ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಂದು ಭಾರತ ಆರಂಭಿಕ ಆಘಾತ ಅನುಭವಿಸಿದೆ. ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.
ಭಾರತವು 10 ಓವರ್‌ಗಳಲ್ಲಿಯೇ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೀಡಾಗಿದೆ. ನಾಯಕ ರೋಹಿತ್ ಶರ್ಮಾ 2 ರನ್‌ಗೆ ಸೌತಿ ಬೌಲಿಂಗ್‌ನಲ್ಲಿ ಬೌಲ್ಡ್ ಆದರೆ, ಪ್ರಮುಖ ಬ್ಯಾಟರ್ ವಿರಾಟ್ ಕೊಹ್ಲಿ ಹಾಗೂ ಬಡ್ತಿ ಪಡೆದು ಬಂದಿದ್ದ ಸರ್ಫರಾಜ್ ಖಾನ್ ಶೂನ್ಯ ರನ್‌ಗಳಿಗೆ ಪೆವಿಲಿಯನ್‌ಗೆ ತೆರಳಿದರು.
ಬುಧವಾರದಿಂದ ಆರಂಭವಾಗಬೇಕಿದ್ದ ಈ ಪಂದ್ಯದ ಮೊದಲ ದಿನದಾಟವು ಮಳೆಯಿಂದಾಗಿ ರದ್ದಾಗಿತ್ತು.ಈ ಪಂದ್ಯದಿಂದ ಟೀಮ್ ಇಂಡಿಯಾದ ಯುವ ಆಟಗಾರ ಶುಭ್ಮನ್ ಗಿಲ್ ಹೊರಗುಳಿದಿದ್ದಾರೆ.
ಈ ಸುದ್ದಿ ಓದಿದ್ದೀರಾ? ತೆಲಂಗಾಣ ಡಿಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡ ಕ್ರಿಕೆಟಿಗ ಮೊಹಮ್ಮದ್ ಸಿರಾಜ್
ಕತ್ತು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಶುಭ್ಮನ್ ಗಿಲ್ಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಬದಲಿಗೆ ಮತ್ತೋರ್ವ ಯುವ ದಾಂಡಿಗ ಸರ್ಫರಾಝ್ ಖಾನ್ಗೆ ಆಡುವ ಬಳಗದಲ್ಲಿ ಅವಕಾಶ ನೀಡಲಾಗಿದೆ. ಹಾಗೆಯೇ ಬಾಂಗ್ಲಾದೇಶದ ವಿರುದ್ಧ ಕಣಕ್ಕಿಳಿದಿದ್ದ ಆಕಾಶ್ ದೀಪ್ ಬದಲಿಗೆ ಕುಲ್‌ದೀಪ್ ಯಾದವ್ ಸ್ಥಾನ ಪಡೆದಿದ್ದಾರೆ. ಫಿಟ್ನೆಸ್ ಸಮಸ್ಯೆಯ ಕಾರಣ ಈ ಪಂದ್ಯದಿಂದ ನ್ಯೂಜಿಲೆಂಡ್ ತಂಡದ ಸ್ಟಾರ್ ಆಟಗಾರ ಕೇನ್ ವಿಲಿಯಮ್ಸನ್ ಹೊರಗುಳಿದಿದ್ದಾರೆ
ಉಭಯ ತಂಡಗಳ ಆಡುವ 11ರ ಬಳಗ
ಭಾರತ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸರ್ಫರಾಝ್ ಖಾನ್, ರಿಷಭ್ ಪಂತ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹಾಗೂ ಕುಲ್ದೀಪ್ ಯಾದವ್.
ನ್ಯೂಜಿಲೆಂಡ್: ಟಾಮ್ ಲ್ಯಾಥಮ್ (ನಾಯಕ), ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಅಜಾಝ್ ಪಟೇಲ್, ವಿಲಿಯಂ ಒರೋಕ್.
