ಐಪಿಎಲ್ 2025 | ತಂಡದ ಗೆಲುವಿನೊಂದಿಗೆ ವಿಶೇಷ ದಾಖಲೆ ಬರೆದ ಧೋನಿ

Date:

ಲಖನೌ ಸೂಪರ್ ಜೈಂಟ್ಸ್ ಮೊದಲು ಬ್ಯಾಟಿಂಗ್ ಮಾಡುವಾಗಲೇ ಧೋನಿ ದಾಖಲೆಯ ಪುಟಕ್ಕೆ ಸ್ಥಾನ ಪಡೆದಿದ್ದಾರೆ. ಇವರು ಪ್ರಸಕ್ತ ಸಾಲಿನ 7ನೇ ಪಂದ್ಯದಲ್ಲಿ ತಂಡಕ್ಕೆ 2ನೇ ಗೆಲುವಿನ ಮಾಲೆ ತೊಡಿಸಿದರು. ಈ ವೇಳೆ ಧೋನಿ ವಿಕೆಟ್‌ ಕೀಪರ್‌ ಆಗಿ ಈ ಪಂದ್ಯದಲ್ಲಿ ಎರಡು ಕ್ಯಾಚ್‌ ಹಾಗೂ ಒಂದು ಸ್ಟಂಪಿಂಗ್ ಮಾಡಿದರು. ಈ ಮೂಲಕ ಮಹೇಂದ್ರ ಸಿಂಗ್ ಧೋನಿ ವಿಕೆಟ್‌ ಕೀಪರ್ ಆಗಿ 200 ವಿಕೆಟ್‌ ಪಡೆದ ಹಿರಿಮೆಯನ್ನು ಸಹ ತಮ್ಮದಾಗಿಸಿಕೊಂಡರು.

- Advertisement -

ಧೋನಿ ತಮ್ಮ 272 ಪಂದ್ಯಗಳಲ್ಲಿ 153 ಕ್ಯಾಚ್ ಹಾಗೂ 47 ಸ್ಟಂಪಿಂಗ್ ಮಾಡಿ ಗಮನ ಸೆಳೆದಿದ್ದಾರೆ. ಈ ಮೂಲಕ ಐಪಿಎಲ್‌ ಇತಿಹಾಸದಲ್ಲಿ 200 ವಿಕೆಟ್‌ ಕಿತ್ತ ಸಾಧನೆ ಮಾಡಿದ ಮೊದಲ ವಿಕೆಟ್‌ ಕೀಪರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಬರೀ ವಿಕೆಟ್‌ ಕೀಪಿಂಗ್‌ನಲ್ಲಿ ಅಷ್ಟೇ ಅಲ್ಲ ಸೋಮವಾರ ಧೋನಿ, ಬ್ಯಾಟಿಂಗ್‌ನಲ್ಲೂ ಕಮಾಲ್ ಪ್ರದರ್ಶನ ನೀಡಿದರು. ಇವರು 15ನೇ ಓವರ್‌ನ ಕೊನೆಯ ಎಸೆತದಲ್ಲಿ ವಿಜಯ್ ಶಂಕರ್ ಔಟ್ ಆಗುತ್ತಿದ್ದಂತೆ ಕ್ರೀಸ್‌ಗೆ ಇಳಿದರು. ಈ ವೇಳೆ ಚೆನ್ನೈ ಸೂಪರ್‌ ಕಿಂಗ್ಸ್‌ ಸಂಕಷ್ಟದ ಪರಿಸ್ಥಿತಿಯಲ್ಲಿತ್ತು. ಇವರು ಬ್ಯಾಟಿಂಗ್‌ಗೆ ಇಳಿದಾಗ 36 ಎಸೆತಗಳಲ್ಲಿ 56 ರನ್‌ಗಳ ಅವಶ್ಯಕತೆ ಇತ್ತು.

ಈ ಸುದ್ದಿ ಓದಿದ್ದೀರಾ? ಐಪಿಎಲ್ 2025 | ಸಿಎಸ್‌ಕೆ ತಂಡದಿಂದ ರುತುರಾಜ್‌ ನಿರ್ಗಮನ; ಪೂರ್ಣ ಟೂರ್ನಿಗೆ ಧೋನಿ ನಾಯಕ

ಈ ವೇಳೆ ಧೋನಿ ಆಲ್‌ರೌಂಡರ್‌ ಶಿವಂ ದುಬೆ ಅವರೊಂದಿಗೆ ಸಮಯೋಚಿತ ಬ್ಯಾಟಿಂಗ್ ನಡೆಸಿ ತಂಡಕ್ಕೆ ಗೆಲುವಿನ ಮಾಲೆಯನ್ನು ತೊಡಿಸಿದರು. ಲಕ್ನೋ ವಿರುದ್ಧದ ಪಂದ್ಯದಲ್ಲಿ ಮೈ ಚಳಿ ಬಿಟ್ಟು ಬ್ಯಾಟ್ ಮಾಡಿದ ಮಾಹಿ ಅಬ್ಬರಿಸಿದರು. ಇವರು 11 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್‌ ಸಹಾಯದಿಂದ ಅಜೇಯ 26 ರನ್‌ ಸಿಡಿಸಿದರು. ಈ ವೇಳೆ ಮಾಹಿ ಬ್ಯಾಟಿಂಗ್ ಸ್ಟ್ರೈಕ್‌ ರೇಟ್‌ 236 ಇತ್ತು. ತಮ್ಮ ಹಳೆಯ ಖದರ್‌ನಲ್ಲಿ ಕಾಣಿಸಿಕೊಂಡ ಮಾಹಿ ಅಭಿಮಾನಿಗಳಿಗೆ ಮನರಂಜನೆಯನ್ನು ಉಣಬಡಿಸಿದರು.

