ಐಪಿಎಲ್ 2024 : ಮೊದಲ ಗೆಲುವು ದಾಖಲಿಸಿದ ಮುಂಬೈ, ಡೆಲ್ಲಿಗೆ 4ನೇ ಸೋಲು

Date:

ಐಪಿಎಲ್ 2024ರ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಮೂರು ಸೋಲಿನ ನಂತರ ಮೊದಲ ಗೆಲುವು ದಾಖಲಿಸಿದೆ.

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್  ತಂಡವನ್ನು ರೋಚಕವಾಗಿ ಮಣಿಸಿದೆ. ಇದರೊಂದಿಗೆ ಟೂರ್ನಿಯ ಅಂಕಪಟ್ಟಿಯಲ್ಲಿ ಪಾಯಿಂಟ್ ಖಾತೆ ತೆರೆದಿದೆ. ಪೃಥ್ವಿ ಶಾ ಹಾಗೂ ಟ್ರಿಸ್ಟಾನ್ ಸ್ಟಬ್ಸ್ ಆಕರ್ಷಕ ಅರ್ಧಶತಕದ ಹೊರತಾಗಿಯೂ ಡೆಲ್ಲಿ ತಂಡ ಸೋಲು ಕಂಡಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಮುಂಬೈ, ತಂಡದ ಸಾಂಘಿಕ ಪ್ರಯತ್ನದ ಫಲವಾಗಿ 5 ವಿಕೆಟ್ ನಷ್ಟಕ್ಕೆ 234 ರನ್ ಗಳಿಸಿತು. ಬೃಹತ್ ಗುರಿ ಬೆನ್ನಟ್ಟಿದ ಡೆಲ್ಲಿ, 8 ವಿಕೆಟ್ ಕಳೆದುಕೊಂಡು 205 ರನ್ ಗಳಿಸಲಷ್ಟೇ ಶಕ್ತವಾಗಿ 29 ರನ್‌ಗಳಿಂದ ಪರಾಭವಗೊಂಡಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮೊದಲು ಮೊದಲು ಬ್ಯಾಟಿಂಗ್ ನಡೆಸಿದ ಮುಂಬೈ ಇಂಡಿಯನ್ಸ್ ಸ್ಫೋಟಕ ಪ್ರಾರಂಭ ಪಡೆಯಿತು. ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಭರ್ಜರಿ 80 ರನ್‌ಗಳ ಜೊತೆಯಾಟವಾಡಿದರು. ಕೇವಲ 27 ಎಸೆತಗಳಲ್ಲಿ 6 ಬೌಂಡರಿ ಹಾಗೂ 3 ಸಿಕ್ಸರ್ ನಂದಿಗೆ 49 ರನ್ ಗಳಿಸಿದ್ದ ಹಿಟ್‌ಮ್ಯಾನ್, ಅರ್ಧಶತಕದ ಹೊಸ್ತಿಲಲ್ಲಿ ಔಟಾದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮರೆಯಲಾರದ, ಮರೆಯಬಾರದ ಮನಮೋಹನ ಈ ಸಿಂಗ್

ಅಕ್ಷರ್ ಪಟೇಲ್ ಎಸೆತದಲ್ಲಿ ರೋಹಿತ್ ಕ್ಲೀನ್ ಬೋಲ್ಡ್ ಆದರು. ಈ ವೇಳೆ ಮೈದಾನಕ್ಕಿಳಿದ ಮತ್ತೊಬ್ಬ ಸ್ಫೋಟಕ ಆಟಗಾರ ಸೂರ್ಯಕುಮಾರ್ ಯಾದವ್, ಎರಡು ಎಸೆತಗಳನ್ನು ಎದುರಿಸಿ ಶೂನ್ಯಕ್ಕೆ ಪೆವಿಲಿಯನ್‌ಗೆ ತೆರಳಿದರು.

