ಏಕದಿನ| ಪಾಕ್‌ ತಂಡವನ್ನು ಸೋಲಿಸಿದ ಆಸ್ಟ್ರೇಲಿಯಾ

Date:

ಏಕದಿನ ಸರಣಿಗಾಗಿ ಆಸ್ಟ್ರೇಲಿಯ ಪ್ರವಾಸಕ್ಕೆ ತೆರಳಿದ್ದ ಪಾಕಿಸ್ತಾನ ತಂಡ ಮೊದಲ ಪಂದ್ಯದಲ್ಲಿ 2 ವಿಕೆಟ್‌ಗಳಿಂದ ಸೋಲನುಭವಿಸಿದೆ.

- Advertisement -

ಇಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ 203 ರನ್​ಗಳಿಗೆ ಆಲೌಟ್ ಆಯಿತು. ಗುರಿ ಬೆನ್ನಟ್ಟಿದ ಕಾಂಗರೂ ತಂಡ ಕೂಡ ಒಂದು ಹಂತದಲ್ಲಿ 185 ರನ್ ಗಳಿಸುವಷ್ಟರಲ್ಲಿ 8 ವಿಕೆಟ್ ಕಳೆದುಕೊಂಡಿತ್ತು. ಆದಾಗ್ಯೂ, ಇದಾದ ನಂತರ ಜೊತೆಯಾದ ಸ್ಟಾರ್ಕ್ ಮತ್ತು ಕಮಿನ್ಸ್ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕ್ ತಂಡ, ಆಸ್ಟ್ರೇಲಿಯಾದ ವೇಗದ ಬೌಲರ್‌ಗಳ ವಿರುದ್ಧ ಶರಣಾಯಿತು. ಟೆಸ್ಟ್ ಬಳಿಕ ಏಕದಿನ ಆಡುತ್ತಿರುವ ಅಬ್ದುಲ್ಲಾ ಶಫೀಕ್ ಮತ್ತು ಸೈಮ್ ಅಯೂಬ್ ಜೋಡಿ ಉತ್ತಮ ಆರಂಭ ನೀಡುವಲ್ಲಿ ವಿಫಲವಾಯಿತು. ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡುತ್ತಿದ್ದ ಅಯೂಬ್ ಮೊದಲ ಓವರ್‌ನಲ್ಲಿಯೇ ಮಿಚೆಲ್ ಸ್ಟಾರ್ಕ್ ಎಸೆತದಲ್ಲಿ ಬೌಲ್ಡ್ ಆದರೆ, ಸ್ಟಾರ್ಕ್ ತಮ್ಮ ಮುಂದಿನ ಓವರ್‌ನಲ್ಲಿ ಶಫೀಕ್ ಅವರನ್ನು ಔಟ್ ಮಾಡಿದರು.

ಟೆಸ್ಟ್ ತಂಡದಿಂದ ಹೊರಬಿದ್ದ ನಂತರ ಏಕದಿನ ಸರಣಿಗೆ ಮರಳಿದ ಬಾಬರ್ ಆಜಂ ಬಂದ ತಕ್ಷಣ ಕೆಲವು ಉತ್ತಮ ಹೊಡೆತಗಳನ್ನು ಬಾರಿಸಿದರು. ಆದರೆ ಲೆಗ್ ಸ್ಪಿನ್ನರ್ ಆಡಮ್ ಝಂಪಾ ಎಸೆತದಲ್ಲಿ ಬಾಬರ್ ಕ್ಲೀನ್ ಬೌಲ್ಡ್ ಆದರು.

ಈ ಸುದ್ದಿ ಓದಿದ್ದೀರಾ? ವಂಚನೆ ಪ್ರಕರಣ: ಗೌತಮ್‌ ಗಂಭೀರ್‌ ವಿರುದ್ಧದ ತನಿಖೆಗೆ ನ್ಯಾಯಾಲಯ ಆದೇಶ

ಪಾಕಿಸ್ತಾನದ ನೂತನ ನಾಯಕ ಮೊಹಮ್ಮದ್ ರಿಜ್ವಾನ್ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಂತು ಇನಿಂಗ್ಸ್ ನಿಭಾಯಿಸಿ 44 ರನ್ ಗಳಿಸಿ ಔಟಾದರು. ಹೀಗಾಗಿ ಪಾಕಿಸ್ತಾನ ಕೇವಲ 117 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡಿತು. ಆದರೆ ತಂಡದ ಪರ ಗಮನಾರ್ಹ ಪ್ರದರ್ಶನ ನೀಡಿದ ಬೌಲರ್ ನಸೀಮ್ ಶಾ 40 ರನ್​ಗಳ ಸ್ಮರಣೀಯ ಇನಿಂಗ್ಸ್ ಆಡಿ ತಂಡವನ್ನು 203 ರನ್‌ಗಳಿಗೆ ಕೊಂಡೊಯ್ದರು. ಆಸ್ಟ್ರೇಲಿಯಾ ಪರ ಸ್ಟಾರ್ಕ್ 3 ಹಾಗೂ ನಾಯಕ ಪ್ಯಾಟ್ ಕಮಿನ್ಸ್ 2 ವಿಕೆಟ್ ಪಡೆದರು.