ಐದು ಪಂದ್ಯಗಳಲ್ಲಿ ಸೋಲು ಕಂಡಿದ್ದ ಚೆನ್ನೈ ಸೂಪರ್ ಕಿಂಗ್ಸ್‌ ಅಂತೂ ಇಂತು ಗೆಲುವಿನ ಟ್ರ್ಯಾಕ್‌ಗೆ ಮರಳಿದೆ. ಬ್ಯಾಟಿಂಗ್ ಹಾಗೂ ವಿಕೆಟ್‌ ಕೀಪಿಂಗ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ ಧೋನಿ, ಜಯದಲ್ಲಿ ಮಿಂಚಿದ್ದಾರೆ. ಒತ್ತಡವನ್ನು ತಮ್ಮ ಮೇಲೆ ಎಳೆದುಕೊಳ್ಳದಂತೆ ಬ್ಯಾಟಿಂಗ್ ಮಾಡಿದ ಧೋನಿ ಅಬ್ಬರಿಸಿದ್ದಾರೆ. ಧೋನಿ ಅಮೋಘ ಪ್ರದರ್ಶನದಿಂದ ಇವರಿಗೆ 2175 ದಿನಗಳ ಬಳಿಕ ಐಪಿಎಲ್‌ನಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿದೆ.

ಮಹೇಂದ್ರ ಸಿಂಗ್ ಧೋನಿ ಲಖನೌ ಸೂಪರ್‌ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದರು. ವಿಕೆಟ್‌ ಕೀಪಿಂಗ್‌ನಲ್ಲಂತೂ ಇವರ ಸಾಧನೆ ಅಮೋಘ. ಎಲ್‌ಎಸ್‌ಜಿಯ ಸ್ಫೋಟಕ ಬ್ಯಾಟ್ಸ್‌ಮನ್ ನಿಕೋಲಸ್ ಪೂರನ್ ಬ್ಯಾಟಿಂಗ್ ಮಾಡುವಾಗ ಚೆನ್ನೈ ತಂಡದ ಅನ್ಶುಲ್ ಕಾಂಬೋಜ್ ಅವರಿಗೆ ಚೆಂಡನ್ನು ನೀಡಿ ಕೆಣಕಿದರು. ಈ ವೇಳೆ ಫೀಲ್ಡ್ ಅಂಪೈರ್‌ ನಾಟೌಟ್ ಎಂದು ತೀರ್ಪನ್ನು ನೀಡಿದರೂ, ಡಿಆರ್‌ಎಸ್‌ ಪಡೆದು ಮಿಂಚಿದರು. ಡಿಆರ್‌ಎಸ್‌ನಲ್ಲಿ ತಮ್ಮ ನಿರ್ಧಾರ ಸರಿಯಾಗಿಯೇ ಇರುತ್ತದೆ ಎಂದು ಮಾಹಿ ಮತ್ತೊಮ್ಮೆ ಸಾಬೀತು ಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಳಾ ಟಿ20 ಇತಿಹಾಸದಲ್ಲೇ ಮೊದಲು: ಏಷ್ಯಾಕಪ್‌ನಲ್ಲಿ ಲಂಕಾ, ಪಾಕ್ ಸ್ಪಿನ್ನರ್‌ಗಳ ವಿಕ್ರಮ

ಮಹಿಳಾ ಟಿ20 ಏಷ್ಯಾಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬ್ಯಾಟರ್‌ಗಳಿಗಿಂತ ಸ್ಪಿನ್ ಬೌಲರ್‌ಗಳು ಸಂಪೂರ್ಣ...

ಪಾಕಿಸ್ತಾನ ಕ್ರಿಕೆಟ್‌ಗೆ ಮತ್ತೆ ‘ಮ್ಯಾಚ್ ಫಿಕ್ಸಿಂಗ್’ ಕಳಂಕ: 7 ಮಂದಿ ತಂಡದಿಂದ ಔಟ್

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ನಡುವೆಯೇ ಪಾಕಿಸ್ತಾನ...

3 ಗಂಟೆಗಳ ರೋಚಕ ಹೋರಾಟ: ಯುಎಸ್ ಓಪನ್ ಮೊದಲ ಸುತ್ತಿನಲ್ಲೇ ವಿಲಿಯಮ್ಸ್ ಸಹೋದರಿಯರಿಗೆ ಸೋಲು

ಅಮೆರಿಕನ್ ಓಪನ್ ಟೆನಿಸ್ ಟೂರ್ನಿಯಲ್ಲಿ ವಿಸ್ಮಯಕಾರಿ ಪುನರಾಗಮನದ ನಿರೀಕ್ಷೆಯಲ್ಲಿದ್ದ ಲೆಜೆಂಡರಿ ಜೋಡಿ...

75ನೇ ವರ್ಷದ ಬಾಂಧವ್ಯ: ಭಾರತ-ಜಪಾನ್ ನಡುವೆ ಚೊಚ್ಚಲ ಟಿ20 ಕ್ರಿಕೆಟ್

ಭಾರತ ಹಾಗೂ ಜಪಾನ್ ನಡುವಿನ 75ನೇ ವರ್ಷದ ರಾಜತಾಂತ್ರಿಕ ಬಾಂಧವ್ಯದ ಸಂಭ್ರಮಾಚರಣೆಯ...