ಬರೋಬ್ಬರಿ 2 ವರ್ಷದ ಬಳಿಕ ‘ಟೀಮ್ ಇಂಡಿಯಾ’ಗೆ ಮೊಹಮ್ಮದ್ ಶಮಿ ಕಮ್‌ ಬ್ಯಾಕ್‌

Date:

ಭಾರತದ ಟಿ20 ತಂಡಕ್ಕೆ ವೇಗಿ ಬೌಲರ್ ಮೊಹಮ್ಮದ್ ಶಮಿ ಅವರು ಬರೊಬ್ಬರಿ 2 ವರ್ಷದ ಬಳಿಕ ಮತ್ತೆ ಆಯ್ಕೆಯಾಗಿದ್ದಾರೆ. 2022ರಿಂದ ಟಿ20 ಪಂದ್ಯಗಳಲ್ಲಿ ಆಡಿದ್ದು ಶಮಿ, ಆ ಬಳಿಕ ತಂಡದಿಂದ ಹೊರಗುಳಿದಿದ್ದರು. ಇದೀಗ, ಮತ್ತೆ ಟಿ20 ತಂಡಕ್ಕೆ ಆಯ್ಕೆಯಾಗಿದ್ದಾರೆ.

- Advertisement -

2022ರಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್‌ ಪಂದ್ಯ ಅವರ ಕೊನೆಯ ಪಂದ್ಯವಾಗಿತ್ತು. ಅಡಿಲೇಡ್‌ನಲ್ಲಿ ನಡೆದ ಆ ಪಂದ್ಯದಲ್ಲಿ ಬೌಲಿಂಗ್ ಮಾಡಿದ್ದ ಶಮಿ, 3 ಓವರ್‌ಗಳ ಬೌಲಿಂಗ್‌ ಮಾಡಿ, 39 ರನ್‌ ನೀಡಿದ್ದರು. ಆ ಬಳಿಕ ತಂಡದಿಂದ ಹೊರಗುಳಿದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಮೂರು ಓವರ್‌ಗೆ 39 ರನ್‌ ನೀಡಿದ್ದನ್ನು ಕಳಪೆ ಪ್ರದರ್ಶನವೆಂದು ಪರಿಗಣಿಸಿದ್ದ ಬಿಸಿಸಿಐ, ಆ ಬಳಿಕ ಅವರನ್ನು ಟಿ20 ತಂಡದಿಂದ ಹೊರಗಿಟ್ಟಿತ್ತು. ಆ ನಂತರದ ಯಾವುದೇ ಟಿ20 ಟೂರ್ನಿಗಳಿಗೆ ಅವರನ್ನು ಆಯ್ಕೆ ಮಾಡಿರಲಿಲ್ಲ. ಇದೀಗ, ಮತ್ತೆ ಟಿ20 ತಂಡಕ್ಕೆ ಪುನರ್‌ ಆಯ್ಕೆಯಾಗಿದ್ದಾರೆ. ಅದೂ, 790 ದಿನಗಳ (2ವರ್ಷ 3 ತಿಂಗಳ) ಬಳಿಕ.

ಕಳೆದ ಈ ಎರಡು ವರ್ಷಗಳಲ್ಲಿ ಏಕದಿನ ಮತ್ತು ಟೆಸ್ಟ್‌ ಕ್ರಿಕೆಟ್‌ಗಳಲ್ಲಿ ಶಮಿ ತಂಡದಲ್ಲಿದ್ದರು. ಉತ್ತಮ ಪ್ರದರ್ಶನವನ್ನೂ ನೀಡಿದ್ದರು. ಈಗ ಅವರು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಟೀಮ್‌ ಇಂಡಿಯಾ ಪರವಾಗಿ ಕಣಕ್ಕಿಳಿಯಲಿದ್ದಾರೆ. ಇಂಗ್ಲೆಂಡ್ ವಿರುದ್ದದ ಪಂದ್ಯಗಳಲ್ಲಿ ಶಮಿ ಉತ್ತಮ ಪ್ರದರ್ಶನ ನೀಡಿದರೆ, ಅವರನ್ನು ಮುಂದಿನ ಚಾಂಪಿಯನ್‌ಶಿಪ್ ಟ್ರೋಫಿಯ ಟೂರ್ನಿಗೂ ಆಯ್ಕೆ ಮಾಡುವ ಸಾಧ್ಯತೆ ಇದೆ.

ಇಂಗ್ಲೆಂಡ್ ವಿರುದ್ಧದ ಟೂರ್ನಿಯಲ್ಲಿ ಭಾರತದ ತಂಡದ ನಾಯಕತ್ವವನ್ನು ಸೂರ್ಯಕುಮಾರ್ ಯಾದವ್ ವಹಿಸಲಿದ್ದಾರೆ. ಅಕ್ಷರ್ ಪಟೇಲ್ (ಉಪಾನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಧ್ರುವ್ ಜುರೇಲ್ (ವಿಕೆಟ್ ಕೀಪರ್) ಇರಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿರಾಟ್ ‘ವಿಶ್ವ’ರೂಪ: 15 ಸಾವಿರ ರನ್ ಗಡಿ ದಾಟಿ ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ

ಕೇರಳದ ತಿರುವನಂತಪುರದಲ್ಲಿರುವ ಗ್ರೀನ್‌ಫೀಲ್ಡ್‌ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವೆಸ್ಟ್ ಇಂಡೀಸ್...

ಏಷ್ಯನ್ ಗೇಮ್ಸ್ ಕಬಡ್ಡಿ: ಇರಾನ್‌ ಮಣಿಸಿ ಪುರುಷ, ಮಹಿಳಾ ವಿಭಾಗಗಳಲ್ಲಿ ಭಾರತಕ್ಕೆ ಜೋಡಿ ಚಿನ್ನದ ಸಂಭ್ರಮ

ಜಪಾನ್‌ನ ಐಚಿ–ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಕ್ರೀಡಾಕೂಟದ ಕಬಡ್ಡಿ ಅಂಕಣದಲ್ಲಿ...

ಏಷ್ಯನ್ ಗೇಮ್ಸ್: ಮ್ಯಾರಥಾನ್‌ನಲ್ಲಿ ಐತಿಹಾಸಿಕ ಬೆಳ್ಳಿ, ಶೂಟಿಂಗ್‌ನಲ್ಲೂ ಬೆಳಗಿದ ಭಾರತ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ 8ನೇ ದಿನದಂದು ಭಾರತೀಯ...