಂತರ ಒಂದಾಗಿ ಹಲವಾರು ಸಮಸ್ಯೆಗಳಲ್ಲಿ ಸಿಲುಕುತ್ತಾ ಬರುತ್ತಿರುವ ಬೈಜೂಸ್ ಈಗ...

ಟಿ20 | ರೋಚಕ ಪಂದ್ಯದಲ್ಲಿ ಶತಕದ ಮೂಲಕ ಪಂದ್ಯ ಗೆಲ್ಲಿಸಿದ ಮ್ಯಾಕ್ಸ್‌ವೆಲ್

ಕೊನೆಯ ಎಸೆತದವರೆಗೂ ತುದಿಗಾಲಲ್ಲಿ ನಿಲ್ಲಿಸಿದ ಪಂದ್ಯದಲ್ಲಿ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್...