ರಣಜಿ ಫೈನಲ್‌ | ಶತಕ ಬಾರಿಸಿ ಸಚಿನ್ ದಾಖಲೆ ಮುರಿದ ಮುಶೀರ್ ಖಾನ್

Date:

ಮಂಗಳವಾರ ವಾಂಖೆಡೆ ಸ್ಟೇಡಿಯಂನಲ್ಲಿ ವಿದರ್ಭ ವಿರುದ್ಧದ ರಣಜಿ ಫೈನಲ್‌ನಲ್ಲಿ ಮುಶೀರ್ ಖಾನ್ ಶತಕ ಬಾರಿಸುವ ಮೂಲಕ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದರು.

- Advertisement -

19 ವರ್ಷ ಮತ್ತು 14 ದಿನಗಳ ವಯಸ್ಸಿನ ಮುಶೀರ್ ಖಾನ್ ರಣಜಿ ಟ್ರೋಫಿ ಫೈನಲ್‌ನಲ್ಲಿ ಶತಕ ಬಾರಿಸಿದ ಮುಂಬೈನ ಅತ್ಯಂತ ಕಿರಿಯ ಬ್ಯಾಟ್ಸ್‌ಮನ್ ಆಗಿದ್ದಾರೆ. ತೆಂಡೂಲ್ಕರ್ 1994-95ರಲ್ಲಿ ಪಂಜಾಬ್ ವಿರುದ್ಧ ತನ್ನ 21ನೇ ವಯಸ್ಸಿನಲ್ಲಿ ಬರೆದ ದಾಖಲೆಯನ್ನು ಈಗ ಮುಶೀರ್‌ ಮುರಿದಿದ್ದಾರೆ. 1994-95ರ ಫೈನಲ್‌ನಲ್ಲಿ ಸಚಿನ್ ಎರಡು ಶತಕಗಳನ್ನು (140 ಮತ್ತು 139) ಗಳಿಸಿದ್ದರಿಂದ ಮುಂಬೈ ಟ್ರೋಫಿಯನ್ನು ಗೆದ್ದುಕೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಭಾರತದ ಬ್ಯಾಟ್ಸ್‌ಮನ್ ಸರ್ಫರಾಜ್ ಖಾನ್ ಅವರ ಕಿರಿಯ ಸಹೋದರರಾಗಿರುವ ಮುಶೀರ್ ಖಾನ್ ತಮ್ಮ ಶತಕದೊಂದಿಗೆ ನಡೆಯುತ್ತಿರುವ ಫೈನಲ್‌ನಲ್ಲಿ ಮುಂಬೈ ತಂಡವನ್ನು ಬಲಿಷ್ಠ ಸ್ಥಾನದಲ್ಲಿ ನಿಲ್ಲಿಸಿದ್ದಾರೆ.

ಇನ್ನು ಸಾಲು ಸಾಲು ವೈಫಲ್ಯ ಕಾರಣ ಭಾರತ ಟೆಸ್ಟ್‌ ತಂಡದಲ್ಲಿ ತನ್ನ ಸ್ಥಾನವನ್ನು ಇತ್ತೀಚೆಗೆ ಕಳೆದುಕೊಂಡ ಸ್ಟಾರ್‌ ಬ್ಯಾಟರ್‌ ಶ್ರೇಯಸ್‌ ಅಯ್ಯರ್‌ ರಣಜಿ ಟ್ರೋಫಿ ಕ್ರಿಕೆಟ್‌ನಲ್ಲಿ ಮಿಂಚಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ ಬರೀ 7 ರನ್‌ ಗಳಿಸಿದ್ದ ಶ್ರೇಯಸ್‌ ಅಯ್ಯರ್‌ ಎರಡನೇ ಇನಿಂಗ್ಸ್‌ನಲ್ಲಿ 62 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ. ಕಳೆದ 14 ತಿಂಗಳಲ್ಲಿ ಮೊದಲ 50ಕ್ಕೂ ಅಧಿಕ ಸ್ಕೋರ್ ಅನ್ನು ಶ್ರೇಯಸ್ ಅಯ್ಯರ್ ಪಡೆದಿದ್ದಾರೆ.

ಮೊದಲ ಇನಿಂಗ್ಸ್‌ನಲ್ಲಿ ವಿದರ್ಭವನ್ನು ಕೇವಲ 105 ರನ್‌ಗಳಿಗೆ ಆಲೌಟ್ ಮಾಡುವ ಮೊದಲು ಮುಂಬೈ 224 ರನ್ ಗಳಿಸಿತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ 418 ಸ್ಟೋರ್ ಗಳಿಸಿದೆ. ಈ ವರದಿಯನ್ನು ಪ್ರಕಟಿಸುವ ಸಮಯದಲ್ಲಿ ವಿದರ್ಭ ಎರಡನೇ ಇನ್ನಿಂಗ್ಸ್‌ನಲ್ಲಿ 10/0 ಸ್ಕೋರ್ ಗಳಿಸಿದ್ದು, 538 ಟಾರ್ಗೆಟ್ ಆಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ವಿರಾಟ್ ‘ವಿಶ್ವ’ರೂಪ: 15 ಸಾವಿರ ರನ್ ಗಡಿ ದಾಟಿ ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ

ಕೇರಳದ ತಿರುವನಂತಪುರದಲ್ಲಿರುವ ಗ್ರೀನ್‌ಫೀಲ್ಡ್‌ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವೆಸ್ಟ್ ಇಂಡೀಸ್...