ವಿಶ್ವ ಚಾಂಪಿಯನ್‌ಶಿಪ್‌, ಏಷ್ಯನ್ ಗೇಮ್ಸ್‌ಗೆ ಅರ್ಹತೆ ಪಡೆದ ಕೇರಳದ ಮುರಳಿ ಶ್ರೀಶಂಕರ್

Date:

ಕೇರಳದ ಯುವ ಲಾಂಗ್‌ ಜಂಪ್‌ ಪಟು ಮುರಳಿ ಶ್ರೀಶಂಕರ್, ಆಗಸ್ಟ್‌ನಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದಿದ್ದಾರೆ.

- Advertisement -

ಭುವನೇಶ್ವರದಲ್ಲಿ ನಡೆದ ರಾಷ್ಟ್ರೀಯ ಅಂತರ-ರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಮೊದಲ ಸುತ್ತಿನಲ್ಲೇ 8.41 ಮೀ. ದೂರ ಜಿಗಿಯುವಲ್ಲಿ 24 ವರ್ಷದ ಮುರಳಿ ಯಶಸ್ವಿಯಾದರು. ಆ ಮೂಲಕ  ವಿಶ್ವ ಚಾಂಪಿಯನ್‌ಶಿಪ್‌  ಮತ್ತು  ಏಷ್ಯನ್ ಗೇಮ್ಸ್‌ಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾದರು. ವೃತ್ತಿ ಜೀವನದ ಇದುರೆಗಿನ ಸ್ಪರ್ಧೆಯಲ್ಲಿ, 8.41 ಮೀ.  ದೂರ ಜಿಗಿತ ಶ್ರೀಶಂಕರ್ ಅವರ ವೈಯಕ್ತಿಕ ಶ್ರೇಷ್ಠಸಾಧನೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಆಗಸ್ಟ್ 19 ರಿಂದ ಆಗಸ್ಟ್ 27 ರವರೆಗೆ ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್‌ಶಿಪ್‌ನ ಪುರುಷರ ಲಾಂಗ್ ಜಂಪ್‌ ವಿಭಾಗದಲ್ಲಿ ಅರ್ಹತೆ ಪಡೆಯಲು,  8.25 ಮೀ. ಮತ್ತು  ಏಷ್ಯನ್ ಗೇಮ್ಸ್‌ನಲ್ಲಿ 7.95 ಮೀ. ದೂರ ಜಿಗಿತ ಮಾನದಂಡವಾಗಿ ನಿಗದಿಪಡಿಸಲಾಗಿತ್ತು.

ಅದಾಗಿಯೂ, ಈ ವರ್ಷದ ಆರಂಭದಲ್ಲಿ ಜೆಸ್ವಿನ್ ಆಲ್ಡ್ರಿನ್ ಸ್ಥಾಪಿಸಿದ್ದ ರಾಷ್ಟ್ರೀಯ ದಾಖಲೆಯನ್ನು (8.42) ದೂರವನ್ನು ಹಿಂದಿಕ್ಕಲು ಮುರಳಿ ಶ್ರೀಶಂಕರ್ ಅವರಿಗೆ ಸಾಧ್ಯವಾಗಲಿಲ್ಲ. ಕೇವಲ ಒಂದು ಸೆಂಟಿಮೀಟರ್ ದೂರದಲ್ಲಿ ಅವರಿಗೆ ಈ ಸಾಧನೆ ಸದ್ಯಕ್ಕೆ ಕೈತಪ್ಪಿದೆ.

ಭುವನೇಶ್ವರದಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಅಂತರ-ರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಮೊದಲ ಸುತ್ತಿನಲ್ಲಿ ಜೆಸ್ವಿನ್ ಆಲ್ಡ್ರಿನ್ 7.83 ಮೀ. ಜಿಗಿತದೊಂದಿಗೆ ಎರಡನೇ ಸ್ಥಾನ ಮತ್ತು ಮುಹಮ್ಮದ್ ಅನೀಸ್ ಯಾಹಿಯಾ (7.71 ಮೀಟರ್‌) ಮೂರನೇ ಸ್ಥಾನ ಪಡೆದರು. ಸೋಮವಾರ ನಡೆಯಲಿರುವ ಫೈನಲ್‌ ಸುತ್ತಿಗೆ ಒಟ್ಟು 12 ಲಾಂಗ್ ಜಂಪರ್‌ಗಳು ಅರ್ಹತೆ ಪಡೆದಿದ್ದಾರೆ.

ಡೈಮಂಡ್ ಲೀಗ್‌ನಲ್ಲಿ ಕಂಚಿನ ಪದಕ

ಜೂನ್ 9 ರಂದು, ಪ್ಯಾರಿಸ್‌ನಲ್ಲಿ ನಡೆದಿದ್ದ ಡೈಮಂಡ್ ಲೀಗ್‌ ಸ್ಪರ್ಧೆಯಲ್ಲಿ ಶ್ರೀಶಂಕರ್ ಕಂಚಿನ ಪದಕದ ಸಾಧನೆ ಮಾಡಿದ್ದರು. ಆ ಮೂಲಕ ಡೈಮಂಡ್ ಲೀಗ್‌ ಕೂಟದಲ್ಲಿ ಪದಕ ಗೆದ್ದ ಮೂರನೇ ಭಾರತೀಯ ಅಥ್ಲೀಟ್‌ ಎನ್ನುವ ಖ್ಯಾತಿಯನ್ನು ತನ್ನದಾಗಿಸಿಕೊಂಡಿದ್ದರು.

ಒಲಿಂಪಿಕ್ ಚಾಂಪಿಯನ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಮತ್ತು ಮಾಜಿ ಡಿಸ್ಕಸ್ ಎಸೆತಗಾರ ವಿಕಾಸ್ ಗೌಡ ಬಳಿಕ ಈ ಸಾಧನೆ ಮಾಡಿದ ಭಾರತದ ಮೂರನೇ ಅಥ್ಲೀಟ್‌ ಎನಿಸಿಕೊಂಡರು..

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...