ಕೊಹ್ಲಿಯ ಬ್ಯಾಟಿಂಗ್ ಪರಾಕ್ರಮದ ಬಗ್ಗೆ ಕ್ರಿಕೆಟ್ ವಿವರಣೆಕಾರ ಮ್ಯಾಥ್ಯೂ ಹೇಡನ್ ಹೇಳಿದ್ದೇನು?

Date:

ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಪ್ಲೇಆಫ್‌ಗಳು ಸಮೀಪಿಸುತ್ತಿರುವಂತೆ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಪರಾಕ್ರಮದ ಬಗ್ಗೆ ಆಸ್ಟ್ರೇಲಿಯಾದ ಮಾಜಿ ಆರಂಭಿಕ ಆಟಗಾರ ಮ್ಯಾಥ್ಯೂ ಹೇಡನ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.

- Advertisement -

ಆರ್‌ಸಿಬಿಯ ಸ್ಟಾರ್ ಪ್ಲೇಯರ್ ಕೊಹ್ಲಿಯ 2016ರ ಸೀಸನ್‌ನ ಆಟದ ಬಗ್ಗೆ ಹೇಡನ್ ಮಾತನಾಡಿದ್ದಾರೆ. 2016ರಲ್ಲಿ ವಿರಾಟ್ 16 ಪಂದ್ಯಗಳಲ್ಲಿ ನಾಲ್ಕು ಶತಕಗಳು ಸೇರಿ 973 ರನ್‌ಗಳನ್ನು ಗಳಿಸಿದ್ದು, ಆರೆಂಜ್ ಕ್ಯಾಪ್ ಗೆದಿದ್ದರು. ಜೊತೆಗೆ ಆರ್‌ಸಿಬಿ ಫೈನಲ್ ತಲುಪಲು ಅಭೂತಪೂರ್ವ ಕೊಡುಗೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಮಾತನಾಡಿದ ಹೇಡನ್, ಕೊಹ್ಲಿಯ ಪ್ರಸ್ತುತ ಫಾರ್ಮ್ ಮತ್ತು ದೃಢನಿರ್ಧಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ?  ಐಪಿಎಲ್ | ಧರ್ಮಶಾಲಾದಲ್ಲಿ ಮಿಂಚಿದ ವಿರಾಟ್ ಕೊಹ್ಲಿ: ಆರ್‌ಸಿಬಿಗೆ ಪಂಜಾಬ್ ವಿರುದ್ಧ ಭರ್ಜರಿ ಜಯ

“ಅವರು (ಕೊಹ್ಲಿ) ಐಪಿಎಲ್ 2016ರ ಪ್ರದರ್ಶನವನ್ನು ನಾವು ಇಂದಿಗೂ ನೆನಯಬಹುದು. ಆದ್ದರಿಂದ ಎಲ್ಲಕ್ಕಿಂತ ಹೆಚ್ಚಾಗಿ, ಇದು ಶಕ್ತಿ ಮತ್ತು ಆಟದ ಪ್ರೀತಿ, ಉತ್ಸಾಹ, ಬದ್ಧತೆಯನ್ನು ವಿವರಿಸುತ್ತದೆ ಎಂದು ನಾನು ಭಾವಿಸುತ್ತೇನೆ. ಮೈದಾನದಲ್ಲಿರಲಿ ಅಥವಾ ಕೈಯಲ್ಲಿ ಬ್ಯಾಟ್ ಇರಲಿ ನೀವು ಈ ಮಹಾನ್ ವ್ಯಕ್ತಿಯನ್ನು ವೈಭವೀಕರಿಸಬಹುದು. ಇದು ಕ್ರೇಜ್ ಆಗಿದೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಅಂಪೈರ್ ಜೊತೆ ವಾಗ್ವಾದ: ಕೊಹ್ಲಿಗೆ ಶೇ.50 ರಷ್ಟು ದಂಡ

ವಿರಾಟ್ ಕೊಹ್ಲಿ ಈ ಐಪಿಎಲ್ ಸೀಸನ್‌ನಲ್ಲಿ 14 ಪಂದ್ಯಗಳಲ್ಲಿ 708 ರನ್ ಗಳಿಸಿದ್ದಾರೆ. ಇನ್ನು ಆರ್‌ಸಿಬಿ ಫೈನಲ್‌ಗೆ ತಲುಪಿದರೆ ಇನ್ನೂ ಮೂರು ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿ ಆಡಬಹುದು.

