ಪಾರಗ್ವೈ ಮಣಿಸಿದ ಫ್ರಾನ್ಸ್: ಎಂಬಾಪೆ ಮಿಂಚು, ಕ್ವಾರ್ಟರ್ ಫೈನಲ್‌ನಲ್ಲಿ ಮೊರೊಕ್ಕೊ ಮುಖಾಮುಖಿ

Date:

ಭಾರಿ ಕುತೂಹಲ ಕೆರಳಿಸಿದ್ದ 2026ರ ಫಿಫಾ ವಿಶ್ವಕಪ್ ಟೂರ್ನಿಯ ಪ್ರಿಕ್ವಾರ್ಟರ್ ಫೈನಲ್ (16ರ ಘಟ್ಟದ) ಪಂದ್ಯದಲ್ಲಿ ಮಾಜಿ ಚಾಂಪಿಯನ್ ಫ್ರಾನ್ಸ್ ತಂಡವು 1-0 ಗೋಲಿನ ಅಂತರದಿಂದ ಪಾರಗ್ವೈ ತಂಡವನ್ನು ಮಣಿಸಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ. ಅಮೆರಿಕದ ಲಿಂಕನ್ ಫೈನಾನ್ಷಿಯಲ್ ಫೀಲ್ಡ್ ಕ್ರೀಡಾಂಗಣದಲ್ಲಿ ನಡೆದ ಈ ರೋಚಕ ಪಂದ್ಯದಲ್ಲಿ ಕಠಿಣ ಸವಾಲು ಎದುರಿಸಿದ ಫ್ರಾನ್ಸ್, ಅಂತಿಮವಾಗಿ ಗೆಲುವಿನ ನಗೆ ಬೀರಿದೆ. ಈ ಜಯದೊಂದಿಗೆ ಫ್ರಾನ್ಸ್ ತಂಡವು ಮುಂದಿನ ಎಂಟರ ಘಟ್ಟದ ಪಂದ್ಯದಲ್ಲಿ ಬಲಿಷ್ಠ ಮೊರೊಕ್ಕೊ ತಂಡದ ಸವಾಲನ್ನು ಎದುರಿಸಲು ಸಜ್ಜಾಗಿದೆ.

- Advertisement -

ಭಾರಿ ಬಿಸಿಲಿನ ವಾತಾವರಣದಲ್ಲಿ ನಡೆದ ಈ ಪಂದ್ಯದಲ್ಲಿ ಉಭಯ ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. 32ರ ಘಟ್ಟದ ಪಂದ್ಯದಲ್ಲಿ ಜರ್ಮನಿ ತಂಡವನ್ನು ಪೆನಾಲ್ಟಿ ಶೂಟೌಟ್‌ನಲ್ಲಿ ಮಣಿಸಿ ಅಚ್ಚರಿ ಮೂಡಿಸಿದ್ದ ಪೆರಗ್ವೆ, ಈ ಪಂದ್ಯದಲ್ಲೂ ಅತ್ಯುತ್ತಮ ರಕ್ಷಣಾತ್ಮಕ ಆಟ ಪ್ರದರ್ಶಿಸಿತು.ಪಾರಗ್ವೈ ಯ ಭದ್ರಕೋಟೆಯನ್ನು ಭೇದಿಸಲು ಫ್ರಾನ್ಸ್ ಆಟಗಾರರು ಪಂದ್ಯದ ಬಹುಪಾಲು ಸಮಯ ಹರಸಾಹಸ ಪಡಬೇಕಾಯಿತು. ಫ್ರಾನ್ಸ್‌ಗೆ ಗೋಲು ಗಳಿಸುವ ಯಾವುದೇ ಸುಲಭ ಅವಕಾಶವನ್ನು ಪೆರಗ್ವೆ ಆಟಗಾರರು ಬಿಟ್ಟುಕೊಡಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಆದರೆ, ದ್ವಿತೀಯಾರ್ಧದಲ್ಲಿ ಫ್ರಾನ್ಸ್ ಪರ ಬದಲೀ ಆಟಗಾರನಾಗಿ ಕಣಕ್ಕಿಳಿದ ಡೆಸಿರೆ ಡೂಯೆ (Désiré Doué) ಪಂದ್ಯದ ಗತಿಯ ಧಿಕ್ಕನ್ನೇ ಬದಲಿಸಿದರು. 70ನೇ ನಿಮಿಷದಲ್ಲಿ ಅವರು ಪೆನಾಲ್ಟಿ ಬಾಕ್ಸ್‌ನೊಳಗೆ ವೇಗವಾಗಿ ನುಗ್ಗುತ್ತಿದ್ದಾಗ ಪೆರಗ್ವೆಯ ಡಿಯಾಗೋ ಗೊಮೆಜ್ ಅವರನ್ನು ಕೆಡವಿದರು. ತಕ್ಷಣವೇ ‘ವಿಎಆರ್’ (VAR) ಪರಿಶೀಲನೆ ನಡೆಸಿದ ರೆಫರಿ ಫ್ರಾನ್ಸ್‌ಗೆ ಪೆನಾಲ್ಟಿ ಅವಕಾಶ ನೀಡಿದರು. ಈ ಸುವರ್ಣ ಅವಕಾಶವನ್ನು ಬಳಸಿಕೊಂಡ ಸ್ಟಾರ್ ಆಟಗಾರ ಕಿಲಿಯನ್ ಎಂಬಾಪೆ, ಚೆಂಡನ್ನು ಅತ್ಯಂತ ಚಾಣಾಕ್ಷತೆಯಿಂದ ಗುರಿ ಮುಟ್ಟಿಸುವ ಮೂಲಕ ತಂಡಕ್ಕೆ 1-0 ಮುನ್ನಡೆ ತಂದುಕೊಟ್ಟರು. ಅಂತಿಮವಾಗಿ ಇದೇ ಗೋಲು ಫ್ರಾನ್ಸ್ ತಂಡದ ಗೆಲುವಿಗೆ ನಿರ್ಣಾಯಕವಾಯಿತು.

