ಐಪಿಎಲ್ 2024 | ಮುಂಬೈಗೆ ಭರ್ಜರಿ ಗೆಲುವು; ಆರ್‌ಸಿಬಿಗೆ 5ನೇ ಸೋಲು

Date:

ಮುಂಬೈ ಇಂಡಿಯನ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 7 ವಿಕೆಟ್​ಗಳ ಅಮೋಘ ಗೆಲುವು ಸಾಧಿಸಿದೆ.

- Advertisement -

ಮುಂಬೈ ಪರ ಇಶಾನ್ ಕಿಶನ್ (69), ರೋಹಿತ್​ ಶರ್ಮಾ(38) ಮತ್ತು ಸೂರ್ಯಕುಮಾರ್​ ಯಾದವ್(52) ಆರ್ಭಟಕ್ಕೆ ಆರ್​ಸಿಬಿ ನೀಡಿದ್ದ 197 ರನ್​ ಗುರಿ ಸಾವಾಲಾಗಲಿಲ್ಲ. ಆರ್​ಸಿಬಿ 5ನೇ ಸೋಲಿಗೆ ಶರಣಾದರೆ, ಮುಂಬೈ ಸತತ ಎರಡನೇ ಜಯದ ನಗೆ ಬೀರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ನಡೆಸಿದ ರಾಯಲ್ ಚಾಲೆಂಜರ್ಸ್​​ ಬೆಂಗಳೂರು ಪರ ಮೂವರು ಅರ್ಧಶತಕ ಸಿಡಿಸಿ ಸವಾಲಿನ ಮೊತ್ತ ಪೇರಿಸಲು ನೆರವಾದರು. ಇದರ ನಡುವೆಯೂ ಜಸ್ಪ್ರೀತ್ ಬುಮ್ರಾ 5 ವಿಕೆಟ್ ಕಬಳಿಸಿ 200ರ ಗಡಿ ದಾಟಬೇಕಿದ್ದ ಮೊತ್ತಕ್ಕೆ ಕಡಿವಾಣ ಹಾಕಿದರು. ಆರ್​ಸಿಬಿ 20 ಓವರ್​​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 196 ರನ್ ಕಲೆ ಹಾಕಿತು.

ಆರ್​ಸಿಬಿ ನೀಡಿದ್ದ 197 ರನ್​​ಗಳ ಗುರಿಗೆ ಮುಂಬೈ ಇಂಡಿಯನ್ಸ್​ ಸ್ಫೋಟಕ ಬ್ಯಾಟಿಂಗ್ ನಡೆಸಿತು. ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್​ ಯಾದವ್ ಅವರ ಆಕ್ರಮಣಕಾರಿ ಆಟದ ಮುಂದೆ ರಾಯಲ್ ಚಾಲೆಂಜರ್ಸ್ ಬೌಲರ್‌ಗಳು ಸುಸ್ತಾದರು. ಬ್ಯಾಟರ್​​ಗಳು ಬೌಂಡರಿ, ಸಿಕ್ಸರ್​​ಗಳ ಸುರಿಮಳೆಗೈಯುತ್ತಿದ್ದರೆ, ಬೌಲರ್​​ಗಳು ವಿಕೆಟ್​ಗಾಗಿ ಪರದಾಟ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಲೆ ಏರಿಕೆ, ನಿರುದ್ಯೋಗವೇ ಚುನಾವಣೆ ವಿಷಯ; ಎಚ್ಚೆತ್ತ ಮತದಾರರು

ಇಶಾನ್ ಕಿಶನ್ ಮತ್ತು ರೋಹಿತ್​ ಶರ್ಮಾ ಉತ್ತಮ ಆರಂಭ ನೀಡಿ ಮೊದಲ ವಿಕೆಟ್​ಗೆ ಶತಕದ ಜೊತೆಯಾಟವಾಡಿದರು. ಈ ಸ್ಕೋರ್​​ನಲ್ಲಿ ಇಶಾನ್ ಕಿಶನ್ 69 ರನ್ ಬಾರಿಸಿದರು. ಅವರ ಇನಿಂಗ್ಸ್​ನಲ್ಲಿ 7 ಬೌಂಡರಿ, 5 ಸಿಕ್ಸರ್‌ಗಳಿದ್ದವು. ರೋಹಿತ್​ 38 ರನ್ ಚಚ್ಚಿದರೆ, ಸೂರ್ಯಕುಮಾರ್​ ಕೇವಲ 19 ಎಸೆತಗಳಲ್ಲೇ 5 ಬೌಂಡರಿ, 4 ಸಿಕ್ಸರ್ ಸಹಿತ 52 ರನ್ ಬಾರಿಸಿದರು. ಕೊನೆಯಲ್ಲಿ ಹಾರ್ದಿಕ್ 6 ಎಸೆತಗಳಲ್ಲಿ 21 ರನ್ (3 ಸಿಕ್ಸರ್​) ಗಳಿಸಿದರೆ, 10 ಎಸೆತಗಳಲ್ಲಿ 16 ರನ್ ಗಳಿಸಿದ್ದಾರೆ.

