ಹಿರಿಯ ಆಟಗಾರ ಮಹೇಂದ್ರ ಸಿಂಗ್ ಧೋನಿ ಮತ್ತೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿ ವಾಪಸಾತಿ ಮಾಡಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಹಾಲಿ ನಾಯಕ ರುತುರಾಜ್ ಗಾಯಕ್ವಾಡ್ ಅವರು ಮೊಣಕೈ ಗಾಯದ ಸಮಸ್ಯೆಗೆ ತುತ್ತಾಗಿದ್ದು, ಇಡೀ ಟೂರ್ನಿಯಿಂದಲೇ ಹೊರಗುಳಿದಿದ್ದಾರೆ. ಹೀಗಾಗಿ ಬಾಕಿ ಉಳಿದಿರುವ 9 ಪಂದ್ಯಗಳಿಗೆ ಎಂ.ಎಸ್ ಧೋನಿ ಅವರೇ ನಾಯಕತ್ವ ವಹಿಸಲಿದ್ದಾರೆ ಎಂದು ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ ಖಚಿತಪಡಿಸಿದ್ದಾರೆ.
ನಾಳೆ (ಏ.11) ಕೋಲ್ಕತ್ತಾ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಸರದಿಯ 6ನೇ ಪಂದ್ಯವನ್ನಾಡಲಿದೆ. ಇತ್ತೀಚೆಗೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ತುಷಾರ್ ದೇಶ್‌ಪಾಂಡೆ ಅವರ ಬೌಲಿಂಗ್‌ನಲ್ಲಿ ಚೆಂಡು ರುತುರಾಜ್ ಅವರ ಬಲ ಮೊಣಕೈಗೆ ಬಲವಾಗಿ ಬಡಿದಿತ್ತು. ಈ ವೇಳೆ ಕೊಂಚ ಬ್ರೇಕ್ ತೆಗೆದುಕೊಂಡಿದ್ದ ರುತುರಾಜ್ ತಂಡಕ್ಕಾಗಿ ಬ್ಯಾಟಿಂಗ್ ಮುಂದುವರಿಸಿದ್ದರು.
ಈ ಸುದ್ದಿ ಓದಿದ್ದೀರಾ? ಐಪಿಎಲ್ 2025 | ಇಂದು ಆರ್‌ಸಿಬಿ – ಮುಂಬೈ ಹಣಾಹಣಿ; ಇಬ್ಬರಲ್ಲಿ ಯಾರು ಬಲಿಷ್ಠರು?
ಆದರೆ ಆ ಪಂದ್ಯದಲ್ಲಿ ಸಿಎಸ್‌ಕೆ ಸೋಲು ಕಂಡಿತು. ಇನ್ನೂ ಏಪ್ರಿಲ್ 8ರಂದು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿಯೂ ರುತುರಾಜ್ ಬ್ಯಾಟಿಂಗ್ ವೈಫಲ್ಯ ಎದುರಿಸಿದ್ದರು. ಇದೀಗ ಮೊಣಕೈ ಗಾಯದ ಸಮಸ್ಯೆ ಉಲ್ಬಣಗೊಂಡಿದ್ದು, ಪ್ರಸ್ತುತ ಐಪಿಎಲ್ ಟೂರ್ನಿಯಿಂದಲೇ ಅವರು ಹೊರಗುಳಿಯಲಿದ್ದಾರೆ ಎಂದು ಸಿಎಸ್‌ಕೆ ಮುಖ್ಯ ಕೋಚ್ ತಿಳಿಸಿದ್ದಾರೆ.
2023ರ ಆವೃತ್ತಿಯಲ್ಲಿ ಸಿಎಸ್‌ಕೆ ತಂಡ ಎಂ ಎಸ್ ಧೋನಿ ನಾಯಕತ್ವದಲ್ಲಿ 5ನೇ ಬಾರಿಗೆ ಚಾಂಪಿಯನ್ ಪಟ್ಟ ಗೆದ್ದುಕೊಂಡಿತ್ತು. ಆ ಬಳಿಕ ಧೋನಿ ತಮ್ಮ ನಾಯಕತ್ವಕ್ಕೆ ಗುಡ್‌ಬೈ ಹೇಳಿದ್ದರು. 2024ರ ಆವೃತ್ತಿಯಿಂದ ರುತುರಾಜ್ ಗಾಯಕ್ವಾಡ್ ಸಿಎಸ್‌ಕೆ ತಂಡದ ನಾಯಕನಾಗಿ ಮುಂದುವರಿಯುತ್ತಿದ್ದಾರೆ. ಪ್ರಸಕ್ತ ಆವೃತ್ತಿಯಲ್ಲಿ 5 ಪಂದ್ಯಗಳನ್ನಾಡಿರುವ ಸಿಎಸ್‌ಕೆ ತಂಡ ಕೇವಲ 1ರಲ್ಲಿ ಮಾತ್ರ ಗೆಲುವು ಸಾಧಿಸಿದೆ.