ತಂಬಾಕು ಜಾಹೀರಾತುಗಳಲ್ಲಿ ಏಕೆ ಕಾಣಿಸಿಕೊಳ್ಳುವುದಿಲ್ಲ; ಸತ್ಯ ಬಿಚ್ಚಿಟ್ಟ ಸಚಿನ್!

Date:

  • ಹಲವು ಆಟಗಳನ್ನು ಆಡುತ್ತಿದ್ದರೂ ಕ್ರಿಕೆಟ್‌ ಕಡೆಗೆ ಆಕರ್ಷಣೆ ಎಂದ ಸಚಿನ್ ತೆಂಡೂಲ್ಕರ್
  • ಬಾಯಿಯ ಆರೋಗ್ಯ ಉತ್ತಮವಾಗಿದ್ದರೆ ದೈಹಿಕ ಆರೋಗ್ಯವೂ ಉತ್ತಮ ಎಂದು ಸಲಹೆ

ಭಾರತೀಯ ಕ್ರಿಕೆಟ್‌ನ ದಂತಕತೆ ಸಚಿನ್‌ ತೆಂಡೂಲ್ಕರ್‌ ತಂಬಾಕು ಜಾಹಿರಾತಿನಲ್ಲಿ ನಟಿಸದಿರುವ ತೀರ್ಮಾನದ ಹಿಂದಿನ ಸತ್ಯ ಬಿಚ್ಚಿಟ್ಟಿದ್ದಾರೆ.

ಬಾಯಿಯ ನೈರ್ಮಲ್ಯ ಅಭಿಯಾನದ ಭಾಗವಾಗಿರುವ ಮಹಾರಾಷ್ಟ್ರ ಸರ್ಕಾರದ ಸ್ವಚ್ಛ ಮುಖ್ ಅಭಿಯಾನ್‌ಗೆ ನಗುವಿನ ರಾಯಭಾರಿಯಾಗಿ ನೇಮಕಗೊಂಡ ಕಾರ್ಯಕ್ರಮದಲ್ಲಿ ಮಾತನಾಡಿರುವ ಸಚಿನ್ ತೆಂಡೂಲ್ಕರ್, “ತಂದೆಯ ಸಲಹೆಯ ಮೇರೆಗೆ ತಂಬಾಕು ಜಾಹೀರಾತಿನಿಂದ ದೂರವಿದ್ದೆ” ಎಂಬ ಮಾಹಿತಿ ಹಂಚಿಕೊಂಡಿದ್ದಾರೆ.

“ನಾನು ಭಾರತ ಕ್ರಿಕೆಟ್ ತಂಡಕ್ಕಾಗಿ ಆಡಲು ಆರಂಭಿಸಿದಾಗ, ಆಗಷ್ಟೇ ಶಾಲಾ ವಿದ್ಯಾಭ್ಯಾಸ ಮುಗಿಸಿದ್ದೆ. ಆಗ ನನಗೆ ಜಾಹೀರಾತುಗಳಲ್ಲಿ ನಟಿಸಿ, ಉತ್ಪನ್ನಗಳನ್ನು ಪ್ರಚಾರ ಮಾಡಲು ಅನೇಕ ಅವಕಾಶಗಳು ಬಂದಿದ್ದವು. ಆದರೆ, ಎಂದಿಗೂ ತಂಬಾಕು ಉತ್ಪನ್ನಗಳನ್ನು ಉತ್ತೇಜಿಸದಂತೆ ನನಗೆ ನನ್ನ ತಂದೆ ಹೇಳಿದ್ದರು. ಅಂತೆಯೇ ನನಗೆ ಬಂದಿದ್ದ ಅನೇಕ ತಂಬಾಕು ಜಾಹೀರಾತು ಅವಕಾಶಗಳನ್ನು ನಾನು ಒಪ್ಪಿಕೊಳ್ಳಲಿಲ್ಲ. ಜೊತೆಗೆ ನನ್ನ ಜೀವನದ ಗುರಿಗಳನ್ನು ಸಾಧಿಸುವುದಕ್ಕೆ ದೈಹಿಕ ಆರೋಗ್ಯದ ಬಗ್ಗೆ ಶಿಸ್ತನ್ನು ಬೆಳೆಸಿಕೊಳ್ಳುವುದು, ಜಾಗೃತರಾಗಿರುವುದು ಬಹಳ ಮುಖ್ಯವಾಗಿತ್ತು” ಎಂದು ತೆಂಡೂಲ್ಕರ್ ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಐಪಿಎಲ್‌ 2023 | ಈ ಬಾರಿ ಪಂದ್ಯದ ದಿಕ್ಕು ಬದಲಿಸಿದ 9 ಆಟಗಾರರು

