ಬೆಂಗಳೂರು ಟೆಸ್ಟ್: ಭಾರತದ ವಿರುದ್ಧ ನ್ಯೂಜಿಲೆಂಡ್‌ಗೆ ಸುಲಭ ಗೆಲುವು

Date:

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನಲ್ಲಿ ಭಾರತದ ವಿರುದ್ಧ ನ್ಯೂಜಿಲೆಂಡ್‌ 8 ವಿಕೆಟ್‌ಗಳ ಅಂತರದ ಗೆಲುವು ದಾಖಲಿಸಿದೆ. ಈ ಜಯದ ಮೂಲದ ಕಿವೀಸ್‌ ತಂಡ 1988ರ ರ ನಂತರ ಮೊದಲ ಬಾರಿಗೆ ಭಾರತದಲ್ಲಿ ಗೆದ್ದಿದೆ. 1988ರ ನಂತರ ನ್ಯೂಜಿಲೆಂಡ್‌ ತಂಡ ಭಾರತದಲ್ಲಿ ಯಾವುದೇ ಟೆಸ್ಟ್‌ನಲ್ಲಿ ಗೆಲುವು ಗಳಿಸಿರಲಿಲ್ಲ.

- Advertisement -

ಕೊನೆಯ ಹಾಗೂ ಐದನೇ ದಿನವಾದ ಇಂದು ಟೀಂ ಇಂಡಿಯಾ ನೀಡಿದ್ದ 107 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಕಿವೀಸ್‌ ಪಡೆ ತನ್ನ 2ನೇ ಇನಿಂಗ್ಸ್‌ನಲ್ಲಿ 27.4 ಓವರ್‌ಗಳಲ್ಲಿ 2 ವಿಕೆಟ್‌ಗಳನ್ನು ಕಳೆದುಕೊಂಡು ಸುಲಭವಾಗಿ ಜಯಗಳಿಸಿತು. ವಿಲ್‌ ಯಂಗ್‌ ಅಜೇಯ (48) ಹಾಗೂ ರಚಿನ್‌ ರವೀಂದ್ರ ಅಜೇಯ (39) ರನ್‌ ಗಳಿಸಿ ನ್ಯೂಜಿಲೆಂಡ್‌ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಮೂಲಕ ಕಿವೀಸ್‌ ಪಡೆ ಮೂರು ಟೆಸ್ಟ್‌ಗಳ ಸರಣಿಯಲ್ಲಿ 1-0 ಮುನ್ನಡೆ ಪಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಸುದ್ದಿ ಓದಿದ್ದೀರಾ? ತೆಲಂಗಾಣ ಡಿಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡ ಕ್ರಿಕೆಟಿಗ ಮೊಹಮ್ಮದ್ ಸಿರಾಜ್‌

ಭಾರತ ತಂಡದವರು ಮೊದಲ ಇನಿಂಗ್ಸ್‌ನಲ್ಲಿ ಕಳೆಪೆ ಪ್ರದರ್ಶನ ನೀಡಿ 46 ರನ್‌ಗಳಿಗೆ ಆಲೌಟ್‌ ಆಗಿದ್ದರು. ಇದಕ್ಕೆ ಉತ್ತರವಾಗಿ ನ್ಯೂಜಿಲೆಂಡ್‌ ತಂಡ ರಚಿನ್‌ ರವಿಂದ್ರ ಶತಕ, ಡೇವಿಡ್‌ ಕಾನ್ವೆ ಹಾಗೂ ಟಿಮ್‌ ಸೌಥಿ ಅವರ ಆಕರ್ಷಕ ಅರ್ಧ ಶತಕಗಳ ನೆರವಿನಿಂದ ಮೊದಲ ಇನಿಂಗ್ಸ್‌ನಲ್ಲಿ 402 ರನ್‌ ಪೇರಿಸಿ 356 ರನ್‌ಗಳ ಬೃಹತ್‌ ಮುನ್ನಡೆ ಪಡೆದಿದ್ದರು.

ಎರಡನೇ ಇನಿಂಗ್ಸ್ ಆಡಿದ್ದ ಭಾರತ ತಂಡ ಸರ್ಫರಾಜ್‌ ಖಾನ್‌ ಭರ್ಜರಿ ಶತಕ,ರಿಷಬ್‌ ಪಂತ್‌, ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಅವರ ಅರ್ಧ ಶತಕಗಳು ದಾಖಲಿಸಿದ ಪರಿಣಾಮ 462 ರನ್‌ ಬಾರಿಸಿ ಪ್ರವಾಸಿ ನ್ಯೂಜಿಲೆಂಡ್‌ ತಂಡಕ್ಕೆ 107 ರನ್‌ ಗುರಿ ನೀಡಿದ್ದರು.

ಸಾಧಾರಣ ಗುರಿಯಾದ ಕಾರಣ ನ್ಯೂಜಿಲೆಂಡ್‌ ತಂಡ ಸುಲಭವಾಗಿ ಗೆಲುವು ಪಡೆದಿದೆ. ಟೀಂ ಇಂಡಿಯಾ ಪರ ಜಸ್‌ಪ್ರೀತ್‌ ಬುಮ್ರಾ 2 ವಿಕೆಟ್‌ ಪಡೆದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲು ದೆಹಲಿ ಪೊಲೀಸರು ಅನುಮತಿ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...