ಚುನಾವಣೆ ನಡೆಸಲು ವಿಫಲ: ವಿಶ್ವ ಕುಸ್ತಿ ಫೆಡರೇಷನ್‌ನಿಂದ ಭಾರತೀಯ ಕುಸ್ತಿ ಫೆಡರೇಷನ್ ಸದಸ್ಯತ್ವ ರದ್ದು

Date:

ನಿಗದಿತ ಸಮಯಕ್ಕೆ ಚುನಾವಣೆಗಳನ್ನು ನಡೆಸಲು ವಿಫಲವಾದ ಹಿನ್ನಲೆಯಲ್ಲಿ ಭಾರತೀಯ ಕುಸ್ತಿ ಫೆಡರೇಷನ್(ಡಬ್ಲ್ಯೂಎಫ್‌ಐ) ವಿರುದ್ಧ ವಿಶ್ವ ಕುಸ್ತಿ ಫೆಡರೇಷನ್‌ ಕಠಿಣ ಕ್ರಮ ಕೈಗೊಂಡಿದ್ದು, ಡಬ್ಲ್ಯೂಎಫ್‌ಐ ಸದಸ್ಯತ್ವವನ್ನು ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದೆ.

ಭಾರತದ ಕುಸ್ತಿ ಆಡಳಿತ ಮಂಡಳಿಯಾಗಿರುವ ಡಬ್ಲ್ಯೂಎಫ್‌ಐ ಜೂನ್ 2023 ರಲ್ಲಿ ಚುನಾವಣೆಗಳನ್ನು ನಡೆಸಬೇಕಿತ್ತು. ಆದಾಗ್ಯೂ, ಭಾರತೀಯ ಕುಸ್ತಿಪಟುಗಳ ಸರಣಿ ಪ್ರತಿಭಟನೆಗಳು ಮತ್ತು ವಿವಿಧ ರಾಜ್ಯ ಘಟಕಗಳ ಕಾನೂನು ಅರ್ಜಿಗಳ ಕಾರಣದಿಂದಾಗಿ ಚುನಾವಣೆಗಳನ್ನು ಪದೇ ಪದೇ ಮುಂದೂಡಲಾಗಿದೆ.

ಭಾರತದ ಪ್ರಮುಖ ಕುಸ್ತಿಪಟುಗಳು ಅದರ ಕಾರ್ಯನಿರ್ವಹಣೆಯ ವಿರುದ್ಧ ಪ್ರತಿಭಟಿಸಿದ ನಂತರ ಹಾಗೂ ಅದರ ಆಗಿನ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್, ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದಾಗ ಭಾರತೀಯ ಕುಸ್ತಿ ಫೆಡರೇಷನ್ ಅನ್ನು ಮೊದಲು ಜನವರಿಯಲ್ಲಿ ಹಾಗೂ ನಂತರ ಮೇ ತಿಂಗಳಲ್ಲಿ ಅಮಾನತುಗೊಳಿಸಲಾಗಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಕಾವೇರಿ ನೀರು ವಿವಾದ: ಸುಪ್ರೀಂಕೋರ್ಟ್‌ಗೆ ಕರ್ನಾಟಕ ಅಫಿಡೆವಿಟ್ ಸಲ್ಲಿಕೆ

ಪ್ರಸ್ತುತ ಭಾರತೀಯ ಒಲಿಂಪಿಕ್ ಅಸೋಸಿಯೇಶನ್-ರಚಿತವಾದ ಭೂಪೇಂದರ್ ಸಿಂಗ್ ಬಾಜ್ವಾ ನೇತೃತ್ವದ ಸಮಿತಿಯು ಡಬ್ಲ್ಯುಎಫ್ಐನ ದಿನನಿತ್ಯದ ವ್ಯವಹಾರಗಳನ್ನು ನಿರ್ವಹಿಸುತ್ತಿದೆ.

ಚುನಾವಣೆಗಳು ವಿಳಂಬವಾದರೆ ಅಮಾನತುಗೊಳಿಸುವುದಾಗಿ ಡಬ್ಲ್ಯುಎಫ್‌ಐಗೆ ವಿಶ್ವ ಕುಸ್ತಿ ಫೆಡರೇಷನ್‌ ಈ ಹಿಂದೆ ನೋಟಿಸ್ ನೀಡಿತ್ತು. ಅಲ್ಲದೆ ಮುಂದಿನ 45 ದಿನಗಳಲ್ಲಿ (ಜುಲೈ 15 ರೊಳಗೆ) ಭಾರತದ ಕುಸ್ತಿ ಫೆಡರೇಶನ್‌ಗೆ ಚುನಾವಣೆ ನಡೆಯದಿದ್ದರೆ ಸದಸ್ಯತ್ವವನ್ನು ರದ್ದುಗೊಳಿಸಲಾಗುವುದು ಎಂದು ಮೇ 30 ರಂದು ಎಚ್ಚರಿಕೆಯನ್ನೂ ನೀಡಿತ್ತು.

ಈ ಹಿಂದೆ ಫೆಡರೇಷನ್ ಅಧ್ಯಕ್ಷರಾಗಿದ್ದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳ ಆರೋಪ ಮಾಡಿದ ಹಿನ್ನೆಲೆಯಲ್ಲಿ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಜುಲೈ 11 ರಂದು ಚುನಾವಣೆ ನಡೆಯಬೇಕಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ...

ಐಪಿಎಲ್ | ಹೈದರಾಬಾದ್ ನೀಡಿದ್ದ ಬೃಹತ್ ಗುರಿ ಮುಟ್ಟಲು ಎಡವಿದ ಡೆಲ್ಲಿ ಕ್ಯಾಪಿಟಲ್ಸ್‌: 67 ರನ್‌ಗಳ ಸೋಲು

ಇಂದು ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಡೆಲ್ಲಿ...

ಮಹಿಳೆಯರ ಕುಸ್ತಿ | ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ರೀತಿಕಾ ಹೂಡಾ, ಅಂಶು ಮಲಿಕ್

ಕಝಕಿಸ್ತಾನದ ಬಿಸ್ಕೆಕ್‌ನಲ್ಲಿ ನಡೆದ ಏಷ್ಯನ್ ಒಲಿಂಪಿಕ್ಸ್‌ನ ಏಷ್ಯನ್ ಅರ್ಹತಾ ಸುತ್ತಿನ ಪಂದ್ಯಾವಳಿಯಲ್ಲಿ...

ಐಪಿಎಲ್ | ‘ಪವರ್ ಪ್ಲೇ’ಯಲ್ಲಿ 125 ರನ್ ಚಚ್ಚಿದ ಹೈದರಾಬಾದ್: T20 ಇತಿಹಾಸದಲ್ಲೇ ಹೊಸ ದಾಖಲೆ

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್‌)ನ...