ಐಪಿಎಲ್‌ 2023 | ಆರ್‌ಸಿಬಿ ಪಂದ್ಯದ ಟಿಕೆಟ್‌ಗಳಿಗೆ ತಡರಾತ್ರಿಯಿಂದಲೇ ಕಾದು ಕುಳಿತ ಅಭಿಮಾನಿಗಳು

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐಪಿಎಲ್‌ ಜ್ವರ ಜೋರಾಗಿದೆ. ಕಳೆದ 15 ಆವೃತ್ತಿಗಳಲ್ಲೂ ತವರಿನ ತಂಡ ಆರ್‌ಸಿಬಿ, ಕಪ್​ ಗೆಲ್ಲದೆ ಇದ್ದರೂ ಸಹ ಅಭಿಮಾನಿಗಳು ಮಾತ್ರ ಉತ್ಸಾಹ ಕಳೆದುಕೊಂಡಿಲ್ಲ. ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ ಪಂದ್ಯಗಳ ಟಿಕೆಟ್‌ಕೊಳ್ಳಲು ಅಭಿಮಾನಿಗಳು ರಾತ್ರಿ-ಹಗಲೆನ್ನೆದೆ ಮುಗಿಬೀಳುತ್ತಿದ್ದಾರೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಲಕ್ನೋ ಸೂಪರ್‌ ಜೈಂಟ್ಸ್‌ ತಂಡಗಳ ನಡುವಿನ ಪಂದ್ಯ ಎಪ್ರಿಲ್‌ 10, ಸೋಮವಾರದಂದು ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯದ ಟಿಕೆಟ್‌ಗಳ ಮಾರಾಟ  ಮಾರ್ಚ್‌ 31, ಬೆಳಿಗ್ಗೆ 10:30ರಿಂದ ಮೈದಾನದ ಕೌಂಟರ್‌ಗಳಲ್ಲಿ ಆರಂಭವಾಗಿತ್ತು. ಆದರೆ, ಟಿಕೆಟ್‌ ಪಡೆಯಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.

ತಡರಾತ್ರಿ 1 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದು, ಟಿಕೆಟ್​ ಪಡೆಯಲು ರಾತ್ರಿ ಇಡೀ ಜಾಗರಣೆ ಮಾಡಿದ್ದಾರೆ. ಕಬ್ಬನ್​ ಪಾರ್ಕ್​ ವೃತ್ತದಿಂದ ಶುರುವಾಗಿ ಅನಿಲ್​ ಕುಂಬ್ಳೆ ವೃತ್ತದವರೆಗೂ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಕಿಲೋಮೀಟರ್‌ಗಟ್ಟಲೆ ಕಾದಿದ್ದಾರೆ.

ಕೋವಿಡ್​ ಕಾರಣದಿಂದಾಗಿ ಕಳೆದ ಮೂರು ಆವೃತ್ತಿಗಳಲ್ಲಿ ಬೆಂಗಳೂರಿನಲ್ಲಿ ಯಾವುದೇ ಐಪಿಎಲ್‌ ಪಂದ್ಯಗಳು ನಡೆದಿರಲಿಲ್ಲ. ಹೀಗಾಗಿ ಈ ಬಾರಿ ಟಿಕೆಟ್‌ಗಾಗಿ ಭಾರಿ ಬೇಡಿಕೆ ವ್ಯಕ್ತವಾಗುತ್ತಿದೆ. ಟಿಕೆಟ್‌ಗೆ ದುಬಾರಿ ಬೆಲೆ ನಿಗದಿಪಡಿಸಲಾಗಿದ್ದರೂ ಸಹ ಅಭಿಮಾನಿಗಳು ತಲೆ ಕೆಡಿಸಿಕೊಂಡಿಲ್ಲ. ಹೇಗಾದರೂ ಮಾಡಿ ಟೆಕೆಟ್‌ ಪಡೆಯಲೇಬೇಕು ಎಂಬ ಜಿದ್ದಿಗೆ ಬಿದ್ದಿದ್ದಾರೆ.

ಈ ಬಾರಿ ಚಿನ್ನಸ್ವಾಮಿ ಮೈದಾನದಲ್ಲಿ ಆರ್‌ಸಿಬಿ ಒಟ್ಟು 7 ಪಂದ್ಯಗಳನ್ನಾಡಲಿದೆ. ಎಪ್ರಿಲ್‌ 2ರಂದು ತನ್ನ ಮೊದಲ ಪಂದ್ಯದಲ್ಲಿ ಡುಪ್ಲೆಸಿಸ್‌ ಬಳಗ ಐದು ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಸವಾಲನ್ನು ಎದುರಿಸಲಿದೆ.