ಇದು ಪ್ರಸಕ್ತ ವಿಶ್ವಕಪ್ ಟೂರ್ನಿಯಲ್ಲಿ ಎಂಬಾಪೆ ಗಳಿಸಿದ 7ನೇ ಗೋಲು ಆಗಿದ್ದು, ಇದರೊಂದಿಗೆ ಅವರು ಅತಿ ಹೆಚ್ಚು ಗೋಲು ಗಳಿಸಿದವರ ಪಟ್ಟಿಯಲ್ಲಿ (ಗೋಲ್ಡನ್ ಬೂಟ್ ರೇಸ್) ಲಿಯೊನೆಲ್ ಮೆಸ್ಸಿ ಅವರೊಂದಿಗೆ ಜಂಟಿ ಅಗ್ರಸ್ಥಾನಕ್ಕೇರಿದ್ದಾರೆ. ಶನಿವಾರ ನಡೆದ ಮತ್ತೊಂದು ಪಂದ್ಯದಲ್ಲಿ ಕೆನಡಾ ವಿರುದ್ಧ 3-0 ಅಂತರದ ಭರ್ಜರಿ ಜಯ ಸಾಧಿಸಿರುವ ಮೊರೊಕ್ಕೊ ತಂಡವನ್ನು ಫ್ರಾನ್ಸ್ ಕ್ವಾರ್ಟರ್ ಫೈನಲ್‌ನಲ್ಲಿ ಎದುರಿಸಲಿದೆ. 2022ರ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಮುಖಾಮುಖಿಯಾಗಿದ್ದ ಈ ಎರಡು ತಂಡಗಳು ಇದೀಗ ಮತ್ತೆ ಮುಖಾಮುಖಿಯಾಗುತ್ತಿರುವುದು ಫುಟ್‌ಬಾಲ್ ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಸುಪ್ರೀಂ ಕೋರ್ಟ್’ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ: ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ನಕಲಿ ಸುಪ್ರೀಂ ಕೋರ್ಟ್ ಆದೇಶವನ್ನು ಬಳಸಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬನನ್ನು...

ಬೀದರ್‌ | ಅ.7ರಂದು ಆಣದೂರ ಆರೋಗ್ಯ ಕೇಂದ್ರದಲ್ಲಿ ಸಾಮೂಹಿಕ ರಕ್ತದಾನ ಶಿಬಿರ

ಬೀದರ್‌ ತಾಲೂಕಿನ ಆಣದೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಅ.7ರಂದು ಬೆಳಿಗ್ಗೆ...

ಧಾರವಾಡ | ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ...