ಐಪಿಎಲ್ 2025 | ಇಂದು ಆರ್‌ಸಿಬಿ – ಮುಂಬೈ ಹಣಾಹಣಿ; ಇಬ್ಬರಲ್ಲಿ ಯಾರು ಬಲಿಷ್ಠರು?

Date:

Advertisements

ರಜತ್ ಪಾಟಿದಾರ್ ಸಾರಥ್ಯದ ಆರ್‌ಸಿಬಿ ಈ ಬಾರಿಯ ಐಪಿಎಲ್‌ ಆವೃತ್ತಿಯಲ್ಲಿ ವಿನೂತನ ರೀತಿಯಲ್ಲಿ ಕಾಣಿಸುತ್ತಿದೆ. ಹೊಸ ಬಲಿಷ್ಠ ಆರ್‌ಸಿಬಿ ತಂಡವು ಆಡಿರುವ ಮೂರು ಪಂದ್ಯಗಳಲ್ಲಿ 2 ರಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಕೊನೆಯ ಪಂದ್ಯವನ್ನು ತವರಿನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್‌ಸಿಬಿ ಸೋತಿದೆ. ಆದರೆ ಆರ್‌ಸಿಬಿ ತಂಡದಲ್ಲಿ ಪಂದ್ಯದ ಗತಿಯನ್ನೇ ಬದಲಾಯಿಸಬಲ್ಲ ಎಲ್ಲ ರೀತಿಯ ಆಟಗಾರರಿದ್ದಾರೆ

ಐಪಿಎಲ್ ಆವೃತ್ತಿ18ರ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಜಿದ್ದಾಜಿದ್ದಿನ ಪೈಪೋಟಿಯನ್ನು ನಿರೀಕ್ಷಿಸಬಹುದು. ಮುಂಬೈ ಇಂಡಿಯನ್ಸ್ ತಂಡವನ್ನು ತವರಿನಲ್ಲಿ ಸೋಲಿಸುವುದು ಅಷ್ಟು ಸುಲಭವಲ್ಲ. ಆದರೆ ಈ ಬಾರಿ ಆರ್​ಸಿಬಿ ಹೊಸ ಹುಮ್ಮಸ್ಸಿನಲ್ಲಿದೆ. ಚೆಪಾಕ್ ಸ್ಟೇಡಿಯಂನಲ್ಲಿ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ 17 ವರ್ಷಗಳ ಬಳಿಕ ಸೋಲಿಸಿರುವ ಆರ್​ಸಿಬಿ ಇದೀಗ ಮುಂಬೈನಲ್ಲೂ ಗೆಲುವಿನ ಪತಾಕೆ ಹಾರಿಸುವ ವಿಶ್ವಾಸದಲ್ಲಿದೆ.

10 ವರ್ಷಗಳಿಂದ ಆರ್‌ಸಿಬಿಗೆ ಗೆಲುವಿಲ್ಲ

Advertisements

ಆರ್‌ಸಿಬಿ ತಂಡ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ವಿರುದ್ಧ ಪಂದ್ಯ ಗೆದ್ದು 10 ವರ್ಷಗಳೇ ಕಳೆದಿವೆ. ಕೊನೆಯ ಬಾರಿ ಬೆಂಗಳೂರು ವಿಜಯ ಸಾಧಿಸಿದ್ದು 2015 ರಲ್ಲಿ. ಇದಾದ ಬಳಿಕ ಒಮ್ಮೆಯೂ ತವರಿನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಲು ಆಗಿಲ್ಲ. ವಾಂಖೆಡೆ ಕ್ರೀಡಾಂಗಣದಲ್ಲಿ ಆರ್​ಸಿಬಿ ಮತ್ತು ಮುಂಬೈ ಇಂಡಿಯನ್ಸ್ ಇಲ್ಲಿಯವರೆಗೂ 6 ಬಾರಿ ಮುಖಾಮುಖಿಯಾಗಿವೆ. 2016 ರಲ್ಲಿ ಆರ್‌ಸಿಬಿ ತಂಡವನ್ನು ಮುಂಬೈ 6 ವಿಕೆಟ್‌ಗಳಿಂದ ಸೋಲಿಸಿದರೆ, 2018 ರಲ್ಲಿ ಮುಂಬೈ ತಂಡ ಆರ್​ಸಿಬಿಯನ್ನು 46 ರನ್‌ಗಳಿಂದ ಮಣಿಸಿತ್ತು.

