ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ ಆರಂಭಿಕ ಆಘಾತ ಅನುಭವಿಸಿತ್ತು. ಈ ವೇಳೆ ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಬ್ಯಾಟಿಂಗ್ ನಡೆಸಿ ಆಪದ್ಬಾಂಧವನಾದ ಶುಭಮನ್ ಗಿಲ್ ಅವರ ಸಮಯೋಚಿತ ಬ್ಯಾಟಿಂಗ್ ಪ್ರದರ್ಶನದಿಂದ ಮೊದಲ ಇನ್ನಿಂಗ್ಸ್‌ನಲ್ಲಿ 28 ರನ್‌ಗಳ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ.
ನ್ಯೂಝಿಲೆಂಡ್ ವಿರುದ್ಧದ ಮೂರನೆಯ ಟೆಸ್ಟ್ ಪಂದ್ಯದಲ್ಲಿ ಭಾರತವು 263 ರನ್‌ಗಳಿಗೆ ಆಲೌಟ್ ಆಗಿದ್ದು, 28 ರನ್‌ಗಳ ಮುನ್ನಡೆ ಸಾಧಿಸಿದೆ. ಸಮಯೋಚಿತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಶುಭಮನ್ ಗಿಲ್ ಅವರು, 90 ರನ್ ಗಳಿಸಿದ್ದ ವೇಳೆ ಇಜಾಝ್ ಪಟೇಲ್ ಅವರ ಓವರ್‌ನಲ್ಲಿ ಮಿಚೆಲ್‌ಗೆ ಕ್ಯಾಚಿತ್ತು ನಿರ್ಗಮಿಸುವ ಮೂಲಕ ಶತಕ ವಂಚಿತರಾದರು.
ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಟೀಮ್ ಇಂಡಿಯಾದ ಬ್ಯಾಟಿಂಗ್ ವಿಭಾಗವು ಆರಂಭದಲ್ಲಿ ಕೈಕೊಟ್ಟಿದ್ದರಿಂದ ಮೊದಲ ದಿನದಾಟಕ್ಕೆ ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 86 ರನ್ ಗಳಿಸಿತ್ತು.
Innings Break! #TeamIndia post 263 on the board, securing a 28-run lead!
— BCCI (@BCCI) November 2, 2024
Scorecard ▶️ https://t.co/KNIvTEy04z#INDvNZ | @IDFCFIRSTBank pic.twitter.com/sY2zHOS5t5
ಎರಡನೆ ದಿನದಾಟಕ್ಕಾಗಿ ಕ್ರೀಸ್ ಕಾಯ್ದಿರಿಸಿಕೊಂಡಿದ್ದ ಶುಭಮನ್ ಗಿಲ್ ಹಾಗೂ ರಿಷಭ್ ಪಂತ್ 5ನೇ ವಿಕೆಟ್‌ಗೆ 96 ರನ್‌ಗಳ ಜೊತೆಯಾಟ ನಡೆಸುವಲ್ಲಿ ಯಶಸ್ವಿಯಾದರು. ಟೆಸ್ಟ್ ಕ್ರಿಕೆಟ್‌ನಲ್ಲೂ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದ ರಿಷಭ್ ಪಂತ್, ಕೇವಲ 59 ಎಸೆತಗಳನ್ನು ಎದುರಿಸಿ ಎಂಟು ಬೌಂಡರಿ ಹಾಗೂ ಎರಡು ಸಿಕ್ಸರ್‌ಗಳ ನೆರವಿನಿಂದ 60 ರನ್ ಕಲೆ ಹಾಕಿದರು. ಬಳಿಕ ಐಶ್ ಸೋಧಿ ಎಸೆತದಲ್ಲಿ ಎಲ್‌ಬಿಡಬ್ಲ್ಯೂ ಬಲೆಗೆ ಬಿದ್ದರು.
ರಕ್ಷಣಾತ್ಮಕ ಬ್ಯಾಟಿಂಗ್ ಪ್ರದರ್ಶಿಸಿದ ಬಲಗೈ ಬ್ಯಾಟರ್ ಶುಭಮನ್ ಗಿಲ್, 146 ಎಸೆತಗಳಲ್ಲಿ ಏಳು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 90 ರನ್ ಗಳಿಸಿದ್ದ ವೇಳೆ ಇಜಾಝ್ ಪಟೇಲ್ ಅವರಿಗೆ ವಿಕೆಟ್ ಒಪ್ಪಿಸುವ ಮೂಲಕ ಶತಕ ವಂಚಿತರಾದರು. ಕೊನೆಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ವಾಷಿಂಗ್ಟನ್ ಸುಂದರ್, 2 ಸಿಕ್ಸ್, 4 ಬೌಂಡರಿಯ ನೆರವಿನಿಂದ 38 ರನ್ ಗಳಿಸಿ, ಔಟಾಗದೇ ಉಳಿದರು.
ಇದನ್ನು ಓದಿದ್ದೀರಾ? ‘ವಕ್ಫ್ ಆಸ್ತಿ ಅಲ್ಲಾಹನದ್ದು, ಮರಳಿ ಪಡೆಯಲು ಕಾಂಪ್ರಮೈಸ್ ಬೇಡ’ ಎಂದಿದ್ದ ಬೊಮ್ಮಾಯಿ; ಇಲ್ಲಿದೆ ದಾಖಲೆ
ಆರಂಭಿಕ ಆಘಾತದಿಂದ ಚೇತರಿಸಿಕೊಂಡ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 263 ರನ್‌ಗಳಿಗೆ ಆಲೌಟ್ ಆಗಿದ್ದು, 28 ರನ್‌ಗಳ ಮುನ್ನಡೆ ಸಾಧಿಸಿದೆ. ನ್ಯೂಝಿಲ್ಯಾಂಡ್ ಪರವಾಗಿ ಬೌಲಿಂಗ್‌ನಲ್ಲಿ ಮಿಂಚಿದ ಇಜಾಝ್ ಪಟೇಲ್, 103 ರನ್‌ಗೆ 5 ವಿಕೆಟ್ ಕಿತ್ತು ಮಿಂಚಿದರು.
ಎರಡನೇ ಇನ್ನಿಂಗ್ಸ್ ಆರಂಭಿಸಿರುವ ನ್ಯೂಝಿಲ್ಯಾಂಡ್, ಟೀಮ್ ಇಂಡಿಯಾ ಬೌಲರ್ ಆಕಾಶ್ ದೀಪ್ ಎಸೆದ ಮೊದಲ ಓವರ್‌ನಲ್ಲೆ ನಾಯಕ ಟಾಮ್ ಲಾಥಮ್ ಅವರ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
