ಏಷ್ಯಾ ಕಪ್ ಟೂರ್ನಿಗೆ ಅರ್ಹತೆ ಪಡೆದು ಇತಿಹಾಸ ಬರೆದ ನೇಪಾಳ

Date:

  • ಸೆಪ್ಟಂಬರ್‌ನಲ್ಲಿ ನಡೆಯುವ ಏಷ್ಯಾ ಕಪ್ ಟೂರ್ನಿ
  • ಇದೇ ಮೊದಲ ಬಾರಿಗೆ ಪ್ರಧಾನ ಸುತ್ತಿಗೇರಿದ ನೇಪಾಳ

ಎಸಿಸಿ ಪ್ರೀಮಿಯರ್ ಕಪ್‌ನ ಫೈನಲ್‌ ಪಂದ್ಯದಲ್ಲಿ ಯುಎಇ ತಂಡವನ್ನು ಮಣಿಸಿದ ನೇಪಾಳ, ಸೆಪ್ಟಂಬರ್‌ನಲ್ಲಿ ನಡೆಯುವ ಏಷ್ಯಾ ಕಪ್ ಟೂರ್ನಿಗೆ ಅರ್ಹತೆ ಪಡೆದಿದೆ.

- Advertisement -

ನೇಪಾಳದ ಕೀರ್ತಿಪುರದಲ್ಲಿರುವ ತ್ರಿಭುವನ್ ವಿಶ್ವವಿದ್ಯಾಲಯದ ಮೈದಾನದಲ್ಲಿ ಮಂಗಳವಾರ ನಡೆದ ಫೈನಲ್‌ ಪಂದ್ಯದಲ್ಲಿ ಯುಎಇಯನ್ನು ಏಳು ವಿಕೆಟ್‌ಗಳ ಅಂತರದಲ್ಲಿ ಮಣಿಸಿದ ನೇಪಾಳ, ಇದೇ ಮೊದಲ ಬಾರಿಗೆ ಏಷ್ಯಾ ಕಪ್‌ ಟೂರ್ನಿಯ ಪ್ರಧಾನ ಸುತ್ತಿಗೆ ಅರ್ಹತೆ ಪಡೆದುಕೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಗೆಲುವಿನೊಂದಿಗೆ ನೇಪಾಳ ತಂಡ, ಏಷ್ಯಾ ಕಪ್‌ 2023 ಟೂರ್ನಿಯ ‘ಎ’ ಗುಂಪಿನಲ್ಲಿ ಟೀಮ್ ಇಂಡಿಯಾ ಮತ್ತು ಪಾಕಿಸ್ತಾನದ ಜೊತೆಗೆ ಸ್ಥಾನ ಪಡೆದುಕೊಂಡಿದೆ.  

ಏಷ್ಯಾ ಕಪ್‌ 2023 ಟೂರ್ನಿಯು ಪಾಕಿಸ್ತಾನದ ಆತಿಥ್ಯದಲ್ಲಿ ಆಗಸ್ಟ್‌-ಸೆಪ್ಟೆಂಬರ್‌ನಲ್ಲಿ ನಡೆಯಲಿದೆ.

ಮಳೆ ಕಾರಣ 2 ದಿನಗಳ ಕಾಲ ನಡೆಸಲಾದ ಫೈನಲ್‌ ಪಂದ್ಯದಲ್ಲಿ ರೋಹಿತ್‌ ಪೌದೆಲ್‌ ಸಾರಥ್ಯದ ನೇಪಾಳ ತಂಡ ಸ್ಮರಣೀಯ ಜಯ ತನ್ನದಾಗಿಸಿಕೊಂಡಿದೆ.

ಯುಎಇ (ಯುನೈಟೆಡ್​ ಅರಬ್​ ಎಮಿರೇಟ್ಸ್) ತಂಡವು ಸೋಮವಾರ 9 ವಿಕೆಟ್​ ನಷ್ಟದಲ್ಲಿ ​​ 106 ರನ್​ ಗಳಿಸಿದ್ದ ವೇಳೆ ಮಳೆ ಸುರಿದ ಕಾರಣ, ಫೈನಲ್‌ ಪಂದ್ಯವನ್ನು ಮೀಸಲು ದಿನಕ್ಕೆ ಮುಂದೂಡಲಾಗಿತ್ತು.