2019 ರಲ್ಲಿ ಆರ್​ಸಿಬಿ ವಿರುದ್ಧ ಮುಂಬೈ ಇಂಡಿಯನ್ಸ್ 5 ವಿಕೆಟ್‌ಗಳಿಂದ ಗೆಲುವು ದಾಖಲಿಸಿತ್ತು. 2023 ರಲ್ಲಿ 6 ವಿಕೆಟ್‌ಗಳಿಂದ ಮತ್ತು 2024 ರಲ್ಲಿ 7 ವಿಕೆಟ್‌ಗಳಿಂದ ಮುಂಬೈ ಇಂಡಿಯನ್ಸ್ ಪಡೆ ಜಯ ಸಾಧಿಸಿತ್ತು. 2015ರ ಬಳಿಕ ಆರ್​ಸಿಬಿ ತಂಡ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ದಾಖಲಿಸಿಲ್ಲ. ಇದೀಗ ಹೊಸ ಪಡೆಯೊಂದಿಗೆ ಕಣಕ್ಕಿಳಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10 ವರ್ಷಗಳ ಸೋಲಿನ ಹಣೆಪಟ್ಟಿಯನ್ನು ಕಳಚುವ ವಿಶ್ವಾಸದಲ್ಲಿದೆ.

ಉತ್ತಮ ಪ್ರದರ್ಶನ ನೀಡದ ಮುಂಬೈ

ಐಪಿಎಲ್ 2025 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪ್ರದರ್ಶನ ಇಲ್ಲಿವರೆಗೆ ಉತ್ತಮವಾಗಿಲ್ಲ. ಐದು ಬಾರಿ ಪ್ರಶಸ್ತಿ ಗೆದ್ದಿರುವ ಮುಂಬೈ ಇಂಡಿಯನ್ಸ್ ತಂಡವು ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಸೋಲನ್ನು ಎದುರಿಸಿದೆ. ಈ ಪಂದ್ಯ ಹಾರ್ದಿಕ್ ಪಾಂಡ್ಯ ಪಡೆಗೆ ಅಗ್ನಿಪರೀಕ್ಷೆ ಎದುರಾಗಿದೆ. ತವರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಲು ಮುಂಬೈ ಇಂಡಿಯನ್ಸ್ ತಂತ್ರ ರೂಪಿಸಿದೆ. ಐಪಿಎಲ್‌ನಲ್ಲಿ ಯಾವಾಗಲೂ ನಿಧಾನಗತಿಯ ಆರಂಭವನ್ನು ಹೊಂದಿರುವ ಮುಂಬೈ ಇಂಡಿಯನ್ಸ್, ನಾಲ್ಕು ಪಂದ್ಯಗಳಲ್ಲಿ ಮೂರು ಸೋಲುಗಳ ನಂತರ ಪ್ರಸ್ತುತ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಆದರೆ ಜಸ್ಪ್ರೀತ್ ಬುಮ್ರಾ ಅವರ ಆಗಮನದಿಂದ ಮುಂಬೈ ಇಂಡಿಯನ್ಸ್ ಅದೃಷ್ಟ ಬದಲಾಗುವ ನಿರೀಕ್ಷೆಯಿದೆ.