ವಿಲ್ ಜಾಕ್ಸ್, ವಿಜಯ್ ಕುಮಾರ್ ವೈಶಾಕ್, ಆಕಾಶ್ ದೀಪ್ ಒಂದೊಂದು ವಿಕೆಟ್ ಪಡೆದರಾದರೂ ಮುಂಬೈ ಗೆಲುವಿಗೆ ತಡೆ ನೀಡಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಮುಂಬೈ 15.3 ಓವರ್​ಗಳಲ್ಲೇ ಗೆಲುವಿನ ನಗೆ ಬೀರಿತು.

ಡು ಪ್ಲೆಸಿಸ್, ಪಾಟೀದಾರ್​ ಅರ್ಧ ಶತಕ

ಮುಂಬೈ ವಿರುದ್ಧದ ಪಂದ್ಯಕ್ಕೂ ಮುನ್ನ ಕಳಪೆ ಫಾರ್ಮ್​ನಲ್ಲಿದ್ದ ಡು ಪ್ಲೆಸಿಸ್ ಮತ್ತು ರಜತ್ ಪಾಟೀದಾರ್ ಈ ಪಂದ್ಯದಲ್ಲಿ ಉತ್ತಮವಾಗಿ ಆಡಿದ್ದಾರೆ. ವಿರಾಟ್ ಕೊಹ್ಲಿ(3) ಈ ಪಂದ್ಯದಲ್ಲಿ ನಿರಾಸೆ ಮೂಡಿಸಿದರೆ, ಪ್ಲೆಸಿಸ್ 40 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್​ ಸಹಿತ 61 ರನ್ ಗಳಿಸಿದರು. ಕ್ಯಾಮರೂನ್ ಗ್ರೀನ್​ ಜಾಗದಲ್ಲಿ ತಂಡವನ್ನು ಸೇರಿದ ವಿಲ್ ಜಾಕ್ಸ್ 2 ಬೌಂಡರಿ ಗಳಿಸಿ ಔಟಾದರು. ಪಾಟೀದಾರ್ 26 ಎಸೆತಗಳಲ್ಲಿ 3 ಬೌಂಡರಿ, 4 ಸಿಕ್ಸರ್ ಸಹಿತ 50 ರನ್ ಗಳಿಸಿದರು. ಆದರೆ ಗ್ಲೆನ್ ಮ್ಯಾಕ್ಸ್​ವೆಲ್ ಮತ್ತೊಮ್ಮೆ ಶೂನ್ಯಕ್ಕೆ ಔಟ್‌ ಆಗಿ ನಿರಾಸೆ ಮೂಡಿಸಿದರು.

ಅಬ್ಬರಿಸಿದ ದಿನೇಶ್ ಕಾರ್ತಿಕ್

ಕೊನೆಯಲ್ಲಿ ಬುಮ್ರಾ 5 ವಿಕೆಟ್ ಉರುಳಿಸಿ ಆರ್​​ಸಿಬಿಗೆ ಕಡಿವಾಣ ಹಾಕಿದರೂ ಕೊನೆಯಲ್ಲಿ ದಿನೇಶ್ ಕಾರ್ತಿಕ್ ಸ್ಫೋಟಕ ಇನಿಂಗ್ಸ್​ ಕಟ್ಟಿದರು. 23 ಎಸೆತಗಳಲ್ಲಿ ಅಜೇಯ 53 ರನ್ ಗಳಿಸಿದರು. 5 ಬೌಂಡರಿ, 4 ಸಿಕ್ಸರ್​ಗಳು ಅವರ ಇನಿಂಗ್ಸ್​​ನಲ್ಲಿದ್ದವು. ಮಹಿಪಾಲ್ ಲೊಮ್ರೋರ್ 0, ಸೌರಭ್ ಚೌಹಾಣ್ 9, ವಿಜಯ್ ಕುಮಾರ್​ 0, ಆಕಾಶ್ ದೀಪ್ 2 ರನ್ ಗಳಿಸಿದರು. ಜಸ್ಪ್ರೀತ್ ಬುಮ್ರಾ 4 ಓವರ್​​ಗಳಲ್ಲಿ 21 ರನ್ ನೀಡಿ 5 ವಿಕೆಟ್ ಪಡೆದರು. ಜೆರಾಲ್ಡ್ ಕೊಯೆಟ್ಜಿ, ಆಕಾಶ್ ಮಧ್ವಾಲ್, ಶ್ರೇಯಸ್ ಗೋಪಾಲ್ ತಲಾ ಒಂದೊಂದು ವಿಕೆಟ್ ಪಡೆದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...