ವಿಶ್ವಕಪ್ ಕ್ರಿಕೆಟ್ | ನೆದರ್‌ಲ್ಯಾಂಡ್ಸ್‌ ವಿರುದ್ಧ ಆಸ್ಟ್ರೇಲಿಯಾಗೆ 309 ರನ್‌ಗಳ ಬೃಹತ್ ಗೆಲುವು

Date:

ಬುಧವಾರ(ಅ. 25) ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ 24ನೇ ಪಂದ್ಯದಲ್ಲಿ ನೆದರ್‌ಲ್ಯಾಂಡ್ಸ್‌ ತಂಡ ಆಸ್ಟ್ರೇಲಿಯಾ ವಿರುದ್ಧ ಹೀನಾಯ ಸೋಲು ಅನುಭವಿಸಿದೆ.

- Advertisement -

ಗೆಲ್ಲಲು 400 ರನ್‌ಗಳ ಬೃಹತ್ ಗುರಿ ಪಡೆದಿದ್ದ ನೆದರ್‌ಲ್ಯಾಂಡ್ಸ್‌ ತಂಡ, 21 ಓವರ್‌ಗಳಲ್ಲಿ 90 ರನ್‌ಗಳಿಗೆ ಆಲೌಟ್ ಆಗುವ ಮೂಲಕ 309 ರನ್‌ಗಳಿಂದ ಸೋಲೊಪ್ಪಿಕೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಆಸೀಸ್‌ನ ಬಿಗು ಬೌಲಿಂಗ್‌ಗೆ ರನ್ ಗಳಿಸಲು ಪರದಾಡಿದ ನೆದರ್‌ಲ್ಯಾಂಡ್ಸ್‌ ತಂಡದ ಪರ ಆರಂಭಿಕ ಆಟಗಾರ ವಿಕ್ರಮ್‌ಜೀತ್‌ ಸಿಂಗ್ 25 ರನ್‌ ಗಳಿಸಿದ್ದು ಮಾತ್ರ ಅತಿ ಹೆಚ್ಚು ರನ್‌. ಮೂವರು ಆಟಗಾರರು ಶೂನ್ಯ ಸುತ್ತಿದರು. ನೆದರ್‌ಲ್ಯಾಂಡ್ಸ್‌ ತಂಡದ ನಾಯಕ ಸ್ಕಾಟ್ ಎಡ್‌ವರ್ಡ್ಸ್ 12 ರನ್ ಗಳಿಸಿ ಔಟಾಗದೆ ಉಳಿದರು.

ಇದನ್ನು ಓದಿದ್ದೀರಾ? ವಿಶ್ವಕಪ್ ಕ್ರಿಕೆಟ್ | ಅತ್ಯಂತ ವೇಗದ ಶತಕ ಬಾರಿಸಿ ದಾಖಲೆ ಸೃಷ್ಟಿಸಿದ ಮ್ಯಾಕ್ಸ್‌ವೆಲ್

ಆಸ್ಟ್ರೇಲಿಯಾ ಪರ ಸ್ಪಿನ್ನರ್ ಆಡಂ ಝಾಂಪ ಮೂರು ಓವರ್ ಎಸೆದು ಕೇವಲ 8 ರನ್ ನೀಡಿ 4 ವಿಕೆಟ್ ಕಬಳಿಸಿದು. ಉಳಿದಂತೆ ಮಿಚೆಲ್ ಮಾರ್ಷ್ 19ಕ್ಕೆ 2, ವೇಗಿಗಳಾದ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಝಲ್‌ವುಡ್ ತಲಾ ಒಂದೊಂದು ವಿಕೆಟ್ ಗಳಿಸಿದರು.

ಮೊದಲು ಬ್ಯಾಟಿಂಗ್ ನಡೆಸಿದ್ದ ಆಸ್ಟ್ರೇಲಿಯಾ ತಂಡ, ಡೇವಿಡ್ ವಾರ್ನರ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಅವರ ವಿಶ್ವದಾಖಲೆಯ ಭರ್ಜರಿ ಶತಕದ ನೆರವಿನಿಂದ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 399 ರನ್‌ಗಳನ್ನು ಗಳಿಸಿ, ನೆದರ್‌ಲ್ಯಾಂಡ್ಸ್‌ಗೆ 400 ರನ್‌ಗಳ ಗುರಿ ನೀಡಿತ್ತು.

ವಿಶ್ವ ದಾಖಲೆಯ ಶತಕ ಸಿಡಿಸಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಕೇವಲ 44 ಎಸೆತಗಳಲ್ಲಿ 9 ಬೌಂಡರಿ ಹಾಗೂ 8 ಭರ್ಜರಿ ಸಿಕ್ಸ್‌ನ ನೆರವಿನೊಂದಿಗೆ 106 ರನ್ ಗಳಿಸಿ, ಔಟಾಗಿದ್ದರು. ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...