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | 4 ವರ್ಷಗಳ ಬಳಿಕ ಅದ್ಧೂರಿ ಉದ್ಘಾಟನಾ ಸಮಾರಂಭ

ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ಅಥವಾ ಐಪಿಎಲ್‌ ಟೂರ್ನಿಯ 16ನೇ ಆವೃತ್ತಿಗೆ ಕ್ಷಣಗಣನೆ ಆರಂಭವಾಗಿದೆ. 10 ತಂಡಗಳ ನಡುವೆ ಸುಮಾರು ಎರಡು ತಿಂಗಳ ಕಾಲ ನಡೆಯಲಿರುವ ಟೂರ್ನಿಯಲ್ಲಿ ಒಟ್ಟು 74 ಪಂದ್ಯಗಳು ನಡೆಯಲಿವೆ.

ಐಪಿಎಲ್‌ ಮತ್ತೆ ತನ್ನ ಹಳೆಯ ಮಾದರಿಗೆ ವಾಪಸಾಗಿದ್ದು, 2019ರ ಬಳಿಕ ಎಲ್ಲಾ ತಂಡಗಳು ತಮ್ಮ ತವರು ಮತ್ತು ಎದುರಾಳಿ ತಂಡಗಳ ಮೈದಾನದಲ್ಲಿ ತಲಾ 7 ಪಂದ್ಯಗಳನ್ನು ಆಡಲಿವೆ. 18 ಡಬಲ್ ಹೆಡರ್‌ ಸೇರಿದಂತೆ ಲೀಗ್ ಹಂತದಲ್ಲಿ ಒಟ್ಟು 70 ಪಂದ್ಯಗಳು ನಡೆಯಲಿವೆ.

ಅಹಮದಾಬಾದ್‌, ಮೊಹಾಲಿ, ಲಕ್ನೋ, ಹೈದರಾಬಾದ್, ಬೆಂಗಳೂರು, ಚೆನ್ನೈ, ದೆಹಲಿ, ಕೋಲ್ಕತ್ತಾ, ಜೈಪುರ, ಮುಂಬೈ, ಗುವಾಹಟಿ ಹಾಗೂ ಧರ್ಮಶಾಲಾ ಮೈದಾನಗಳಲ್ಲಿ ಪಂದ್ಯಗಳು ನಡೆಯಲಿವೆ.

ರಾಜಸ್ಥಾನ ತಂಡವು ತನ್ನ ತವರಿನ ಪಂದ್ಯಗಳನ್ನು ಜೈಪುರ, ಗುವಾಹಟಿಯಲ್ಲಿ ಆಡಲಿದೆ. ಮತ್ತೊಂದೆಡೆ ಪಂಜಾಬ್ ಕಿಂಗ್ಸ್  ತವರಿನ 5 ಪಂದ್ಯಗಳನ್ನು ಮೊಹಾಲಿಯಲ್ಲಿ ಮತ್ತು ಉಳಿದ ಎರಡು ತವರು ಪಂದ್ಯಗಳನ್ನು ಧರ್ಮಶಾಲಾದಲ್ಲಿ ಆಡಲಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 | ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾಗೆ ರೋಚಕ ಗೆಲುವು: ಜೋಶ್ ಇಂಗ್ಲಿಸ್ ಶತಕ ವ್ಯರ್ಥ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 2 ವಿಕೆಟ್...

ಕ್ರಿಕೆಟಿಗ ಶ್ರೀಶಾಂತ್ ವಿರುದ್ಧ 18.7 ಲಕ್ಷ ರೂ. ವಂಚನೆ, ದೂರು ದಾಖಲು

ಉತ್ತರ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ...

ಪಾಪಿಗಳು ಹಾಜರಾದ ಕಾರಣ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಸೋತಿದೆ: ಮಮತಾ ಬ್ಯಾನರ್ಜಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಂತರ ಇದೀಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ...

ರೋಹಿತ್ ಶರ್ಮಾ ನಂತರ ಟೀಮ್ ಇಂಡಿಯಾದ ಕ್ಯಾಪ್ಟನ್ ಯಾರು?

2007ರಲ್ಲಿ ರಾಹುಲ್ ದ್ರಾವಿಡ್ ಕ್ಯಾಪ್ಟನ್ ಸ್ಥಾನದಿಂದ ಕೆಳಗಿಳಿಯುವ ಹೊತ್ತಿಗೆ ಮಹೇಂದ್ರ ಸಿಂಗ್...