ನ್ಯೂಜಿಲೆಂಡ್‌ vs ಭಾರತ ODI: ಸಿರಾಜ್, ಅಯ್ಯರ್ ತಂಡಕ್ಕೆ ವಾಪಸ್‌; ಬುಮ್ರಾ, ಪಾಂಡ್ಯಗೆ ವಿಶ್ರಾಂತಿ!

Date:

ನ್ಯೂಜಿಲೆಂಡ್‌ ಮತ್ತು ಭಾರತ ಕ್ರಿಕೆಟ್‌ ತಂಡಗಳ ನಡುವೆ ಜನವರಿ 11ರಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಭಾರತದಲ್ಲಿಯೇ ನಡೆಯಲಿರುವ ಸರಣಿಯನ್ನು ಟೀಮ್‌ ಇಂಡಿಯಾ ಗೆಲ್ಲುವ ನಿರೀಕ್ಷೆ ಅಭಿಮಾನಿಗಳಲ್ಲಿದೆ. ಈ ಸರಣಿಯಲ್ಲಿ ಭಾರತೀಯ ವೇಗಿ ಬೌಲರ್‌ ಮೊಹಮ್ಮದ್ ಸಿರಾಜ್ ಅವರು ತಂಡಕ್ಕೆ ಮರಳಿದ್ದಾರೆ. ಗಾಯಗಳ ಕಾರಣಕ್ಕಾಗಿ ಕಳೆದ ಮೂರು ತಿಂಗಳಿನಿಂದ ವಿಶ್ರಾಂತಿಯಲ್ಲಿದ್ದ ಏಕದಿನ ಉಪನಾಯಕ ಶ್ರೇಯಸ್ ಅಯ್ಯರ್ ಕೂಡ ತಂಡಕ್ಕೆ ‘ಕಮ್ ಬ್ಯಾಕ್’ ಮಾಡಿದ್ದಾರೆ. ಇನ್ನು, ಜಸ್ಪ್ರಿತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲಾಗಿದ್ದು, ತಂಡದಲ್ಲಿ ಹೊರಗಿಡಲಾಗಿದೆ.

- Advertisement -

ಕಿವೀಸ್ ವಿರುದ್ಧದ ಏಕದಿನ ಸರಣಿಯು ಜನವರಿ 11ರಂದು ವಡೋದರಾದಲ್ಲಿ ಆರಂಭವಾಗುತ್ತದೆ. ಜನವರಿ 14ರಂದು ರಾಜ್‌ಕೋಟ್ ಮತ್ತು ಜನವರಿ 18ರಂದು ಇಂದೋರ್‌ನಲ್ಲಿ ಪಂದ್ಯಗಳು ನಡೆಯಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸಿರಾಜ್ ಅವರು ಆಸ್ಟ್ರೇಲಿಯಾದಲ್ಲಿ ನಡೆದ ಏಕದಿನ ಸರಣಿಯಲ್ಲಿ ಕೊನೆಯದಾಗಿ ಆಗಿದ್ದರು. ನಂತರದ ದಕ್ಷಿಣ ಆಫ್ರಿಕಾ ಜೊತೆಗಿನ ಟೂರ್ನಿಯಲ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿತ್ತು. ಈವರೆಗೆ 47 ಏಕದಿನ ಪಂದ್ಯಗಳನ್ನು ಆಡಿರುವ ಸಿರಾಜ್, 24.67 ಸರಾಸರಿಯಲ್ಲಿ 73 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

