ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಮೊಯಿನ್ ಅಲಿ

Date:

Advertisements

ಗಯಾನಾದಲ್ಲಿ ನಡೆದ ಟಿ20 ವಿಶ್ವಕಪ್‌ 2024ರಲ್ಲಿ ಭಾರತ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಪರ ಕೊನೆಯ ಬಾರಿಗೆ ಆಡಿದ್ದ ಆಲ್ ರೌಂಡರ್ ಮೊಯಿನ್ ಅಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್‌ನ ಮುಂಬರುವ ವೈಟ್-ಬಾಲ್ ಕ್ರಿಕೆಟ್ ಸರಣಿಗೆ ಕಡೆಗಣಿಸಿದ ಬಳಿಕ ಈ ಬೆಳವಣಿಗೆ ಕಂಡು ಬಂದಿದೆ.

ಡೈಲಿ ಮೇಲ್‌ನಲ್ಲಿ ಇಂಗ್ಲೆಂಡ್‌ನ ಮಾಜಿ ನಾಯಕ ನಾಸರ್ ಹುಸೇನ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮೊಯಿನ್ ಅಲಿ, “ನನಗೆ 37 ವರ್ಷ ವಯಸ್ಸಾಗಿದೆ ಮತ್ತು ಈ ತಿಂಗಳ ಆಸ್ಟ್ರೇಲಿಯಾ ಸರಣಿಗೆ ಆಯ್ಕೆಯಾಗಲಿಲ್ಲ” ಎಂದು ಪ್ರಸ್ತಾಪಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಅಂತಾರಾಷ್ಟ್ರೀಯ, ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಶಿಖರ್ ಧವನ್

“ನಾನು ಇಂಗ್ಲೆಂಡ್‌ಗಾಗಿ ಸಾಕಷ್ಟು ಕ್ರಿಕೆಟ್ ಆಡಿದ್ದೇನೆ. ಇದು ಮುಂದಿನ ಪೀಳಿಗೆಗೆ ಸಮಯವಾಗಿದೆ ಎಂಬುದು ಇದರಿಂದ ತಿಳಿದುಬರುತ್ತದೆ. ಇದು ಸರಿಯಾದ ಸಮಯ ಎಂದು ನನಗೆ ಭಾವಿಸುತ್ತದೆ. ನಾನು ನನ್ನ ಪಾತ್ರವನ್ನು ಮಾಡಿದ್ದೇನೆ” ಎಂದು ನಿವೃತ್ತಿ ಘೋಷಿಸಿದ ಅಲಿ ಹೇಳಿದ್ದಾರೆ.

“ನಾನು ಕಾಯಬಹುದು, ಮತ್ತೆ ಇಂಗ್ಲೆಂಡ್‌ಗಾಗಿ ಆಡಲು ಪ್ರಯತ್ನಿಸಬಹುದು. ಆದರೆ ವಾಸ್ತವದಲ್ಲಿ ನಾನು ಹಾಗೆ ಮಾಡುವುದಿಲ್ಲ ಎಂದು ನನಗೆ ತಿಳಿದಿದೆ. ನಾನು ಇನ್ನು ಆಡಲು ಸಾಧ್ಯವಿಲ್ಲ ಎಂದುಕೊಂಡು ನಾನು ನಿವೃತ್ತಿಯಾಗುತ್ತಿಲ್ಲ. ನಾನು ಇನ್ನೂ ಆಡಬಲ್ಲೆ. ಆದರೆ ವಿಷಯ ಹೇಗಿದೆ ಎಂದು ನಾನು ಅರ್ಥಮಾಡಿಕೊಳ್ಳುತ್ತೇನೆ” ಎಂದು ಮೊಯಿನ್ ಹೇಳಿದರು.

2014ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಮೊಯಿನ್ 6678 ಅಂತಾರಾಷ್ಟ್ರೀಯ ರನ್‌ಗಳನ್ನು ಗಳಿಸಿದ್ದಾರೆ ಮತ್ತು 366 ವಿಕೆಟ್‌ಗಳನ್ನು ಉರುಳಿಸಿದ್ದಾರೆ. 2019 ಕ್ರಿಕೆಟ್ ವಿಶ್ವಕಪ್ ಮತ್ತು 2022 ಟಿ20 ವಿಶ್ವಕಪ್ ಗೆದ್ದ ತಂಡದಲ್ಲಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಚಾಂಪಿಯನ್‌ಶಿಪ್‌ | 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್...

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್‌ ಆಯ್ಕೆ

ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)...

ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌

ವಿಪಕ್ಷಗಳು ಮಾಡಿರುವ ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ ಎಂದು ಮುಖ್ಯ...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

Download Eedina App Android / iOS

X