ವಿಶ್ವಕಪ್ | ಶ್ರೀಲಂಕಾ ವಿರುದ್ಧ ಗೆದ್ದು ಸೆಮಿ ಹಾದಿ ಭದ್ರಪಡಿಸಿಕೊಂಡ ಕಿವೀಸ್

Date:

ನ್ಯೂಜಿಲೆಂಡ್ ತಂಡ ಐಸಿಸಿ ವಿಶ್ವಕಪ್‌ ಟೂರ್ನಿಯ ತನ್ನ ಕೊನೆಯ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 5 ವಿಕೆಟ್‌ಗಳ ಅಂತರದಲ್ಲಿ ಜಯಗಳಿಸಿತು. ಈ ಗೆಲುವಿನೊಂದಿಗೆ ಕಿವೀಸ್ ಪಡೆ ತನ್ನ ಸೆಮಿ ಹಾದಿಯನ್ನು ಉತ್ತಮ ರನ್‌ರೇಟ್‌ನೊಂದಿಗೆ ಭದ್ರಪಡಿಸಿಕೊಂಡಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾ ನೀಡಿದ 172 ರನ್‌ಗಳ ಸವಾಲನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ 23.2 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಗೆಲುವಿನ ಗುರಿ ಮುಟ್ಟಿತು.

ನ್ಯೂಜಿಲೆಂಡ್ ಪರ ಡೇರಿಲ್ ಮಿಚೆಲ್ (43), ಟೆವೊನ್‌ ಕಾನ್ವೆ (45), ರಚಿನ್‌ ರವೀಂದ್ರ (42) ಗೆಲುವಿನ ರೂವಾರಿಗಳಾದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಶ್ರೀಲಂಕಾ 7 ಸೋಲು ಹಾಗೂ 2 ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 9 ನೇ ಸ್ಥಾನದೊಂದಿಗೆ ಟೂರ್ನಿಯಿಂದ ನಿರ್ಗಮಿಸಿತು.

ಐದನೇ ಗೆಲುವಿನೊಂದಿಗೆ ಉತ್ತಮ ರನ್‌ರೇಟ್‌ನಲ್ಲಿರುವ ನ್ಯೂಜಿಲೆಂಡ್ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನ ಸೆಮಿಫೈನಲ್‌ ಪ್ರವೇಶಿಸಬೇಕಾದರೆ ಉತ್ತಮ ರನ್‌ ಸರಾಸರಿಯಲ್ಲಿ ತನ್ನ ಎದುರಾಳಿ ತಂಡದ ವಿರುದ್ಧ ಅಮೋಘವಾಗಿ ಜಯ ಸಾಧಿಸಬೇಕಾಗಿದೆ.

ಈ ಸುದ್ದಿ ಓದಿದ್ದೀರಾ? ಒಂದೇ ಬಾಲ್‌ಗೆ ಎರಡು ವಿಕೆಟ್: ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ‘ಟೈಮ್ಡ್ ಔಟ್’ಗೆ ಮ್ಯಾಥ್ಯೂಸ್ ಔಟ್

ಈ ಮೊದಲು ಟಾಸ್‌ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್‌ ವಿಲಿಯಮ್ಸ್‌ನ್ ಶ್ರೀಲಂಕಾ ತಂಡವನ್ನು ಬ್ಯಾಟಿಂಗ್‌ ಆಹ್ವಾನಿಸಿದರು.

ಕೇನ್‌ ವಿಲಿಯಮ್ಸನ್‌ ಲೆಕ್ಕಾಚಾರ ಕೈಹಿಡಿಯಿತು. ಚಿನ್ನಸ್ವಾಮಿಯ ಬ್ಯಾಟಿಂಗ್‌ ಪಿಚ್‌ನಲ್ಲಿ ಬ್ಯಾಟ್‌ ಬೀಸಿದ ಲಂಕಾ ಒಂದರ ಮೇಲೊಂದರಂತೆ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿತು.

ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ ಕಿವೀಸ್‌ ಬೌಲರ್‌ಗಳ ದಾಳಿಗೆ ತತ್ತರಿಸಿ 46.4 ಓವರ್‌ಗಳಲ್ಲಿ 171 ರನ್‌ ಗಳಿಸಿ ಆಲೌಟ್ ಆಯಿತು.

ಕುಸಾಲ್‌ ಪೆರೇರಾ (51), ಮಹೇಶ್ ತೀಕ್ಷಣ (38) ರನ್‌ ಗಳಿಸಿದ್ದನ್ಬು ಬಿಟ್ಟರೆ ಉಳಿದ ಬ್ಯಾಟ್ಸ್ಮನ್‌ಗಳ್ಯಾರು 20ರ ಗಡಿ ದಾಟಲಿಲ್ಲ.

ಕಿವೀಸ್‌ ಪರ ಬೋಲ್ಟ್‌ 3 ವಿಕೆಟ್‌ ಪಡೆದರೆ, ಫರ್ಗ್ಯಸನ್‌, ಸ್ಯಾಂಟ್ನರ್‌ ಹಾಗೂ ರವೀಂದ್ರ ತಲಾ 2 ವಿಕೆಟ್‌ ಪಡೆದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಂಬಲ್ಡನ್ ಛಾಂಪಿಯನ್ ಕಾರ್ಲೋಸ್ ಅಲ್ಕರಾಜ್ – ವಿಶ್ವ ಟೆನಿಸ್ ಯುಗದ ಅದ್ಭುತ ಪ್ರತಿಭೆ

ವಿಶ್ವ ಟೆನಿಸ್ ಯುಗದಲ್ಲಿ ಮತ್ತೊಂದು ಹೊಸದೊಂದು ಪ್ರತಿಭೆ ಪ್ರಜ್ವಲಿಸುತ್ತಿದೆ. 21 ವರ್ಷದ...

ಸ್ಪೇನ್‌ಗೆ ನಾಲ್ಕನೇ ಬಾರಿ ಯೂರೋ ಕಪ್; ಸತತ 2ನೇ ಬಾರಿ ಸೋತ ಇಂಗ್ಲೆಂಡ್

ಯುರೋಪ್‌ನ ಅತಿ ದೊಡ್ಡ ಫುಟ್ಬಾಲ್ ಪಂದ್ಯಾವಳಿ ಯೂರೋ ಕಪ್‌ ಪ್ರಶಸ್ತಿಯನ್ನು ಸ್ಪೇನ್‌...

ಜೊಕೊವಿಚ್ ಮಣಿಸಿದ ಸ್ಪೇನ್‌ನ ಕಾರ್ಲೋಸ್ ಅಲ್ಕರಾಜ್‌ಗೆ ವಿಂಬಲ್ಡನ್ ಕಿರೀಟ

ಸ್ಪೇನ್‌ನ ಕಾರ್ಲೋಸ್‌ ಅಲ್ಕರಾಜ್‌ ಅವರು ಭಾನುವಾರ(ಜು.14) ನಡೆದ ವಿಂಬಲ್ಡನ್‌ ಫೈನಲ್‌ನಲ್ಲಿ ನೇರ...

ಸಾಂಘಿಕ ಹೋರಾಟದಿಂದ ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಗೆಲುವು: ಟೀಂ ಇಂಡಿಯಾಗೆ 4-1 ಟಿ20 ಸರಣಿ

ಭಾರತ ತಂಡ ಜಿಂಬಾಬ್ವೆ ವಿರುದ್ಧದ ಐದನೇ ಪಂದ್ಯದಲ್ಲಿ 42 ರನ್‌ಗಳ ಅಂತರದಲ್ಲಿ...