ಪಾಕಿಸ್ತಾನ ಕ್ರಿಕೆಟ್‌ಗೆ ಮತ್ತೆ ‘ಮ್ಯಾಚ್ ಫಿಕ್ಸಿಂಗ್’ ಕಳಂಕ: 7 ಮಂದಿ ತಂಡದಿಂದ ಔಟ್

Date:

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ನಡುವೆಯೇ ಪಾಕಿಸ್ತಾನ ಕ್ರಿಕೆಟ್ ತಂಡ ಹಾಗೂ ಪಾಕಿಸ್ತಾನ ಕ್ರಿಕೆಟ್ ಮಂಡಳಿಯನ್ನು (ಪಿಸಿಬಿ) ‘ಮ್ಯಾಚ್ ಫಿಕ್ಸಿಂಗ್’ ಭೂತ ಮತ್ತೆ ಕಾಡಲಾರಂಭಿಸಿದೆ.

- Advertisement -

​ಲಾರ್ಡ್ಸ್ ಮೈದಾನದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ 194 ರನ್‌ಗಳ ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ, ಪಿಸಿಬಿ ಏಳು ಮಂದಿ ಪ್ರಮುಖ ಆಟಗಾರರನ್ನು ತಂಡದಿಂದ ಕೈಬಿಟ್ಟಿದೆ. ಮೊಹಮ್ಮದ್ ರಿಜ್ವಾನ್, ಸಲ್ಮಾನ್ ಅಲಿ ಆಘಾ, ಇಮಾಮ್-ಉಲ್-ಹಕ್, ಅಲಿ ಉಸ್ಮಾನ್, ಖುರ್ರಂ ಶಹಜಾದ್, ಆಮಿರ್ ಜಮಾಲ್ ಹಾಗೂ ಮುಹಮ್ಮದ್ ಉವೈಸ್ ಜಾಫರ್ ಅವರನ್ನು ತಂಡದಿಂದ ಹೊರಹಾಕಲಾಗಿದೆ. ಇಷ್ಟೇ ಅಲ್ಲದೆ, ಮುಖ್ಯ ಕೋಚ್ ಸರ್ಫರಾಜ್ ಅಹ್ಮದ್ ಮತ್ತು ಬೌಲಿಂಗ್ ಕೋಚ್ ಉಮರ್ ಗುಲ್ ಅವರನ್ನು ಸಹ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

​ಇವರ ಬದಲಿಗೆ ಐವರು ಹೊಸಬರು ಸೇರಿ ಒಟ್ಟು ಏಳು ಮಂದಿ ಆಟಗಾರರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಸೈಮ್ ಅಯೂಬ್, ಅಬ್ದುಲ್ಲಾ ಫಜಲ್ ಜೊತೆಗೆ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿರದ ರಝಾವುಲ್ಲಾ ಖಾನ್, ಮೊಹಮ್ಮದ್ ಇಮ್ರಾನ್, ಅರಾಫತ್ ಮಿನ್ಹಾಸ್, ಸಾದ್ ಬೇಗ್, ಮತ್ತು ಮೊಹಮ್ಮದ್ ಇಮ್ರಾನ್ ಜೂನಿಯರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಕೇವಲ ಕಳಪೆ ಪ್ರದರ್ಶನವಷ್ಟೇ ಅಲ್ಲದೆ, “ಕ್ರಿಕೆಟ್ ಮೀರಿದ” ಇತರ ಗಂಭೀರ ಕಾರಣಗಳಿಗಾಗಿ ಪಾಕಿಸ್ತಾನ ಕ್ರಿಕೆಟ್‌ನಲ್ಲಿ ಈ ದಿಢೀರ್ ಹಾಗೂ ಭಾರೀ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

