ಐಪಿಎಲ್‌ನಲ್ಲಿ ತಿರಸ್ಕಾರ | ರಣಜಿಯಲ್ಲಿ ಫೀನಿಕ್ಸ್‌ನಂತೆ ಫಾರ್ಮ್‌ಗೆ ಬಂದ ಶಾರ್ದೂಲ್ ಠಾಕೂರ್

Date:

2025ರಲ್ಲಿ ನಡೆಯುವ ಐಪಿಎಲ್‌ನ ಹರಾಜು ಪ್ರಕ್ರಿಯೆಯಲ್ಲಿ ನಗಣ್ಯವಾಗಿದ್ದ ಟೀಮ್‌ ಇಂಡಿಯಾ ಆಟಗಾರ ಶಾರ್ದೂಲ್ ಠಾಕೂರ್ ಇದೀಗ ರಣಜಿಯಲ್ಲಿ ಫೀನಿಕ್ಸ್‌ನಂತೆ ಫಾರ್ಮ್‌ಗೆ ಬಂದಿದ್ದಾರೆ. ಉತ್ತಮ ಪ್ರದರ್ಶನ ನೀಡುತ್ತಿದ್ದು, ಕ್ರಿಕೆಟ್‌ ಪ್ರೇಮಿಗಳು ಚಿತ್ತ ಸೆಳೆದಿದ್ದಾರೆ.

- Advertisement -

ಪ್ರಸ್ತುತ ನಡೆಯುತ್ತಿರುವ ರಣಜಿ ಟ್ರೋಫಿ ಕ್ರಿಕೆಟ್‌ ಸರಣಿಯಲ್ಲಿ ಶಾರ್ದೂಲ್‌ ಅವರು ಮುಂಬೈ ತಂಡದ ಭಾಗವಾಗಿದ್ದರು. ಗುರುವಾರ, ಮುಂಬೈನಲ್ಲಿ ನಡೆದ ಮುಂಬೈ-ಮೇಘಾಲಯ ನಡುವಿನ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಹ್ಯಾಟ್ರಿಕ್ ವಿಕೆಟ್‌ ಪಡೆದು, ಸಾಧನೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮುಂಬೈ ತಂಡದ ಪರವಾಗಿ ಬೌಲಿಂಗ್ ಮಾಡಿದ ಶಾದೂರ್ಲ್‌, ಮೂರನೇ ಓವರ್‌ನಲ್ಲಿ ಮೆಘಾಲಯ ತಂಡದ ಬ್ಯಾಟರ್‌ ಅನಿರುದ್ಧ್ ಬಿ, ಸುಮಿತ್ ಕುಮಾರ್ ಮತ್ತು ಜಸ್ಕಿರತ್ ಅವರನ್ನು ಔಟ್‌ ಮಾಡಿದ್ದಾರೆ. ಹ್ಯಾಟ್ರಿಕ್ ವಿಕೆಟ್‌ ಗಳಿಸಿದ್ದಾರೆ.

ರಣಜಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಶಾರ್ದೂಲ್‌ ಈವರೆಗೆ 7 ಪಂದ್ಯಗಳನ್ನು ಆಡಿದ್ದು, 20 ವಿಕೆಟ್‌ಗಳನ್ನು ಪಡೆದಿದ್ದಾರೆ. ಮಾತ್ರವಲ್ಲದೆ, ಬ್ಯಾಟಿಂಗ್‌ನಲ್ಲೂ ಅಬ್ಬರಿಸುತ್ತಿದ್ದು, ಒಂದು ಶತಕ ಮತ್ತು ಎರಡು ಅರ್ಧಶತಕಗಳೊಂದಿಗೆ 297 ರನ್‌ಗಳನ್ನು ಗಳಿಸಿದ್ದಾರೆ.

ಶಾರ್ದೂಲ್ ಠಾಕೂರ್ ಐಪಿಎಲ್‌ನಲ್ಲಿ ಹಲವು ತಂಡಗಳಲ್ಲಿ ಆಡಿದ್ದರು. ಆರಂಭದಲ್ಲಿ, 2012ರಲ್ಲಿ ಮುಂಬೈ ಇಂಡಿಯನ್ಸ್‌ ತಂಡದಲ್ಲಿದ್ದರು, 2015 ಮತ್ತು 2016ದಲ್ಲಿ ಕಿಂಗ್ಸ್ XI ಪಂಜಾಬ್, 2017 ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್, 2018–2021, 2024ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್, 2022ರಲ್ಲಿ ದೆಹಲಿ ಕ್ಯಾಪಿಟಲ್ಸ್‌ ಹಾಗೂ 2023ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಆಡಿದ್ದರು. ಆದರೆ, ಈ ಬಾರಿ ಅವರನ್ನು ಯಾವುದೇ ತಂಡವು ಹರಾಜಿನಲ್ಲಿ ಖರೀದಿಸಿಲ್ಲ. ಹೀಗಾಗಿ, ಐಪಿಎಲ್‌ನಿಂದ ಹೊರಗುಳಿದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ವಿರಾಟ್ ‘ವಿಶ್ವ’ರೂಪ: 15 ಸಾವಿರ ರನ್ ಗಡಿ ದಾಟಿ ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ

ಕೇರಳದ ತಿರುವನಂತಪುರದಲ್ಲಿರುವ ಗ್ರೀನ್‌ಫೀಲ್ಡ್‌ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವೆಸ್ಟ್ ಇಂಡೀಸ್...