ರಜತ್ ಪಾಟಿದಾರ್ ಮುನ್ನಡೆಸುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2025 ರಲ್ಲಿ ವಿಭಿನ್ನವಾಗಿ ಕಾಣಿಸುತ್ತಿದೆ. ಹೊಸ ಬಲಿಷ್ಠ ಆರ್‌ಸಿಬಿ ತಂಡವು ಆಡಿರುವ ಮೂರು ಪಂದ್ಯಗಳಲ್ಲಿ 2 ರಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಕೊನೆಯ ಪಂದ್ಯವನ್ನು ತವರಿನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್‌ಸಿಬಿ ಸೋತಿದೆ. ಆದರೆ ಆರ್‌ಸಿಬಿ ತಂಡದಲ್ಲಿ ಪಂದ್ಯದ ಗತಿಯನ್ನೇ ಬದಲಾಯಿಸಬಲ್ಲ ಎಲ್ಲ ರೀತಿಯ ಆಟಗಾರರಿದ್ದಾರೆ. ಹೀಗಾಗಿ ಇಂದು ತವರಿನಲ್ಲಿ ಆರ್‌ಸಿಬಿ ತಂಡವನ್ನು ಎದುರಿಸುವುದು ಮುಂಬೈ ಇಂಡಿಯನ್ಸ್‌ಗೆ ಸವಾಲಾಗಿದೆ.

‘ಮುಂಬೈ ಇಂಡಿಯನ್ಸ್ ತಂಡವು ಆರಂಭಿಕ ಹಂತದಲ್ಲಿ ಹೆಚ್ಚು ಬ್ಯಾಟರ್‌ಗಳನ್ನು ಹೊಂದಿಲ್ಲ. ಆದರೆ ಅವರ ಅನುಭವವು ಇತರರಿಂದ ಪ್ರತ್ಯೇಕಿಸುತ್ತದೆ. ನಮ್ಮಲ್ಲಿ ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್, ತಿಲಕ್ ಮತ್ತು ಹಾರ್ದಿಕ್ ಪಾಂಡ್ಯರಂತಹ ಆಟಗಾರರಿದ್ದಾರೆ. ಅವರು ನಮಗೆ ಸ್ಟಾರ್ ಆಟಗಾರರು. ಬಹುಶಃ ನಮ್ಮಲ್ಲಿರುವ ಅನುಭವವು ಇತರ ಕೆಲವು ತಂಡಗಳಿಗೆ ಇಲ್ಲದಿರಬಹುದು. ನಮ್ಮಲ್ಲಿ ಅಗ್ರ ಕ್ರಮಾಂಕದಲ್ಲಿ ಅಷ್ಟೊಂದು ಅನುಭವಿ ಆಟಗಾರರು ಇಲ್ಲ. ಆದರೂ ನಾವು ಬಲಶಾಲಿಯಾಗಿದ್ದೇವೆ. ನಾವು ಯಾವುದೇ ತಂಡವನ್ನು ಸೋಲಿಸುವ ಸಾಮರ್ಥ್ಯವನ್ನು ಹೊಂದಿದ್ದೇವೆ. ಕೆಲವು ಸಂದರ್ಭಗಳಲ್ಲಿ ನಾವು ಸ್ವಲ್ಪ ಹೆಚ್ಚು ಆಕ್ರಮಣಕಾರಿ ಆಗಿರಬೇಕು. ನಾನು ಅದನ್ನು ಬ್ಯಾಟಿಂಗ್ ಮೇಲೆ ಮಾತ್ರ ಹಾಕುತ್ತಿಲ್ಲ. ಏಕೆಂದರೆ ಬೌಲಿಂಗ್‌ನಲ್ಲಿಯೂ ನಾವು ವಿಷಯಗಳನ್ನು ಸ್ವಲ್ಪ ಉತ್ತಮವಾಗಿ ನಿಯಂತ್ರಿಸಬಹುದಿತ್ತು. ಕಳೆದ ವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಆಟ ಪ್ರದರ್ಶಿಸಿದಂತೆ, ಆಟಗಾರರು ತಮ್ಮ ವಿಧಾನದಲ್ಲಿ ಆಕ್ರಮಣಕಾರಿಯಾಗಿ ವರ್ತಿಸಬೇಕು’ ಎಂದು ಮಹೇಲಾ ಜಯವರ್ಧನೆ ಹೇಳುತ್ತಾರೆ.