ಇನ್ನು ಸಿಎಸ್‌ಕೆ ವಿರುದ್ಧದ ಆರ್‌ಸಿಬಿ ಪಂದ್ಯದ ಸಂದರ್ಭದಲ್ಲಿ ಮೈದಾನದಲ್ಲಿ ಕೊಹ್ಲಿಯ ತೀವ್ರತೆಯನ್ನು ಹೇಡನ್ ಬೊಟ್ಟು ಮಾಡಿದ್ದಾರೆ. ಆರ್‌ಸಿಬಿ ತವರಿನ ಪ್ರೇಕ್ಷಕರನ್ನು ಸೆಳೆಯುವ ಮತ್ತು ಎದುರಾಳಿ ತಂಡದ ಬೆಂಬಲಿಗರನ್ನು ಮೌನಗೊಳಿಸುವ ಕೊಹ್ಲಿ ಸಾಮರ್ಥ್ಯವನ್ನು ಉಲ್ಲೇಖಿಸಿದ್ದಾರೆ.

“ವಿಷಯವೆಂದರೆ, ಅವರು (ಕೊಹ್ಲಿ) ತುಂಬಾ ಬದ್ಧರಾಗಿದ್ದಾರೆ ಮತ್ತು ಅವರು ಅದನ್ನು ಪ್ರೇಕ್ಷಕರಿಗೆ ಸಹ ನೀಡುತ್ತಾರೆ. ಅವರು ಸಿಎಸ್‌ಕೆ ಅಭಿಮಾನಿಗಳಿಗೆ ಶಾಂತವಾಗಿರಲು ಒಂದೆರಡು ಬಾರಿ ಹೇಳಿದ್ದಾರೆ” ಎಂದು ಹೇಡನ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಐಪಿಎಲ್ | ವಿರಾಟ್ ಕೊಹ್ಲಿ ಬಳಿಕ ಅತಿ ಹೆಚ್ಚು ಶತಕ ಸಿಡಿಸಿದ ಬ್ಯಾಟರ್ ಜೋಸ್ ಬಟ್ಲರ್

ಆರ್‌ಸಿಬಿ ತಂಡವು ಲೀಗ್ ಹಂತವನ್ನು ಏಳು ಗೆಲುವು, ಏಳು ಸೋಲುಗಳು ಮತ್ತು 14 ಅಂಕಗಳನ್ನು ಹೊಂದಿರುವ ಸಿಎಸ್‌ಕೆ, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್‌ಗಿಂತ ಹೆಚ್ಚಿನ ನೆಟ್-ರನ್-ರೇಟ್‌ನೊಂದಿಗೆ ನಾಲ್ಕನೇ ಸ್ಥಾನದಲ್ಲಿ ಮುಗಿಸಿದೆ.

ಮೇ 22 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಆರ್‌ಸಿಬಿ ರಾಜಸ್ಥಾನ್ ರಾಯಲ್ಸ್ ಅನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ವಿಜೇತ ತಂಡ ಮೇ 24 ರಂದು ಚೆನ್ನೈನಲ್ಲಿ ಕ್ವಾಲಿಫೈಯರ್ 2 ಆಟವನ್ನು ಆಡಲಿದೆ. ಫೈನಲ್ ಪಂದ್ಯ ಮೇ 26ರಂದು ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...