203 ರನ್​ಗಳ ಅಲ್ಪ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಕೂಡ ಉತ್ತಮ ಆರಂಭ ಪಡೆಯಲಿಲ್ಲ. ನಾಲ್ಕನೇ ಓವರ್‌ನಲ್ಲಿಯೇ ಆರಂಭಿಕರಾದ ಮ್ಯಾಥ್ಯೂ ಶಾರ್ಟ್ ಮತ್ತು ಜೇಕ್ ಫ್ರೇಸರ್-ಮೆಕ್‌ಗುರ್ಕ್ ಪೆವಿಲಿಯನ್‌ಗೆ ಮರಳಿದರು. ಇದಾದ ಬಳಿಕ ಜೊತೆಯಾದ ಸ್ಟಾರ್ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ ಮತ್ತು ವಿಕೆಟ್ ಕೀಪರ್ ಜೋಶ್ ಇಂಗ್ಲಿಸ್ ಉತ್ತಮ ಜೊತೆಯಾಟ ಕಟ್ಟಿದರು. ಇಬ್ಬರೂ ಸೇರಿ ಪಾಕಿಸ್ತಾನದ ವೇಗದ ಬೌಲರ್‌ಗಳ ಮೇಲೆ ದಾಳಿ ನಡೆಸಿ ವೇಗವಾಗಿ ರನ್ ಗಳಿಸಿದರು. ಇವರಿಬ್ಬರ ನಡುವೆ 85 ರನ್​ಗಳ ಜೊತೆಯಾಟವಿದ್ದು, ಆಸ್ಟ್ರೇಲಿಯಾ ಗೆಲುವಿಗೆ ಅಡಿಪಾಯ ಹಾಕಿತು.

ಈ ಇಬ್ಬರು ಆಡುವವರೆಗೆ ಆಸ್ಟ್ರೇಲಿಯ ತಂಡ ಗೆಲುವಿನ ಸನಿಹದಲ್ಲಿದ್ದಂತೆ ಕಂಡರೂ ಇದ್ದಕ್ಕಿದ್ದಂತೆ ಹಾರಿಸ್ ರೌಫ್ ಮತ್ತು ಶಾಹೀನ್ ಶಾ ಆಫ್ರಿದಿ ಸ್ಮಿತ್-ಇಂಗ್ಲಿಸ್ ಸೇರಿದಂತೆ ಆಸ್ಟ್ರೇಲಿಯಾದ ಮಧ್ಯಮ ಕ್ರಮಾಂಕವನ್ನು ಬೇಗನೇ ಪೆವಿಲಿಯನ್‌ಗೆ ಅಟ್ಟಿದರು. ಹೀಗಾಗಿ ಆಸ್ಟ್ರೇಲಿಯಾ ಕೇವಲ 155 ರನ್​ಗಳಿಗೆ 7 ವಿಕೆಟ್ ಕಳೆದುಕೊಂಡಿತು. ಇಲ್ಲಿಂದ ನಾಯಕ ಪ್ಯಾಟ್ ಕಮಿನ್ಸ್ ಜವಾಬ್ದಾರಿ ವಹಿಸಿಕೊಂಡು ಮಿಚೆಲ್ ಸ್ಟಾರ್ಕ್ ಜೊತೆಗೂಡಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಕಮ್ಮಿನ್ಸ್ 33 ರನ್ ಗಳಿಸಿ ಅಜೇಯರಾಗಿ ಮರಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

3 ಗಂಟೆಗಳ ರೋಚಕ ಹೋರಾಟ: ಯುಎಸ್ ಓಪನ್ ಮೊದಲ ಸುತ್ತಿನಲ್ಲೇ ವಿಲಿಯಮ್ಸ್ ಸಹೋದರಿಯರಿಗೆ ಸೋಲು

ಅಮೆರಿಕನ್ ಓಪನ್ ಟೆನಿಸ್ ಟೂರ್ನಿಯಲ್ಲಿ ವಿಸ್ಮಯಕಾರಿ ಪುನರಾಗಮನದ ನಿರೀಕ್ಷೆಯಲ್ಲಿದ್ದ ಲೆಜೆಂಡರಿ ಜೋಡಿ...

75ನೇ ವರ್ಷದ ಬಾಂಧವ್ಯ: ಭಾರತ-ಜಪಾನ್ ನಡುವೆ ಚೊಚ್ಚಲ ಟಿ20 ಕ್ರಿಕೆಟ್

ಭಾರತ ಹಾಗೂ ಜಪಾನ್ ನಡುವಿನ 75ನೇ ವರ್ಷದ ರಾಜತಾಂತ್ರಿಕ ಬಾಂಧವ್ಯದ ಸಂಭ್ರಮಾಚರಣೆಯ...

ಏಷ್ಯನ್ ಗೇಮ್ಸ್ | ಟೀಂ ಇಂಡಿಯಾಗೆ ‘ವೆರಿ ವೆರಿ ಸ್ಪೆಷಲ್’; ವಿವಿಎಸ್‌ ಲಕ್ಷ್ಮಣ್ ಹೆಡ್‌ ಕೋಚ್!

ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನಲ್ಲಿ ಜಸ್‌ಪ್ರೀತ್ ಬೂಮ್ರಾ, ಶ್ರೇಯಸ್ ಅಯ್ಯರ್ ಹಾಗೂ...

ನೂರಾರು ವಿವಾದ, ಅದಕ್ಕೂ ಮೀರಿದ ಮನುಷ್ಯತ್ವ: ಮೆಸ್ಸಿಯ 21 ವರ್ಷದ ಪಯಣದತ್ತ ಒಂದು ಹಿನ್ನೋಟ

ಲಿಯೋನೆಲ್ ಮೆಸ್ಸಿ ಎಂಬ ದಂತಕಥೆಯನ್ನು ನಾವು ಅತ್ಯಂತ ಸಮತೋಲಿತ ದೃಷ್ಟಿಕೋನದಿಂದ ನೋಡಬೇಕಾಗಿದೆ....