ಮಂಗಳವಾರ ಪಂದ್ಯ ಪುನರಾರಂಭವಾಗುತ್ತಿದ್ದಂತೆ ನೇಪಾಳದ ಬೌಲರ್​ ಲಲಿತ್ ರಾಜ್​ಬನ್ಶಿ,  ಯುಎಇಯ ಕೊನೆಯ ವಿಕೆಟ್​ ಕಿತ್ತರು. ಆ ಮೂಲಕ ಯುಎಇ  33.1 ಓವರ್​ನಲ್ಲಿ 117 ರನ್​ಗೆ ಸರ್ವಪತನ ಕಂಡಿತು.

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ಚೆನ್ನೈ ವಿರುದ್ಧ ಅಂತಿಮ ಎಸೆತದಲ್ಲಿ ಗೆದ್ದ ಪಂಜಾಬ್‌!

ಭರ್ಜರಿ ಫಾರ್ಮ್‌ನಲ್ಲಿರುವ ಯುಎಇಯ ಅನುಭವಿ ಬ್ಯಾಟರ್‌ ಆಸಿಫ್‌ ಖಾನ್‌, ಫೈನಲ್‌ ಪಂದ್ಯದಲ್ಲೂ ಏಕಾಂಗಿ ಹೋರಾಟ ನಡೆಸಿದರು. ಎದುರಿಸಿದ 54 ಎಸೆತಗಳಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್‌ ನೆರವಿನಿಂದ 46 ರನ್‌ ಬಾರಿಸಿ ತಂಡದ ಮೊತ್ತವನ್ನು ಮೂರಂಕಿಯ ಗಡಿ ದಾಟಿಸಿದರು.

ನೇಪಾಳದ ಪರ ಲಲಿತ್ ರಾಜ್​ಬನ್ಶಿ 7.1 ಓವರ್‌ನಲ್ಲಿ ಕೇವಲ 14 ರನ್​ ನೀಡಿ 4 ವಿಕೆಟ್​ ಪಡೆದು ಅಮೋಘ​ ಪ್ರದರ್ಶನ ನೀಡಿದರು.

ಅಲ್ಪ ಮೊತ್ತದ ಗುರಿ ಬೆನ್ನತ್ತಿದ ನೇಪಾಳ ತಂಡ ಆರಂಭದಲ್ಲೇ ನಾಯಕ ಕುಶಾಲ್ ಭುರ್ಟೆಲ್ (1), ಆಸಿಫ್ ಶೇಖ್ (8) ಮತ್ತು ನಾಯಕ ರೋಹಿತ್ ಪೌಡೆಲ್ (1)  ವಿಕೆಟ್‌ ಕಳೆದುಕೊಂಡು ಆಘಾತಕ್ಕೊಳಗಾಯಿತು.

8 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 22 ರನ್‌ ಕಲೆಹಾಕಿದ್ದ ತಂಡಕ್ಕೆ ಗುಲ್ಷನ್ ಮತ್ತು ಭೀಮ್‌ ಶಾರ್ಕಿ ಆಸರೆಯಾದರು. 4ನೇ ವಿಕೆಟ್‌ಗೆ 96 ರನ್‌ ಜೊತೆಯಾಟವಾಡಿದ ಈ ಜೋಡಿ 30ನೇ ಓವರ್‌ನಲ್ಲಿ ತಂಡವನ್ನು ಜಯದ ದಡ ಮುಟ್ಟಿಸಿತು.

17 ವರ್ಷ ವಯಸ್ಸಿನ ಗುಲ್ಶನ್ ಝಾ, 84 ಎಸೆತಗಳಲ್ಲಿ 67 ರನ್‌ ಭೀಮ್‌ 72 ಎಸೆತಗಳಲ್ಲಿ 36 ರನ್‌ಗಳಿಸಿ ಅಜೇಯರಾಗುಳಿದರು.  ಯುಎಇ ಪರ ರೋಹನ್ ಮುಸ್ತಫಾ ಎರಡು ವಿಕೆಟ್‌ ಪಡೆದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...