ಮನು ಭಾಕರ್‌ ಪರವಾಗಿ ಅಭಿನಂದನಾ ಜಾಹೀರಾತು ನೀಡಿಕೆ: ಹಲವು ಕಂಪನಿಗಳಿಗೆ ಲೀಗಲ್‌ ನೋಟಿಸ್

Date:

ಪ್ಯಾರಿಸ್ ಒಲಿಂಪಿಕ್ಸ್‌ 2024ರಲ್ಲಿ ಕಂಚಿನ ಪದಕ ಗೆದ್ದ ಭಾರತದ 22 ವರ್ಷದ ಆಟಗಾರ್ತಿ ಮನು ಭಾಕರ್‌ ಅವರೊಂದಿಗೆ ಪ್ರಾಯೋಜಕತ್ವ ಒಪ್ಪಂದ ಹೊಂದಿಲ್ಲದ ಹಲವು ಕಂಪನಿಗಳು ಆಕೆಯ ವಿಡಿಯೋಗಳು ಹಾಗೂ ಭಾವಚಿತ್ರಗಳನ್ನು ಬಳಸಿ ತಮ್ಮ ಬ್ರಾಂಡ್‌ನೊಂದಿಗೆ ಅಭಿನಂದನಾ ಜಾಹೀರಾತು ನೀಡುತ್ತಿವೆ.

- Advertisement -

ಅಧಿಕೃತವಾಗಿ ಮನು ಭಾಕರ್‌ ಅವರ ಕ್ರೀಡೆ ಹಾಗೂ ಮನರಂಜನೆಯ ನಿರ್ವಹಣೆಯ ಒಪ್ಪಂದ ಹೊಂದಿರುವ ಐಒಎಸ್‌ ಸ್ಪೋರ್ಟ್ಸ್‌ ಆಂಡ್ ಎಂಟರ್‌ಟೈನ್‌ಮೆಂಟ್ ಕಂಪನಿಯ ಯಾವುದೇ ಅನುಮತಿ ಪಡೆಯದೆ ಜಾಹೀರಾತು ನೀಡುತ್ತಿರುವ ಕಂಪನಿಗಳಿಗೆ ಲೀಗಲ್‌ ನೋಟಿಸ್‌ ನೀಡಲಾಗಿದೆ. ಕಂಪನಿ ವ್ಯವಸ್ಥಾಪಕರು ಲೀಗಲ್‌ ನೋಟಿಸ್‌ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ನಿನ್ನೆಯಿಂದ ಮನು ಭಾಕರ್‌ ಅವರೊಂದಿಗೆ ಅಧಿಕೃತವಾಗಿ ಪ್ರಾಯೋಜಕತ್ವ ಹೊಂದಿರದ 12ಕ್ಕೂ ಹೆಚ್ಚು ಕಂಪನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಮನು ಅವರ ಭಾವಚಿತ್ರಗಳು ಹಾಗೂ ತಮ್ಮ ಕಂಪನಿಗಳ ಉತ್ಪನ್ನಗಳನ್ನು ಬಳಸಿ ಅಭಿನಂದನಾ ಜಾಹೀರಾತು ಪ್ರಕಟಿಸಿವೆ. ಇವುಗಳು ಕಾನೂನಾತ್ಮಕವಾಗಿ ಅನುಮತಿ ಪಡೆದಿಲ್ಲ. ಈ ಕಂಪನಿಗಳಿಗೆ ನಾವು ಲೀಗಲ್‌ ನೋಟಿಸ್‌ ನೀಡುತ್ತೇವೆ” ಎಂದು ಐಒಎಸ್ ಸ್ಪೋರ್ಟ್ಸ್ ಆಂಡ್ ಎಂಟರ್‌ಟೈನ್‌ಮೆಂಟ್ ಸಂಸ್ಥೆಯ ಎಂಡಿ ನೀರವ್‌ ತೋಮರ್‌ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ಯಾರಿಸ್ ಒಲಿಂಪಿಕ್ಸ್ 2024 | ಭಾರತಕ್ಕೆ ಮೊದಲ ಪದಕ; 10 ಮೀಟರ್‌ ಏರ್‌ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್‌

