SIR ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕ್ರಿಕೆಟಿಗ ಮೊಹಮ್ಮದ್ ಶಮಿಗೆ ಚುನಾವಣಾ ಆಯೋಗ ಸಮನ್ಸ್

Date:

ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ಮತ್ತು ಅವರ ಸಹೋದರ ಮುಹಮ್ಮದ್ ಕೈಫ್ ಅವರಿಗೆ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಡಿ ವಿಚಾರಣೆಗೆ ಹಾಜರಾಗುವಂತೆ ಚುನಾವಣಾ ಆಯೋಗ ಸಮನ್ಸ್ ಜಾರಿಗೊಳಿಸಿದೆ.

- Advertisement -

ದಕ್ಷಿಣ ಕೋಲ್ಕತ್ತಾದ ಜಾದವ್‌ಪುರ ಪ್ರದೇಶದಲ್ಲಿರುವ ಕರ್ಟ್ಜು ನಗರ ಶಾಲೆಯಿಂದ ಸೋಮವಾರ ಅಧಿಕೃತವಾಗಿ ನೋಟಿಸ್ ನೀಡಲಾಗಿದೆ. ಶಮಿ ಕೋಲ್ಕತ್ತಾ ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ 93ರ ಮತದಾರರಾಗಿದ್ದು, ಈ ವಾರ್ಡ್ ರಾಶ್‌ಬೆಹಾರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರಿದೆ. ಶಮಿ ಅವರ ವಿಚಾರಣೆಯನ್ನು ಜನವರಿ 9 ರಿಂದ 11ರ ನಡುವೆ ನಿಗದಿಪಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಮೂಲಗಳ ಪ್ರಕಾರ, ಮತದಾರರ ಎಣಿಕೆ ಫಾರ್ಮ್ ಸರಿಯಾಗಿ ಭರ್ತಿ ಆಗಿಲ್ಲ ಎಂಬ ಕಾರಣದಿಂದ ಸಮನ್ಸ್ ನೀಡಲಾಗಿದೆ. ವಿಜಯ್ ಹಜಾರೆ ಟ್ರೋಫಿಯಲ್ಲಿ ರಾಜ್‌ಕೋಟ್‌ನಲ್ಲಿ ಬಂಗಾಳ ತಂಡವನ್ನು ಪ್ರತಿನಿಧಿಸುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ನಿಗದಿಯಾಗಿದ್ದ ವಿಚಾರಣೆಗೆ ಶಮಿ ಹಾಜರಾಗಲು ಸಾಧ್ಯವಾಗಿಲ್ಲ.

ಮೂಲತಃ ಉತ್ತರ ಪ್ರದೇಶದವರಾದ ಶಮಿ, ಕ್ರಿಕೆಟ್ ವೃತ್ತಿಜೀವನದ ಆರಂಭದಲ್ಲೇ ಕೋಲ್ಕತ್ತಾಗೆ ತೆರಳಿದ್ದರು. ತರಬೇತುದಾರ ಸಂಬರನ್ ಬ್ಯಾನರ್ಜಿ ಅವರ ಗಮನ ಸೆಳೆದ ಅವರು ಬಂಗಾಳ ಅಂಡರ್–22 ತಂಡದಲ್ಲಿ ಸ್ಥಾನ ಪಡೆದು ದೇಶೀಯ ಕ್ರಿಕೆಟ್‌ನಲ್ಲಿ ತಮ್ಮ ಪಯಣ ಆರಂಭಿಸಿದ್ದರು. ಮೋಹನ್ ಬಗಾನ್ ಕ್ರಿಕೆಟ್ ಕಪ್‌ನಲ್ಲೂ ಅವರು ಆಡಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಫಾರ್ಮ್‌ನಲ್ಲಿದ್ದರೂ, ಜ.11 ರಿಂದ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಹಾಗೂ ಟಿ20I ಸರಣಿಗೆ ಶಮಿ ಭಾರತ ತಂಡಕ್ಕೆ ಆಯ್ಕೆಯಾಗಿಲ್ಲ.

ಇದನ್ನು ಓದಿದ್ದೀರಾ? ರೋಹಿತ್- ಕೊಹ್ಲಿ ನಿವೃತ್ತಿ ನಂತರ ಏಕದಿನ ಕ್ರಿಕೆಟ್ ಅಂತ್ಯ: ಆರ್ ಅಶ್ವಿನ್ ಕಳವಳ

ಇದೇ ವೇಳೆ, ನಟ ಹಾಗೂ ತೃಣಮೂಲ ಕಾಂಗ್ರೆಸ್ ಸಂಸದ ದೇವ್ (ದೀಪಕ್ ಅಧಿಕಾರಿ) ಅವರಿಗೂ ಎಸ್‌ಐಆರ್ ವಿಚಾರಣೆಗೆ ಸಂಬಂಧಿಸಿದಂತೆ ಸಮನ್ಸ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ದೇವ್ ಅವರ ಕುಟುಂಬದ ಇನ್ನೂ ಮೂವರು ಸದಸ್ಯರಿಗೂ ನೋಟಿಸ್ ಕಳುಹಿಸಲಾಗಿದೆ ಎನ್ನಲಾಗಿದೆ. ಆದರೆ, ವಿಚಾರಣೆಗೆ ಹಾಜರಾಗಬೇಕಾದ ದಿನಾಂಕ ಮತ್ತು ಸಮಯ ಇನ್ನೂ ಸ್ಪಷ್ಟವಾಗಿಲ್ಲ.

ಸಮನ್ಸ್ ಕುರಿತು ದೇವ್ ಅಥವಾ ಅವರ ಕುಟುಂಬದಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಲಭ್ಯವಾಗಿಲ್ಲ. ಆದರೆ, ನಟ ಹಾಗೂ ಜನಪ್ರತಿನಿಧಿಗೆ ಈ ರೀತಿಯ ನೋಟಿಸ್ ನೀಡಿರುವುದು ಕಿರುಕುಳದ ಕ್ರಮ ಎಂದು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಆರೋಪಿಸಿದೆ.

ದೇವ್ ಅವರ ಪೂರ್ವಜರ ಮನೆ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಘಾಟಲ್‌ನಲ್ಲಿ ಇದ್ದು, ಅವರು ಅಲ್ಲಿ ಜನಿಸಿದ್ದಾರೆ. ತಂದೆಯ ಉದ್ಯೋಗದ ಹಿನ್ನೆಲೆ ಕುಟುಂಬ ಮುಂಬೈಗೆ ಸ್ಥಳಾಂತರಗೊಂಡಿದ್ದು, ನಂತರ ನಟನಾ ವೃತ್ತಿಜೀವನದ ಕಾರಣದಿಂದ ಕೋಲ್ಕತ್ತಾದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಸೌತ್ ಸಿಟಿ ವಸತಿ ಸಂಕೀರ್ಣದಲ್ಲಿರುವುದೇ ಅವರ ಶಾಶ್ವತ ವಿಳಾಸ. ಟಾಲಿವುಡ್‌ನ ಪ್ರಮುಖ ನಟರಾಗಿರುವ ದೇವ್, ಘಾಟಲ್‌ನಿಂದ ಮೂರು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...