ವಿರಾಟ್‌ ಮೇಲೆ ಎಲ್ಲರ ಚಿತ್ತ

ಮೂರು ಪಂದ್ಯಗಳಲ್ಲಿ ಎರಡನ್ನು ಗೆದ್ದಿರುವ ಆರ್‌ಸಿಬಿ ತಂಡ ಹುಮ್ಮಸ್ಸಿನಲ್ಲಿದೆ. ಮೊದಲ 2 ಪಂದ್ಯಗಳಲ್ಲಿ ಸಂಘಟಿತ ಆಟವನ್ನು ಪ್ರದರ್ಶಿಸಿ ಗೆಲುವನ್ನು ದಾಖಲಿಸಿತ್ತು. ಉದ್ಘಾಟನಾ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಹಾಗೂ ಚೆನ್ನೈನಲ್ಲಿ ಸಿಎಸ್‌ಕೆ ತಂಡವನ್ನು ಬಗ್ಗುಬಡಿದಿತ್ತು. ಆದರೆ ಮೂರನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಆರ್‌ಸಿಬಿ ಗೆಲುವಿಗೆ ತಡೆ ನೀಡಿತ್ತು. ಹೀಗಾಗಿ ಮುಂಬೈ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಬ್ಯಾಟರ್‌ಗಳು ಜವಾಬ್ದಾರಿಯುತ ಆಟವನ್ನು ಆಡುವ ಅನಿವಾರ್ಯತೆಯಿದೆ. ಆರಂಭಿಕ ಹಂತದಲ್ಲಿ ಕಾಣಿಸಿಕೊಳ್ಳುವ ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್‌ ದೊಡ್ಡ ಇನಿಂಗ್ಸ್ ಕಟ್ಟಬೇಕಿದೆ. ಆರಂಭದಲ್ಲಿ ತಾಳ್ಮೆಯಿಂದ ಆಟವಾಡಿ ನಂತರ ವೇಗವಾಗಿ ರನ್‌ ಕಲೆ ಹಾಕುವತ್ತ ಗಮನಹರಿಸಬೇಕು. ಇಂದಿನ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಮೇಲೆ ಹೆಚ್ಚಿನ ಭರವಸೆಯಿದೆ.

ಮಧ್ಯಮ ಕ್ರಮಾಂಕದಲ್ಲಿ ಕಾಣಿಸಿಕೊಳ್ಳುವ ದೇವದತ್ ಪಡಿಕ್ಕಲ್‌ ತಮ್ಮ ಉತ್ತಮ ಪ್ರದರ್ಶನವನ್ನು ತೋರಿಸಬೇಕಿದೆ. ನಾಯಕ ರಜತ್ ಪಟಿದಾರ್ ಈ ಆವೃತ್ತಿಯಲ್ಲಿ ತಮ್ಮ ಸ್ಥಿರ ಪ್ರದರ್ಶನದ ಮೂಲಕ ರನ್‌ಗಳನ್ನು ಕಲೆ ಹಾಕಿದ್ದಾರೆ. ಇದೇ ಪ್ರದರ್ಶನ ಮುಂದುವರಿದರೆ ಮುಂಬೈ ವಿರುದ್ಧ ಉತ್ತಮ ಸ್ಕೋರ್‌ ಕಲೆಹಾಕಬಹುದು. ಜಿತೇಶ್‌ ಶರ್ಮಾ, ಲಿಯಾಮ್‌ ಲಿವಿಂಗ್‌ಸ್ಟೋನ್‌ ಕೊನೆಯ ಓವರ್‌ಗಳಲ್ಲಿ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕಿದೆ. ಸ್ಫೋಟಕ ಆಟಗಾರ ಟೀಮ್ ಡೇವಿಡ್‌ ತಮ್ಮ ಬಿರುಸಿನ ಬ್ಯಾಟಿಂಗ್‌ನಿಂದ ಎದುರಾಳಿ ಬೌಲರ್‌ಗಳನ್ನು ಕಾಡಿದರೆ ಭರ್ಜರಿ ಮೊತ್ತವನ್ನೆ ಕಲೆಹಾಕಬಹುದು.

