ಆರ್‌ಸಿಬಿ Vs ಚೆನ್ನೈ ಪಂದ್ಯದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂಗೆ ನುಗ್ಗೋದಾಗಿ ಹೇಳಿದ್ದವ ಪೊಲೀಸ್ ಅತಿಥಿ!

Date:

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಾಕಿ ಇರುವ ಒಂದು ಪ್ಲೇ-ಆಫ್ ಸ್ಥಾನಕ್ಕಾಗಿ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಧ್ಯೆ ‘ನಾಕೌಟ್’ ಪಂದ್ಯ ನಡೆಯಲಿದೆ. ಈ ಪಂದ್ಯದ ವೇಳೆಯಲ್ಲಿ ಸ್ಟೇಡಿಯಂಗೆ ನುಗ್ಗೋದಾಗಿ ಹೇಳಿ, ಪೊಲೀಸರಿಗೆ ಚಾಲೆಂಜ್ ಹಾಕಿದ್ದವ ಈಗ ಪೊಲೀಸರ ಅತಿಥಿಯಾಗಿದ್ದಾನೆ.

- Advertisement -

‘ಕ್ಲೌಟ್ ಚೇಸರ್ಸ್‌’ನ ಸಹ ಸಂಸ್ಥಾಪಕರಾಗಿರುವ ಬೆಂಗಳೂರಿನ ನಿತಿನ್ ಸಿಕ್ವೇರಾ ಎಂಬ ನೆಟ್ಟಿಗನೋರ್ವ, ” ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಧ್ಯೆ ಮೇ 18 ರಂದು ನಡೆಯಲಿರುವ ಐಪಿಎಲ್ ಪಂದ್ಯದ ಟಿಕೆಟ್ ನನಗೆ ಸಿಕ್ಕಿದೆ. ಈ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಾದ್ಯಂತ ಓಡುತ್ತೇನೆ” ಎಂದು ಪೊಲೀಸರಿಗೆ ಸವಾಲೆಸೆದಿದ್ದ. ಆತನ ಈ ಪೋಸ್ಟ್‌ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು. ಆ ಬಳಿಕ ಅದು ಸುದ್ದಿಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಪೋಸ್ಟ್‌ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ಆತನ ವೈರಲ್ ಪೋಸ್ಟ್ ಆಧರಿಸಿ ಮುನ್ನೆಚ್ಚರಿಕೆ ವಹಿಸಿ, ಆತನನ್ನು ಶನಿವಾರ ಬೆಳಗ್ಗೆ ಬಂಧಿಸಿರುವುದಾಗಿ ತಿಳಿದುಬಂದಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬೆಂಗಳೂರು ನಗರ ಪೊಲೀಸರು, “ಒಳ್ಳೆಯ ಪ್ರಯತ್ನ, ಗೆಳೆಯ. ಆದರೆ ಐಪಿಎಲ್ ಪಂದ್ಯದ ಸಮಯದಲ್ಲಿ ಭದ್ರತೆಯನ್ನು ಉಲ್ಲಂಘಿಸಲು ಪ್ರಯತ್ನಿಸಿದರೆ ನೇರವಾಗಿ ಹೊಡೆಯುವ ಸಿಕ್ಸ್‌ ನಮ್ಮ ಕಸ್ಟಡಿಗೆ ಬರಲಿದೆ ಎಂಬುದು ಗ್ಯಾರಂಟಿ. ಕ್ಷಮಿಸು ಸಂಗಾತಿ, ನೀನು ಸ್ಟಂಪ್‌ ಆಗಿದ್ದೀಯಾ” ಎಂದು ಟ್ರೋಲ್‌ ಶೈಲಿಯಲ್ಲಿ ಪೋಸ್ಟ್‌ ಮಾಡಿದ್ದಾರೆ. ಪೊಲೀಸರ 30 ಸೆಕೆಂಡ್‌ನ ವಿಡಿಯೋ ಪೋಸ್ಟ್‌ ಈಗ ವೈರಲ್ ಆಗಿದೆ.

ಯುವಕ ನಿತಿನ್ ಸಿಕ್ವೇರಾನನ್ನು ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಶನಿವಾರ ಬೆಳಗ್ಗೆ ಬಂಧಿಸಿರುವುದಾಗಿ ಬೆಂಗಳೂರು ಪೊಲೀಸರು ಮಾಹಿತಿ ನೀಡಿದ್ದಾರೆ.

ಬೆಂಗಳೂರು ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮಕ್ಕೆ ಹಲವು ಮಂದಿ ಶ್ಲಾಘಿಸಿದ್ದು, “ಭದ್ರತೆಗೆ ಸವಾಲೆಸೆಯುವವರಿಗೆ ತಕ್ಕಪಾಠ ಕಲಿಸಿದ್ದೀರಿ” ಎಂದು ಮೆಚ್ಚುಗೆ ಸೂಚಿಸಿದ್ದಾರೆ.

ಐಪಿಎಲ್ ಪಂದ್ಯದ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ನೀಡಲಾಗಿದೆ. ಐಪಿಎಲ್ ಪಂದ್ಯ ಬಂದೋಬಸ್ತ್‌ಗೆ 1,200 ಪೊಲೀಸರನ್ನು ನಿಯೋಜಿಸಲಾಗಿದೆ.

ಇದನ್ನು ಓದಿದ್ದೀರಾ? ಐಪಿಎಲ್ | ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದು, ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ ಸೂಪರ್ ಕಿಂಗ್ಸ್‌

ನಾಲ್ವರು ಡಿಸಿಪಿಗಳು, 12 ಎಸಿಪಿ, 28 ಇನ್ಸ್ಪೆಕ್ಟರ್, 80 ಸಬ್ ಇನ್ಸ್ಪೆಕ್ಟರ್ ಸೇರಿ ಒಟ್ಟು 1,200 ಪೊಲೀಸರನ್ನು ಕ್ರೀಡಾಂಗಣದ ಸುತ್ತಮುತ್ತ ನಿಯೋಜಿಸಲಾಗಿದೆ. 4 ಕೆಎಸ್‌ಆರ್‌ಪಿ ತುಕಡಿ, ಹೋಂ ಗಾರ್ಡ್ ಸಹ ಭದ್ರತೆಗೆ ನಿಯೋಜನೆ ಮಾಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...