​ಪಾಕಿಸ್ತಾನದ ‘365 ನ್ಯೂಸ್’ ವರದಿ ಮಾಡಿರುವ ಪ್ರಕಾರ, ಆಟಗಾರರ ಮೊಬೈಲ್ ಫೋನ್‌ಗಳನ್ನು ಪಿಸಿಬಿ ವಶಪಡಿಸಿಕೊಂಡಿದ್ದು, ಅಂತಿಮ ಟೆಸ್ಟ್ ಪಂದ್ಯ ಮುಗಿಯುವವರೆಗೂ ಅವು ಮಂಡಳಿಯ ಸುಪರ್ದಿಯಲ್ಲೇ ಇರಲಿವೆ. ಆದರೆ ಯಾವೆಲ್ಲಾ ಆಟಗಾರರ ಫೋನ್‌ಗಳನ್ನು ಜಪ್ತಿ ಮಾಡಲಾಗಿದೆ ಮತ್ತು ಅದರ ಹಿಂದಿನ ನಿಖರ ಕಾರಣವೇನು ಎಂಬುದನ್ನು ಮಂಡಳಿ ಅಧಿಕೃತವಾಗಿ ಬಹಿರಂಗಪಡಿಸಿಲ್ಲ.

​ಶಿಸ್ತು ಉಲ್ಲಂಘನೆ ಮತ್ತು ಆಟಗಾರರ ನಡವಳಿಕೆಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ವರದಿಯಾದ ಬಳಿಕ ಪಿಸಿಬಿ ಆಂತರಿಕ ಶಿಸ್ತು ವಿಚಾರಣೆಯನ್ನು ಆರಂಭಿಸಿದೆ ಎಂದು ಪಿಸಿಬಿಯ ಮಾಧ್ಯಮ ಮತ್ತು ಡಿಜಿಟಲ್ ಸಂವಹನ ನಿರ್ದೇಶಕ ಅಮೀರ್ ಮೀರ್ ಸ್ಪಷ್ಟಪಡಿಸಿದ್ದಾರೆ. ಮಂಡಳಿಯ ನಿಯಮಾವಳಿಗಳ ಪ್ರಕಾರ ಈ ಪ್ರಕ್ರಿಯೆ ನಡೆಯುತ್ತಿದ್ದು, ಎಲ್ಲರಿಗೂ ತಮ್ಮ ಹಕ್ಕು ಮಂಡಿಸಲು ಅವಕಾಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

​ಇದೇ ವೇಳೆ, ಲಾರ್ಡ್ಸ್ ಟೆಸ್ಟ್‌ನಲ್ಲಿ ಸ್ನಾಯು ಸೆಳೆತದ (ಕಾಫ್ ಟಿಯರ್) ನೆಪವೊಡ್ಡಿ ಎರಡೂ ಇನ್ನಿಂಗ್ಸ್‌ಗಳಲ್ಲಿ ಬ್ಯಾಟಿಂಗ್‌ಗೆ ಇಳಿಯದ ಆರಂಭಿಕ ಆಟಗಾರ ಇಮಾಮ್-ಉಲ್-ಹಕ್ ವಿರುದ್ಧ ಪಿಸಿಬಿ ಹೈ ಪರ್ಫಾರ್ಮೆನ್ಸ್ ನಿರ್ದೇಶಕ ಆಕಿಬ್ ಜಾವೇದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಹಿಂದೆಲ್ಲಾ ಆಟಗಾರರು ಗಾಯಗೊಂಡರೂ ಪ್ಲಾಸ್ಟರ್ ಹಾಕಿಕೊಂಡು ಆಡಲು ಪ್ರಯತ್ನಿಸುತ್ತಿದ್ದರು. ಸ್ನಾಯು ಸೆಳೆತದ ಕಾರಣ ನೀಡಿ ಬ್ಯಾಟಿಂಗ್ ಮಾಡದಿರುವುದು ಹೇಗೆ ಸಾಧ್ಯ? ಇದರ ಬಗ್ಗೆ ತನಿಖೆ ನಡೆಸಲಾಗುವುದು,” ಎಂದು ಅವರು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾಖಲೆಯ ರನ್ ಬೆನ್ನತ್ತಿದ ಭಾರತಕ್ಕೆ ಜಯ: ನ್ಯೂಜಿಲೆಂಡ್ ವಿರುದ್ಧ ಮಿಂಚಿದ ಸಂಜು ಸ್ಯಾಮ್ಸನ್

ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡವು ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು ಇಳಿಕೆ: ಯಾವೆಲ್ಲ ಔಷಧಿ ಅಗ್ಗ? ಪಡೆಯುವ ವಿಧಾನ ಹೇಗೆ?

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ...

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...