ಅಬ್ಬರ ಮುಂದುವರೆಸಿದ ಇಶಾನ್ ಕಿಶನ್ 23 ಎಸೆತಗಳಲ್ಲಿ 42 ರನ್ ಸಿಡಿಸಿದರು. ಪಂದ್ಯಾವಳಿಯಲ್ಲಿ ಉತ್ತಮ ಲಯದಲ್ಲಿದ್ದ ತಿಲಕ್ ವರ್ಮಾ, 6 ರನ್ ಗಳಿಸಿ ಖಲೀಲ್ ಅಹಮದ್‌ಗೆ ವಿಕೆಟ್ ಒಪ್ಪಿಸಿದರು. ನಿಧಾನಗತಿಯಲ್ಲಿ ಜವಾಬ್ದಾರಿಯುತ ಆಟವಾಡಿದ ನಾಯಕ ಹಾರ್ದಿಕ್ ಪಾಂಡ್ಯ, 118.18ರ ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸಿ 39 ರನ್ ಮಾತ್ರ ಗಳಿಸಿದರು.

ಕೊನೆಯ ಓವರ್‌ಗಳಲ್ಲಿ ಟಿಮ್ ಡೇವಿಡ್ ಮತ್ತು ರೊಮಾರಿಯೋ ಶೆಫರ್ಡ್ ಬಿರುಸಿನ ಆಟವಾಡಿದರು. 214.29ರ ಸ್ಟ್ರೈಕ್ ರೇಟ್ನಲ್ಲಿ ಬ್ಯಾಟಿಂಗ್ ಮಾಡಿದ ಡೇವಿಡ್, 4 ಸ್ಫೋಟಕ ಸಿಕ್ಸರ್ ಸಹಿತ 45 ರನ್ ಗಳಿಸಿದರು. ಶೆಫರ್ಡ್ ಆಟ ಆಕ್ರಮಣಕಾರಿಯಾಗಿತ್ತು. ಕೇವಲ 10 ಎಸೆತಗಳಲ್ಲಿ 4 ಸಿಕ್ಸರ್ ಸಹಿತ 39 ರನ್ ಬಾರಿಸಿದರು. 390.00ರ ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸಿದ ಅವರು, ನಾರ್ಟ್ಜೆ ಎಸೆದ ಕೊನೆಯ ಓವರ್ ಒಂದರಲ್ಲೇ ನಾಲ್ಕು ಸಿಕ್ಸರ್ ಸಹಿತ 32 ರನ್ ಪೇರಿಸಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ಯಾರಾಲಿಂಪಿಕ್ಸ್ | ಶಾಟ್‌ ಪುಟ್‌: ಬೆಳ್ಳಿ ಗೆದ್ದ ಸಚಿನ್ ಖಿಲಾರಿ; ಭಾರತಕ್ಕೆ 21ನೇ ಪದಕ

ಬುಧವಾರ ನಡೆದ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರ ಪುರುಷರ ಶಾಟ್ ಪುಟ್ ಎಫ್46...

ಪ್ಯಾರಾಲಿಂಪಿಕ್ಸ್ | ಹೈಜಂಪ್; ಭಾರತಕ್ಕೆ ಬೆಳ್ಳಿ ಗೆದ್ದುಕೊಟ್ಟ ನಿಶಾದ್ ಕುಮಾರ್

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಸೆಪ್ಟೆಂಬರ್ 2ರಂದು ನಡೆದ ಪುರುಷರ ಹೈಜಂಪ್ - T47...

ಭಾರತ ಅಂಡರ್ 19 ತಂಡಕ್ಕೆ ರಾಹುಲ್ ಪುತ್ರ ಸಮಿತ್ ದ್ರಾವಿಡ್ ಆಯ್ಕೆ

ಆಸ್ಟ್ರೇಲಿಯಾ ತಂಡದ ವಿರುದ್ಧದ ಸರಣಿಗಾಗಿ ಭಾರತ ಅಂಡರ್ 19 ತಂಡವನ್ನು ಪ್ರಕಟಿಸಿದ್ದು...

ಪ್ಯಾರಾಲಿಂಪಿಕ್ಸ್ | ಭಾರತಕ್ಕೆ ನಾಲ್ಕನೇ ಪದಕ; ಬೆಳ್ಳಿಗೆ ಗುರಿಯಿಟ್ಟ ಶೂಟರ್ ಮನೀಶ್ ನರ್ವಾಲ್‌

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರಲ್ಲಿ ಭಾರತಕ್ಕೆ ನಾಲ್ಕನೇ ಪದಕ ಲಭಿಸಿದ್ದು ಪುರುಷರ 10...