“ಬಾಯಿಯ ಆರೋಗ್ಯ ಉತ್ತಮವಾಗಿದ್ದರೆ ದೈಹಿಕ ಆರೋಗ್ಯವೂ ಉತ್ತಮವಾಗಿರಲಿದೆ. ಶೇ 50ರಷ್ಟು ಮಕ್ಕಳು ಬಾಯಿಯ ಕಾಯಿಲೆಗಳನ್ನು ಹೊಂದಿದ್ದಾರೆ ಮತ್ತು ಅದು ಅವರ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಆದರೆ, ಯಾರೂ ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಅಂತಹ ವಿಷಯವು ಅವರ ಆತ್ಮವಿಶ್ವಾಸವನ್ನು ಹಾಳುಮಾಡುತ್ತದೆ” ಎಂದು ಸಚಿನ್ ತಿಳಿಸಿದ್ದಾರೆ.

“ನಾನು ಬಾಲ್ಯದಲ್ಲಿ ಬಹಳಷ್ಟು ಕ್ರೀಡೆಗಳನ್ನು ಆಡುತ್ತಿದ್ದೆ. ಆದರೆ ಕ್ರಿಕೆಟ್‌ ಬಗ್ಗೆ ಆಕರ್ಷಿತನಾಗಿದ್ದೆ. ಶಿಸ್ತು ರೂಢಿಸಿಕೊಳ್ಳಬೇಕಾದರೆ ಸದೃಢ ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಬೇಕೆಂಬುದನ್ನು ವರ್ಷದಿಂದ ವರ್ಷಕ್ಕೆ ಕಂಡುಕೊಂಡೆ. ಇತ್ತೀಚಿನ ದಿನಗಳಲ್ಲಿ ಸದೃಢ ಆರೋಗ್ಯ ಒಂದು ಟ್ರೆಂಡ್ ಆಗಿ ಮಾರ್ಪಟ್ಟಿದೆ. ಆದರೆ ದೈಹಿಕ ಸದೃಢತೆಯಷ್ಟೆ ಬಾಯಿಯನ್ನು ಶುಚಿಯಾಗಿಟ್ಟುಕೊಳ್ಳುವುದು ಅಷ್ಟೇ ಮುಖ್ಯ” ಎಂದು ತೆಂಡೂಲ್ಕರ್ ಹೇಳಿದರು.

ಬಾಯಿ ನೈರ್ಮಲ್ಯ ಅಭಿಯಾನವು ಬಾಯಿಯ ಆರೋಗ್ಯ ಮತ್ತು ನೈರ್ಮಲ್ಯವನ್ನು ಸುಧಾರಿಸಲು ಮತ್ತು ಉತ್ತಮ ಬಾಯಿ ನೈರ್ಮಲ್ಯದ ಮಹತ್ವದ ಬಗ್ಗೆ ಭಾರತೀಯರಿಗೆ ಶಿಕ್ಷಣ ನೀಡುತ್ತಿರುವ ಭಾರತೀಯ ದಂತ ಸಂಘದ ರಾಷ್ಟ್ರೀಯ ಉಪಕ್ರಮವಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ‘ಮ್ಯಾಚ್ ವಿನ್ನರ್’ ಆದ ದಿನೇಶ್ ಕಾರ್ತಿಕ್: ಆರ್‌ಸಿಬಿಗೆ ರೋಚಕ ಜಯ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ದಿನೇಶ್...

ಐಪಿಎಲ್ | ಅಲ್‌ಝಾರಿ ಜೋಸೆಫ್ ದುಬಾರಿ ಬೌಲಿಂಗ್; ಆರ್‌ಸಿಬಿಗೆ ಗೆಲ್ಲಲು 177 ರನ್‌ಗಳ ಗುರಿ ನೀಡಿದ ಪಂಜಾಬ್

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ನ 6ನೇ ಪಂದ್ಯವು ರಾಯಲ್ ಚಾಲೆಂಜರ್ಸ್‌...

ಐಪಿಎಲ್ ಸಂಪೂರ್ಣ ವೇಳಾಪಟ್ಟಿ ಪ್ರಕಟ: ಫೈನಲ್ ಪಂದ್ಯ ದಕ್ಷಿಣ ಭಾರತದಲ್ಲಿ ಆಯೋಜನೆ

ಬಿಸಿಸಿಐ ಇಂದು ಐಪಿಎಲ್‌ 2024ರ ಎರಡನೇ ಆವೃತ್ತಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ....

ಐಪಿಎಲ್ | ಉಮೇಶ್ ಯಾದವ್ ಸಾಹಸ: ಮುಂಬೈ ವಿರುದ್ಧ ಗುಜರಾತ್‌ಗೆ 6 ರನ್‌ಗಳ ರೋಚಕ ಜಯ

ಗುಜರಾತ್‌ನ ಅಹ್ಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 5ನೇ...