ಐಪಿಎಲ್ 2024 | ಮುಂಬೈ ಇಂಡಿಯನ್ಸ್ ನೂತನ ನಾಯಕನಾಗಿ ಹಾರ್ದಿಕ್ ಪಾಂಡ್ಯ

Date:

ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ 2024ರ ಆವೃತ್ತಿಗೂ ಮುನ್ನ ಅಚ್ಚರಿಯ ಘೋಷಣೆ ಮಾಡಿದೆ. ರೋಹಿತ್ ಶರ್ಮಾ ಅವರ ಬದಲಿಗೆ, ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಅವರನ್ನು ತಂಡದ ನಾಯಕನನ್ನಾಗಿ ನೇಮಿಸಿದೆ. ಈ ಮಹತ್ವದ ಬೆಳವಣಿಗೆಯು ಅಭಿಮಾನಿಗಳ ಅಚ್ಚರಿಗೆ ಕಾರಣವಾಗಿದೆ.

- Advertisement -

ದಾಖಲೆಯ ಐದು ಬಾರಿಯ ಐಪಿಎಲ್‌ ಚಾಂಪಿಯನ್‌ ಆಗಿರುವ ಮುಂಬೈ ಇಂಡಿಯನ್ಸ್‌ ತಂಡವನ್ನು 10 ವರ್ಷಗಳ ಕಾಲ ನಾಯಕನಾಗಿ ಮುನ್ನಡೆಸಿರುವ ರೋಹಿತ್ ಶರ್ಮಾ ಅವರ ನಾಯಕತ್ವದ ಜವಾಬ್ದಾರಿ ಅಂತ್ಯಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

2022ರಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕತ್ವ ವಹಿಸಿ ಫ್ರಾಂಚೈಸಿಯನ್ನು ಐಪಿಎಲ್ ಟ್ರೋಫಿಯತ್ತ ಮುನ್ನಡೆಸಿದ್ದ ಹಾರ್ದಿಕ್, ಕಳೆದ ತಿಂಗಳು ಅಚ್ಚರಿಯ ಬೆಳವಣಿಗೆಯಲ್ಲಿ ಮತ್ತೆ ಮುಂಬೈ ಇಂಡಿಯನ್ಸ್‌ಗೆ ಮರಳಿದ್ದಾರೆ. ಇದೀಗ ಇಲ್ಲಿಯೂ ನಾಯಕನ ಪಟ್ಟ ಸಿಕ್ಕಿದೆ.

ಐಪಿಎಲ್‌ನಲ್ಲಿ ಯಶಸ್ವಿ ತಂಡಗಳಲ್ಲಿ ಒಂದಾದ ಮುಂಬೈ ಇಂಡಿಯನ್ಸ್ ಅನ್ನು ನಾಯಕನಾಗಿ 10 ವರ್ಷಗಳ ರೋಹಿತ್ ಶರ್ಮಾ ಮುನ್ನಡೆಸಿದ್ದರು. ಅಲ್ಲದೆ ಇದರಲ್ಲಿ 5 ಬಾರಿ ತಂಡವನ್ನು ಚಾಂಪಿಯನ್‌ ಪಟ್ಟಕ್ಕೇರಿಸಿದ್ದರು.

ಐಪಿಎಲ್ ಇತಿಹಾಸದಲ್ಲಿ ಎಂಎಸ್‌ ಧೋನಿ ಮತ್ತು ರೋಹಿತ್‌ ತಲಾ ಐದು ಬಾರಿ ಪ್ರಶಸ್ತಿ ಗೆದ್ದಿದ್ದಾರೆ. ಆದರೆ ಹಿಟ್‌ಮ್ಯಾನ್‌ ಕೇವಲ 10 ಋತುಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ಜವಾಬ್ದಾರಿಯನ್ನು 2013ರಲ್ಲಿ ರೋಹಿತ್ ಶರ್ಮಾ ಅವರಿಗೆ ವಹಿಸಲಾಗಿತ್ತು.

ಹಾರ್ದಿಕ್‌ ಪಾಂಡ್ಯ ಎರಡು ಬಾರಿ ಮಾತ್ರ ಐಪಿಎಲ್‌ ನಾಯಕತ್ವ ವಹಿಸಿದ್ದಾರೆ. ಮೊದಲ ನಾಯಕತ್ವದಲ್ಲೇ ಗುಜರಾತ್‌ ತಂಡವನ್ನು ಚಾಂಪಿಯನ್‌ ಪಟ್ಟಕ್ಕೇರಿಸಿದ್ದ ಅವರು, ಎರಡನೇ ಬಾರಿ ಫೈನಲ್‌ವರೆಗೂ ಮುನ್ನಡೆಸಿದ್ದರು. ನಾಯಕತ್ವ ಬದಲಾವಣೆ ಬೆನ್ನಲ್ಲೇ ಮುಂಬೈ ಇಂಡಿಯನ್ಸ್‌ ತಂಡ, ವಿಶೇಷ ವಿಡಿಯೋ ಮೂಲಕ ರೋಹಿತ್ ಶರ್ಮಾ ಅವರಿಗೆ ಕೃತಜ್ಞತೆ ಸಲ್ಲಿಸಿದೆ.

“ಇದು ಪರಂಪರೆಯ ನಿರ್ಮಾಣದ ಭಾಗವಾಗಿದೆ. ಭವಿಷ್ಯದ ಪಂದ್ಯಾವಳಿಗಳಿಗಳಿಗಾಗಿ ಸಿದ್ಧತೆ ನಡೆಸುವ ತತ್ವಕ್ಕೆ ಮುಂಬೈ ಇಂಡಿಯನ್ಸ್ ಬದ್ಧವಾಗಿದೆ. ಸಚಿನ್‌ನಿಂದ ಹರ್ಭಜನ್ ಸಿಂಗ್ ಮತ್ತು ರಿಕಿ‌ ಪಾಂಟಿಂಗ್ ಅವರಿಂದ ರೋಹಿತ್‌ವರೆಗೆ ಮುಂಬೈ ತಂಡವು ಅಸಾಧಾರಣ ನಾಯಕರನ್ನು ಪಡೆದಿದೆ. ಇವರೆಲ್ಲಾ ತಕ್ಷಣದ ಯಶಸ್ಸಿಗೆ ಕೊಡುಗೆ ನೀಡುವುದರೊಂದಿಗೆ ಭವಿಷ್ಯಕ್ಕಾಗಿ ತಂಡವನ್ನು ಬಲಪಡಿಸುವತ್ತ ಗಮನಹರಿಸಿದ್ದಾರೆ. ಈ ತತ್ವಕ್ಕೆ ಅನುಗುಣವಾಗಿ ಹಾರ್ದಿಕ್ ಪಾಂಡ್ಯ ಅವರು ಐಪಿಎಲ್ 2024ರ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ” ಎಂದು ತಂಡದ ಮುಖ್ಯ ಕೋಚ್ ಮಹೇಲಾ ಜಯವರ್ಧನೆ ನಾಯಕತ್ವ ಬದಲಾವಣೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...