ಐಪಿಎಲ್ | ಯಶ್ ಠಾಕೂರ್‌ಗೆ 5 ವಿಕೆಟ್ ಗೊಂಚಲು: ಗುಜರಾತ್‌ ಅನ್ನು ಸೋಲಿಸಿದ ಲಕ್ನೋ ಸೂಪರ್ ಜೈಂಟ್ಸ್‌

Date:

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ಇಂದು ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 21ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಗುಜರಾತ್ ಟೈಟನ್ಸ್ ತಂಡವನ್ನು 33 ರನ್‌ಗಳಿಂದ ಸೋಲಿಸಿದೆ.

- Advertisement -

ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. ಮಾರ್ಕ್‌ ಸ್ಟೋಯ್ನಿಸ್ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 163 ರನ್ ಗಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲಗೊಂಡ ಶುಭ್‌ಮನ್‌ ಗಿಲ್ ನೇತೃತ್ವದ ಗುಜರಾತ್ ತಂಡ, ಯಶ್ ಠಾಕೂರ್‌ ಅವರ ದಾಳಿಗೆ ಬಲಿಯಾಗಿ 18.5 ಓವರ್‌ಗಳಲ್ಲಿ 130 ರನ್‌ಗಳಿಗೆ ಆಲೌಟಾಯಿತು. ಲಕ್ನೋ ಪರ 3.5 ಓವರ್‌ಗಳನ್ನು ಎಸೆದ ಯಶ್ ಠಾಕೂರ್‌, ಕೇವಲ 30 ರನ್ ನೀಡಿ 5 ವಿಕೆಟ್‌ಗಳನ್ನು ಕಿತ್ತರು. ಆ ಮೂಲಕ ಈ ಸೀಸನ್‌(2024)ನಲ್ಲಿ 5 ವಿಕೆಟ್ ಗೊಂಚಲು ಪಡೆದ ಮೊದಲ ಬೌಲರ್ ಆಗಿ ಗುರುತಿಸಿಕೊಂಡರು.

ಶುಭ್​ಮನ್ ಗಿಲ್ 21 ಎಸೆತಗಳಲ್ಲಿ 19 ರನ್ ಗಳಿಸಿ ಔಟಾದರೆ, ರಾಹುಲ್ ತೆವಾಟಿಯಾ 30 ರನ್ ಗಳಿಸಿದರು. 31 ರನ್ ಗಳಿಸಿದ ಸಾಯಿ ಸುದರ್ಶನ್ ಗುಜರಾತ್ ಪರ ಹೆಚ್ಚು ಸ್ಕೋರರ್ ಎನಿಸಿದರು. 1 ರನ್ ಗಳಿಸಿದ್ದ ನ್ಯೂಜಿಲ್ಯಾಂಡಿನ ಕೇನ್ ವಿಲಿಯಮ್ಸನ್ ರವಿ ಬಿಷ್ಣೋಯ್ ಹಿಡಿದ ಅದ್ಭುತ ಕಾಟ್ & ಬೌಲ್ಢ್ ಕ್ಯಾಚ್‌ಗೆ ಬಲಿಯಾದರು. ಕೇನ್ ವಿಲಿಯಮ್ಸನ್ ತನ್ನತ್ತ ಬಾರಿಸಿದ್ದ ಚೆಂಡನ್ನು ಅದ್ಭುತವಾಗಿ ಹಕ್ಕಿಯಂತೆ ಹಾರಿ ಹಿಡಿಯುವ ಮೂಲಕ ಪೆವಿಲಿಯನ್ ಹಾದಿ ತೋರಿಸಿದರು.

ಕೊನೆಯಲ್ಲಿ ಗುಜರಾತ್ ಟೈಟನ್ಸ್ ತಂಡವು 18.5 ಓವರ್‌ಗಳಲ್ಲಿ 130 ರನ್‌ಗಳಿಗೆ ಆಲೌಟಾಯಿತು. ಲಕ್ನೋ ಹಾಗೂ ಗುಜರಾತ್ ಈವರೆಗೆ ಐಪಿಎಲ್‌ನಲ್ಲಿ ಆಡಿದ್ದ 4 ಪಂದ್ಯಗಳಲ್ಲಿ ಗುಜರಾತ್ ಮೇಲುಗೈ ಸಾಧಿಸಿತ್ತು. ಐದನೇ ಪಂದ್ಯದಲ್ಲಿ ಲಕ್ನೋ ತಂಡವು ಜಯಗಳಿಸುವ ಮೂಲಕ ಗುಜರಾತ್ ವಿರುದ್ಧ ಮೊದಲ ಗೆಲುವು ಪಡೆಯಿತು.

ಲಕ್ನೋ ತಂಡದ ಪರ ಯಶ್ ಠಾಕೂರ್ 5 ವಿಕೆಟ್ ಹೊರತುಪಡಿಸಿ, ಕೃನಾಲ್ ಪಾಂಡ್ಯಾ 3, ರವಿ ಬಿಷ್ಣೋಯ್ ಹಾಗೂ ನವೀನ್ ಉಲ್ ಹಕ್ ತಲಾ ಒಂದೊಂದು ವಿಕೆಟ್ ಪಡೆಯುವಲ್ಲಿ ಸಫಲರಾದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...