“ಸಿರಾಜ್ ಅವರನ್ನು ದಕ್ಷಿಣ ಆಫ್ರಿಕಾ ಏಕದಿನ ಸರಣಿಯಿಂದ ಕೈಬಿಡಲಾಗಿಲ್ಲ. ಅವರಿಗೆ ವಿಶ್ರಾಂತಿ ನೀಡಲಾಯಿತು. ಅವರು ನಮ್ಮ ವೇಗಿ ಬೌಲರ್‌ಗಳ ಗುಂಪಿನಲ್ಲಿ ಒಬ್ಬರಾಗಿದ್ದಾರೆ. ಇತರ ವೇಗಿಗಳಿಗೆ ಅವಕಾಶ ನೀಡುವ ಉದ್ದೇಶದಿಂದ ಮತ್ತು ಬೌಲರ್‌ಗಳು ಫಿಟ್ ಮತ್ತು ಫ್ರೆಶ್ ಆಗಿರುವಂತೆ ನೋಡಿಕೊಳ್ಳುವ ಕಾರಣಕ್ಕಾಗಿ ಆಗ್ಗಾಗ್ಗೆ ಬದಲಾಯಿಸಲಾಗುತ್ತದೆ” ಎಂದು ಬಿಸಿಸಿಐ ಮೂಲಗಳು ತಿಳಿಸಿರುವುದಾಗಿ ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ಇನ್ನು, ಅಯ್ಯರ್ ಅವರು ಅಕ್ಟೋಬರ್ 25 ರಂದು ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಡೈವಿಂಗ್ ಕ್ಯಾಚ್‌ಗೆ ಪ್ರಯತ್ನಿಸುವಾಗ ಗಾಯಗೊಂಡಿದ್ದರು. ಹೀಗಾಗಿ, ಅವರು ಕಳೆದ ಮೂರು ತಿಂಗಳುಗಳಿಂದ ವಿಶ್ರಾಂತಿಯಲ್ಲಿದ್ದರು. ಈಗ, ಅವರೂ ಕೂಡ ತಂಡಕ್ಕೆ ಮರಳಿದ್ದಾರೆ.

ಈ ಲೇಖನ ಓದಿದ್ದೀರಾ?: 2025ರಲ್ಲಿ ಧರ್ಮಾಧಾರಿತ ಹಿಂಸಾಚಾರ, ಗುಂಪು ದಾಳಿಗಳು ಹೆಚ್ಚಳ !- ವರದಿ

ಆಲ್‌ ರೌಂಡರ್ ಅಟಗಾರ ಹಾರ್ದಿಕ್ ಪಾಂಡ್ಯ ಮತ್ತು ವೇಗಿ ಬೌಲರ್‌ ಜಸ್ಪ್ರೀತ್ ಬುಮ್ರಾ ಇಬ್ಬರಿಗೂ ಕೆಲಸದ ಹೊರೆ ನಿರ್ವಹಿಸಲು ವಿಶ್ರಾಂತಿ ನೀಡಲಾಗಿದೆ. “ಹಾರ್ದಿಕ್ ಪಾಂಡ್ಯ ಮತ್ತು ಬುಮ್ರಾಗೆ ಪಂದ್ಯದಲ್ಲಿ 10 ಓವರ್ ಬೌಲಿಂಗ್ ಮಾಡಲು ಅನುಮತಿ ನೀಡಿಲ್ಲ. ಮುಂಬರುವ ಟಿ20 ವಿಶ್ವಕಪ್‌ಅನ್ನು ಪರಿಗಣಿಸಿ, ಅವರಿಗೆ ವಿಶ್ರಾಂತಿ ನೀಡಲಾಗಿದೆ” ಎಂದು ಬಿಸಿಸಿಐ ತಿಳಿಸಿದೆ.

ಕಿವೀಸ್‌ ವಿರುದ್ಧ ಟೂರ್ನಿಯಲ್ಲಿ ತಂಡವನ್ನು ಶುಭಮನ್ ಗಿಲ್ ಮುನ್ನಡೆಸಲಿದ್ದಾರೆ. ತಂಡದಲ್ಲಿ; ಶುಭಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (WK), ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಕುಲದೀಪ್ ಯಾದವ್, ರಿಷಭ್ ಪಂತ್ (wk), ನಿತೀಶ್ ಕುಮಾರ್ ರೆಡ್ಡಿ, ಅರ್ಶ್‌ದೀಪ್ ಸಿಂಗ್ ಹಾಗೂ ಯಶಸ್ವಿ ಜೈಶ್ವಾಲ್ ಇರಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...