ಇನ್ನೂ ಬೌಲಿಂಗ್‌ ವಿಭಾಗಕ್ಕೆ ಬಂದರೆ ಜೋಶ್‌ ಹ್ಯಾಜಲ್‌ವುಡ್‌ಗೆ, ಸ್ವಿಂಗ್‌ ಸುಲ್ತಾನ್‌ ಭುವನೇಶ್ವರ್ ಕುಮಾರ್‌ ಉತ್ತಮ ಜೊತೆ ನೀಡಬೇಕಿದೆ. ಈ ಇಬ್ಬರೂ ಬೌಲರ್‌ಗಳು ಪವರ್‌ ಪ್ಲೇನಲ್ಲಿ ವಿಕೆಟ್‌ ಕಬಳಿಸುವ ಅನಿವಾರ್ಯತೆಯಿದೆ. ಮಧ್ಯದ ಓವರ್‌ಗಳಲ್ಲಿ ಲಿಯಾಮ್‌ ಲಿವಿಂಗ್‌ಸ್ಟೋನ್‌ ಬಿಗುವಿನ ದಾಳಿ ನಡೆಸಿ ಭರವಸೆಯನ್ನು ಮೂಡಿಸಿದ್ದಾರೆ. ಕೃನಾಲ್ ಪಾಂಡ್ಯ, ಸುಯೇಶ್ ಶರ್ಮಾ ತಮ್ಮ ಸ್ಪಿನ್ ಮೋಡಿಯ ಮೂಲಕ ಎದುರಾಳಿ ಬ್ಯಾಟರ್‌ಗಳನ್ನು ಪೆವಿಲಿಯನ್‌ಗೆ ಕಳಿಸಬೇಕಿದೆ. ಎಡಗೈ ವೇಗಿ ಯಶ್ ದಯಾಳ್ ಅಂತಿಮ ಓವರ್‌ಗಳಲ್ಲಿ ಬಿಗುವಿನ ದಾಳಿ ನಡೆಸಿದರೆ ತಂಡ ಯಶಸ್ಸು ಗಳಿಸುವುದರಲ್ಲಿ ಯಾವುದೇ ಸಂದೇಹವಿಲ್ಲ.

ಉಭಯ ತಂಡಗಳ 11ರ ಬಳಗ

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹೇಜಲ್‌ವುಡ್, ಯಶ್ ದಯಾಲ್.

ಇಂಪ್ಯಾಕ್ಟ್ ಆಟಗಾರ: ಸುಯಶ್ ಶರ್ಮಾ/ರಾಸಿಖ್ ದಾರ್ ಸಲಾಂ

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ರಿಯಾನ್ ರಿಕಲ್ಟನ್ (ವಿಕೆಟ್ ಕೀಪರ್), ವಿಲ್ ಜಾಕ್ಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ರಾಜ್ ಅಂಗದ್ ಬಾವಾ/ಜಸ್ಪ್ರೀತ್ ಬುಮ್ರಾ, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ಟ್ರೆಂಟ್ ಬೌಲ್ಟ್.

ಇಂಪ್ಯಾಕ್ಟ್ ಆಟಗಾರ: ವಿಘ್ನೇಶ್ ಪುತ್ತೂರು/ಅಶ್ವನಿ ಕುಮಾರ್

ಪಂದ್ಯದ ಸಮಯ: ಸಂಜೆ 7.30

ನೇರ ಪ್ರಸಾರ: ಜಿಯೋ ಹಾಟ್‌ಸ್ಟಾರ್ ಆಪ್‌ ಹಾಗೂ ಸ್ಟಾರ್‌ ಸ್ಪೋರ್ಟ್ಸ್

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X