ಬಜಾಜ್‌ ಫುಡ್ಸ್, ಎಲ್‌ಐಸಿ, ಎಫ್‌ಐಐಟಿಜೆಇಇ, ಓಕ್‌ವುಡ್ ಇಂಟರ್‌ ನ್ಯಾಷನಲ್‌ ಸ್ಕೂಲ್‌, ರಾಧಾ ಟಿಎಂಟಿ, ಪಾರುಲ್‌ ಆಯುರ್ವೇದ ಆಸ್ಪತ್ರೆ ಒಳಗೊಂಡ ಕಂಪನಿಗಳಿಗೆ ಲೀಗಲ್‌ ನೋಟಿಸ್‌ ನೀಡಲಾಗಿದೆ.

ಮನು ಭಾಕರ್‌ ಪ್ರಸ್ತುತ ಪರ್‌ಪೋರ್‌ಮ್ಯಾಕ್ಸ್ ಆಕ್ಟೇವ್‌ವೇರ್‌ ಫಿಟ್‌ನೆಸ್‌ ಫ್ಯಾಷನ್‌ ಕಂಪನಿಗೆ ಮಾತ್ರ ಜಾಹೀರಾತಿಗೆ ಸಮ್ಮತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಲೀಗಲ್‌ ನೋಟಿಸ್‌ ನೀಡಲಾಗಿರುವ ಕಂಪನಿಗಳ ವಿರುದ್ಧ ಭಾರತದಲ್ಲಿ ಕಾನೂನು ಪ್ರಕ್ರಿಯೆಗಳು ಮುಂದುವರಿಯಲಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

3 ಗಂಟೆಗಳ ರೋಚಕ ಹೋರಾಟ: ಯುಎಸ್ ಓಪನ್ ಮೊದಲ ಸುತ್ತಿನಲ್ಲೇ ವಿಲಿಯಮ್ಸ್ ಸಹೋದರಿಯರಿಗೆ ಸೋಲು

ಅಮೆರಿಕನ್ ಓಪನ್ ಟೆನಿಸ್ ಟೂರ್ನಿಯಲ್ಲಿ ವಿಸ್ಮಯಕಾರಿ ಪುನರಾಗಮನದ ನಿರೀಕ್ಷೆಯಲ್ಲಿದ್ದ ಲೆಜೆಂಡರಿ ಜೋಡಿ...

75ನೇ ವರ್ಷದ ಬಾಂಧವ್ಯ: ಭಾರತ-ಜಪಾನ್ ನಡುವೆ ಚೊಚ್ಚಲ ಟಿ20 ಕ್ರಿಕೆಟ್

ಭಾರತ ಹಾಗೂ ಜಪಾನ್ ನಡುವಿನ 75ನೇ ವರ್ಷದ ರಾಜತಾಂತ್ರಿಕ ಬಾಂಧವ್ಯದ ಸಂಭ್ರಮಾಚರಣೆಯ...

ಏಷ್ಯನ್ ಗೇಮ್ಸ್ | ಟೀಂ ಇಂಡಿಯಾಗೆ ‘ವೆರಿ ವೆರಿ ಸ್ಪೆಷಲ್’; ವಿವಿಎಸ್‌ ಲಕ್ಷ್ಮಣ್ ಹೆಡ್‌ ಕೋಚ್!

ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನಲ್ಲಿ ಜಸ್‌ಪ್ರೀತ್ ಬೂಮ್ರಾ, ಶ್ರೇಯಸ್ ಅಯ್ಯರ್ ಹಾಗೂ...

ನೂರಾರು ವಿವಾದ, ಅದಕ್ಕೂ ಮೀರಿದ ಮನುಷ್ಯತ್ವ: ಮೆಸ್ಸಿಯ 21 ವರ್ಷದ ಪಯಣದತ್ತ ಒಂದು ಹಿನ್ನೋಟ

ಲಿಯೋನೆಲ್ ಮೆಸ್ಸಿ ಎಂಬ ದಂತಕಥೆಯನ್ನು ನಾವು ಅತ್ಯಂತ ಸಮತೋಲಿತ ದೃಷ್ಟಿಕೋನದಿಂದ ನೋಡಬೇಕಾಗಿದೆ....